ಬೆಂಗಳೂರು, (ಜ.07): ನಗರದ ಸಿಟಿ ಮಾರ್ಕೆಟ್ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ  ಬಿ.ಜಿ. ಕುಮಾರಸ್ವಾಮಿ ಅವರು ರಾಷ್ಟ್ರಪತಿ ಪದಕ ಭಾಜನರಾಗಿದ್ದು, ಅವರಿಗೆ ಪದಕ ನೀಡಿ ಗೌರವಿಸಲಾಯ್ತು.

ಇಂದು (ಗುರುವಾರ) ನಡೆದ ರಾಷ್ಟ್ರಪತಿ ಪದಕ ಪ್ರಧಾನ ಸಮಾರಂಭದಲ್ಲಿ ಇನ್ಸ್‌ಪೆಕ್ಟರ್ ಬಿ.ಜಿ. ಕುಮಾರಸ್ವಾಮಿ ಅವರಿಗೆ ರಾಜ್ಯಪಾಲ ವಾಜುಬಾಯಿ ವಾಲಾ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪದಕ ನೀಡಿ ಗೌರವಿಸಿದರು.

ಇದು ಸರ್ವ ಶ್ರೇಷ್ಠ ಪದಕವಾಗಿದ್ದು, ಪೊಲೀಸ್ ಇಲಾಖೆಯಲ್ಲಿ ದಕ್ಷ, ಪ್ರಾಮಾಣಿಕ,ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳಿಗೆ ಪದಕ ನೀಡಲಾಗುತ್ತಿದೆ. 

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಶೈಕ್ಷಣಿಕ ದಾಖಲೆಗಳ ಭದ್ರತೆಗೆ ಡಿಜಿ ಲಾಕರ್ ವ್ಯವಸ್ಥೆ

ಅದರಂತೆ ಸಿಟಿ ಮಾರ್ಕೆಟ್ ಪೊಲೀಸ್ ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ಅವರ ದಕ್ಷ, ಪ್ರಾಮಾಣಿಕ,ಕರ್ತವ್ಯವನ್ನು ಮೆಚ್ಚಿ ಈ ಪದಕ ನೀಡಲಾಗಿದೆ.