ಬೆಳಗಾವಿ(ಜು.19): ಮಹಾನಗರ ಪಾಲಿಕೆ ತ್ಯಾಜ್ಯ ವಿಲೇವಾರಿ ವಾಹನದಿಂದ ಬಿದ್ದು ಪೌರಕಾರ್ಮಿಕನೊಬ್ಬ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದ ಘಟನೆ ಇಂದು(ಭಾನುವಾರ) ನಡೆದಿದೆ. 

ನಗರದ ಜಿಲ್ಲಾಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದ ಪೌರಕಾರ್ಮಿಕರು ಮೃತ ಪೌರ ಕಾರ್ಮಿಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಬೆಳಗಾವಿ: ಕಾಂಗ್ರೆಸ್‌ ಶಾಸಕನಿಗೆ ಅಂಟಿದ ಕೊರೋನಾ ಸೋಂಕು, ಹೆಚ್ಚಿದ ಆತಂಕ..!

ಇಂದು ಬೆಳಗ್ಗೆ ಮಹಾನಗರ ಪಾಲಿಕೆ ತ್ಯಾಜ್ಯ ವಿಲೇವಾರಿ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಈ ವೇಳೆ ಗಂಭೀರವಾಗಿ ಗಾಯಗೊ೦ಡಿದ್ದ ಪೌರಕಾರ್ಮಿಕ ಜಿತೇಂದ್ರ ಡಾವಳೆ(35) ಮೃತಪಟ್ಟಿದ್ದರು.