Asianet Suvarna News Asianet Suvarna News

ದಾರಿ ಬಿಡುವ ವಿಚಾರಕ್ಕೆ ಕಿರಿಕ್: ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಮಧ್ಯೆ ಹೊಡೆದಾಟ

ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಚಿಂತಾಮಣಿ ತಾಲೂಕು ಮೂಗಲಮರೆ ಗ್ರಾಮದಲ್ಲಿ ನಡೆದಿದೆ. 

Clash between Congress and JDS workers In chintamani akb
Author
Chintamani, First Published Aug 7, 2022, 11:41 AM IST

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಚಿಂತಾಮಣಿ ತಾಲೂಕು ಮೂಗಲಮರೆ ಗ್ರಾಮದಲ್ಲಿ ನಡೆದಿದೆ. ಸಿದ್ದರಾಮೋತ್ಸವಕ್ಕೆ ತೆರಳಲು ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಆಗಮನ ವೇಳೆ ನಡೆದ ಬೈಕ್ ಜಾಥಾ ವೇಳೆ ದಾರಿ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ. ಚಿಂತಾಮಣಿ ತಾಲೂಕು ಮೂಗಲಮರೆ ಗ್ರಾಮದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. 

ಮಾಜಿ ಶಾಸಕ ಡಾ. ಎಂ.ಸಿ. ಸುಧಾಕರ್ ಹಾಲಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಬೆಂಬಲಿಗರ ನಡುವೆ ಭಾರೀ ಮಾರಾಮಾರಿ ನಡೆದಿದೆ. ಗಲಾಟೆಯಲ್ಲಿ ಒಟ್ಟು ಎಂಟು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಐವರು, ಜೆಡಿಎಸ್ ಪಕ್ಷದ ಮೂವರಿಗೆ ಗಾಯಗಳಾಗಿವೆ. ಜೆಡಿಎಸ್ ಪಕ್ಷದ ಗಾಯಾಳುಗಳನ್ನು ನೋಡಲು ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಮಾತುಕತೆ ನಡೆಸಿ, ಗಾಯಾಳುಗಳ ಕ್ಷೇಮ ವಿಚಾರಿಸಿದ್ದಾರೆ. ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ದರಾಮೋತ್ಸವಕ್ಕೆ ಹರಿದು ಬಂದ 10 ಲಕ್ಷ ಜನ: ಜನಸ್ತೋಮ ನೋಡಿ ಕಾಂಗ್ರೆಸ್ಸಿಗರಿಗೇ ಅಚ್ಚರಿ..!

ಕಚೇರಿಗೆ ಬೀಗ ಜಡಿದು ಪ್ರತಿಭಟನೆ
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ನಿನ್ನೆ ನಗರಕ್ಕೆ ಭೇಟಿ ನೀಡಿದ ವೇಳೆ ಕಾರ್ಯಕರ್ತರಿಗೆ ಪಾಸ್ ಗಳನ್ನು ನೀಡದೆ ರಾಹುಲ್ ಗಾಂಧಿ ಭೇಟಿ ಮಾಡಲು ಅನುವು ಮಾಡಿಕೊಡದ ಹಿನ್ನೆಲೆಯಲ್ಲಿ ಕಾಂಗ್ರೆಸ್  ಜಿಲ್ಲಾಧ್ಯಕ್ಷ ಎಂ.ಕೆ.ತಾಜ್ ಪೀರ್ ವಿರುದ್ಧ ಪಕ್ಷದ SC-ST ಸೆಲ್ ಸೇರಿದಂತೆ ವಿವಿಧ ವಿಭಾಗಗಳ ಮುಖಂಡರು ಜಿಲ್ಲಾ ಕಾಂಗ್ರೆಸ್  ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.

ನಗರದ ಮುರುಘಾ ಮಠಕ್ಕೆ ನಿನ್ನೆ ರಾಹುಲ್ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಭೇಟಿ ಮಾಡಿದ ವೇಳೆ ಕಾಂಗ್ರೆಸ್  ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿದರು. ಈ ವೇಳೆ ಬೀಗಿ ಪೊಲೀಸ್ ಬಂದೋಬಸ್ತ್ ಇದ್ದಿದ್ದರಿಂದ ಕೇವಲ ಪಾಸ್ ಗಳನ್ನು ಪಡೆದಿದ್ದ ಮುಖಂಡರು ಹಾಗೂ ಕಾರ್ಯಕರ್ಯರನ್ನು ಮಾತ್ರ ಮಠದ ಒಳಗಡೆ ಪೊಲೀಸರು ಬಿಟ್ಟಿದ್ದರು. ಪಕ್ಷದ SC-ST ಸೆಲ್ ಸೇರಿದಂತೆ ವಿವಿಧ ವಿಭಾಗಗಳ ಮುಖಂಡರು, ಪಾಸ್ ಗಳು ಸಿಗದ ಕಾರಣ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಇದಕ್ಕೆ ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್ ಪೀರ್ ಅವರೆ ಕಾರಣ. ನಮಗೆ ಪಾಸ್ ಗಳನ್ನು ನೀಡದೆ, ತಮಗೆ ಹತ್ತಿರ ಆದವರಿಗೆ ಮತ್ತು ಇಷ್ಟ ಬಂದವರಿಗೆ ಮಾತ್ರ ಪಾಸ್ ಗಳನ್ನು ನೀಡಿ, ತಾರತಮ್ಯ ಮಾಡಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದರು.

ಸಿದ್ದರಾಮೋತ್ಸವ ಎಫೆಕ್ಟ್‌: ಪುಣೆ- ಬೆಂಗಳೂರು ಹೆದ್ದಾರಿಯಲ್ಲಿ 20 ಕಿ.ಮೀ. ಟ್ರಾಫಿಕ್‌ ಜಾಮ್‌

ಇವರ ಧೋರಣೆ ಸರಿ ಅಲ್ಲ ಎಂದು ತಾಜ್ ಪೀರ್ ವಿರುದ್ದ ಘೋಷಣೆಗಳನ್ನು ಕೂಗಿದ ಪಕ್ಷದ SC-ST ಸೆಲ್ ಸೇರಿದಂತೆ ವಿವಿಧ ವಿಭಾಗಗಳ ಮುಖಂಡರು ತಾಜ್ ಪೀರ್ ಅವರನ್ನು ಕಚೇರಿ ಒಳಗೆ ಹೋಗದಂತೆ ತಡೆದು ಕಚೇರಿಗೆ ಬೀಗ ಹಾಕಿದರು. ಈ ವೇಳೆ ತಾಜ್ ಪೀರ್ ಮತ್ತು ಮುಖಂಡರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ನಂತರ ತಾಜ್ ಪೀರ್ ಮಾತನಾಡಿ, ಪಕ್ಷದ ಹೈಕಮಾಂಡ್ ಹೇಳಿದಂತೆ ನಾನು ಕಾರ್ಯನಿರ್ವಹಿಸಿದ್ದು, ಇದನ್ನು ಅವರಲ್ಲಿ ಚರ್ಚಿಸುವುದಾಗಿ ಹೇಳಿ ಪ್ರತಿಭಟನಾ ನಿರತ ಕಾರ್ಯಕರ್ತರು ಹಾಗೂ ಮುಖಂಡರನ್ನು ಸಮಾಧಾನಪಡಿಸಿದರು.

ಆಗಸ್ಟ್‌ 3ರಂದು ದಾವಣಗೆರೆಯಲ್ಲಿ ನಡೆದ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ 75ನೇ ವರ್ಷದ ಹುಟ್ಟುಹಬ್ಬ ಹಾಗೂ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಲಕ್ಷಾಂತರ ಜನ ಸೇರಿದ್ದರು. ಸಮಾವೇಶದಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ನಿರಂತರ ದಾಸೋಹ ನಡೆದಿದ್ದು, ಬರೋಬ್ಬರಿ ಏಳು ಲಕ್ಷಕ್ಕೂ ಅಧಿಕ ಜನ ಊಟ ಮಾಡಿದ್ದಾರೆ. ಮುಖ್ಯ ಅತಿಥಿ, ಗಣ್ಯ ವ್ಯಕ್ತಿಗಳಿಗೆ ಕಾರ್ಯಕ್ರಮದ ಆವರಣದಲ್ಲಿ ವಿಶೇಷ ಊಟದ ವ್ಯವಸ್ಥೆ ಮಾಡಿರಲಿಲ್ಲ. ತನ್ಮೂಲಕ ಗಣ್ಯ ವ್ಯಕ್ತಿಗಳಿಂದ ಸಾಮಾನ್ಯವರೆಗೆ ಎಲ್ಲರಿಗೂ ಒಂದೇ ರೀತಿಯ ಊಟ ಬಡಿಸುವ ಮೂಲಕ ಸಮಾನತೆ ಸಾರುವ ಪ್ರಯತ್ನ ಮಾಡಲಾಯಿತು.
 

Follow Us:
Download App:
  • android
  • ios