ಚಿತ್ರದುರ್ಗ: ಈದ್ ಪ್ರಾರ್ಥನೆ ವೇಳೆ ನೆರೆ ಸಂತ್ರಸ್ತರಿಗೆ ದೇಣಿಗೆ ಸಂಗ್ರಹ
ಚಿತ್ರದುರ್ಗದ ಹೊಸದುರ್ಗದಲ್ಲಿ ಬಕ್ರೀದ್ ಹಬ್ಬದ ಸಂದರ್ಭ ನೆರೆ ಸಂತ್ರಸ್ತರಿಗಾಗಿ 23,500 ರೂಪಾಯಿ ದೇಣಿಗೆ ಸಂಗ್ರಹಿಸಲಾಯಿತು. ಜತೆಗೆ ಉತ್ತರ ಕರ್ನಾಟಕದ ಜನರು ಸಂಕಷ್ಟದಲ್ಲಿದ್ದು, ಈ ಬಾರಿಯ ಹಬ್ಬ ಸರಳವಾಗಿ ಆಚರಿಸಿ ನೆರೆ ಸಂತ್ರಸ್ತರಿಗೆ ನೆರವಾಗಬೇಕು ಎಂದು ಧರ್ಮಗುರುಗಳು ಸಮುದಾಯಕ್ಕೆ ಸಲಹೆ ನೀಡಿದರು.
ಚಿತ್ರದುರ್ಗ(ಆ.13): ಹೊಸದುರ್ಗ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಸೋಮವಾರ ಬಕ್ರಿದ್ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಿದರು.
ಹಬ್ಬದ ಅಂಗವಾಗಿ ಪಟ್ಟಣದ ವಿವಿಧ ಬಡಾವಣೆಗಳಲ್ಲಿರುವ ಮಸೀದಿಗಳಿಂದ ಮೆರವಣಿಗೆಯ ಮೂಲಕ ಗೌಸಿಯಾ ಶಾದಿ ಮಹಲ್ ಪಕ್ಕದಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಶುಭಾಶಯಗಳನ್ನು ಕೋರಿದರು.
ಪ್ರವಾಹದಲ್ಲಿ ಕೊಚ್ಚಿ ಹೋಯ್ತು ವಿದ್ಯಾರ್ಥಿನಿ ಕನಸು!
ಈ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಭೀಕರ ಪ್ರವಾಹದಿಂದ ಹಾನಿಗೊಳಗಾದ ನೆರೆ ಸಂತ್ರಸ್ತರಿಗೆ ನೆರವು ನೀಡಲು 23,500 ಸಾವಿರ ರು. ಸಂಗ್ರಹಿಸಲಾಯಿತು. ಜತೆಗೆ ಉತ್ತರ ಕರ್ನಾಟಕದ ಜನರು ಸಂಕಷ್ಟದಲ್ಲಿದ್ದು, ಈ ಬಾರಿಯ ಹಬ್ಬ ಸರಳವಾಗಿ ಆಚರಿಸಿ ನೆರೆ ಸಂತ್ರಸ್ತರಿಗೆ ನೆರವಾಗಬೇಕು ಎಂದು ಧರ್ಮಗುರುಗಳು ಸಮುದಾಯಕ್ಕೆ ಸಲಹೆ ನೀಡಿದರು.
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಈ ವೇಳೆ ಜಾಮೀಯ ಮಸೀದಿ ಅಧ್ಯಕ್ಷ ಮುಜೀದ್ ಬಾಷಾ, ಕಾರ್ಯದರ್ಶಿ ಸೈಪುಲ್ಲಾ, ಸಮಸ್ತ ಮುಸ್ಲಿಂ ಬಾಂಧವರು ಹಾಜರಿದ್ದರು.