ಗದಗ ಜಿಲ್ಲೆ ರೋಣ ತಾಲೂಕಿನ ಮೆಣಸಗಿಯಲ್ಲಿ ನಡೆದ ಘಟನೆ| ಅರ್ಧ ಗಂಟೆ ಮತದಾನ ಸ್ಥಗಿತ| ಬಿಜೆಪಿ ಜಿಪಂ ಸದಸ್ಯ ಮತದಾನ ಮಾಡಲು ತೆರಳಿದ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಆಕ್ಷೇಪ|
ರೋಣ(ಡಿ.28): ಮತದಾನ ವಿಷಯಕ್ಕೆ ಸಂಬಂಧಿಸಿದಂತೆ ಗದಗ ಜಿಲ್ಲೆ ರೋಣ ತಾಲೂಕಿನ ಮೆಣಸಗಿಯಲ್ಲಿ ಭಾನುವಾರ ಬೆಳಗ್ಗೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದ್ದು, ಜಿಪಂ ಸದಸ್ಯ ಶಿವಕುಮಾರ್ ನೀಲಗುಂದ ಗಾಯಗೊಂಡಿದ್ದಾರೆ.
ಈ ವೇಳೆ ಲಘು ಲಾಠಿ ಪ್ರಹಾರ ಮಾಡಿ, ಘಟನೆಯಲ್ಲಿ ಪಾಲ್ಗೊಂಡಿದ್ದ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಅರ್ಧ ಗಂಟೆ ಮತದಾನ ಸ್ಥಗಿತಗೊಳಿಸಲಾಗಿತ್ತು.
ಗ್ರಾಮ ಪಂಚಾಯ್ತಿ ಚುನಾವಣೆ: ಒಂದಕ್ಕೆ ಬಟನ್ ಒತ್ತಿದ್ರೆ ಇಬ್ಬರಿಗೆ ಮತ
ಬಿಜೆಪಿ ಜಿಪಂ ಸದಸ್ಯ ಮತದಾನ ಮಾಡಲು ತೆರಳಿದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ವಾಗ್ವಾದ ನಡೆಸಿದರು. ಆ ಬಳಿಕ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 28, 2020, 10:01 AM IST