ಮೈಸೂರು (ಡಿ.01): ಜಿಲ್ಲೆಯ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಹಾಗೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದ ಜಿಲ್ಲಾಧಿಕಾರಿಯವರ ಸ್ಪಂದನಾ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದಾಗಿ ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ. 

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಜಿಲ್ಲಾಧಿಕಾರಿ ನನ್ನ ಭೇಟಿ ಮಾಡಿದ್ದರು. ಈ ವೇಳೆ ಜನಪ್ರತಿನಿಧಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿದ್ದೇನೆ. 

ಮೈಸೂರು ಡಿಸಿ ರೋಹಿಣಿ ವರ್ಗಾವಣೆ - ಕರ್ತವ್ಯದಿಂದ ವಜಾ?

ಸ್ಪಂದನಾ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಇದನ್ನು ತಿಳಿಸಿದ್ದೇನೆ. ಈಗ ಸ್ಪಂದನ ಕಾರ್ಯಕ್ರಮ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಂದಿನ ದಿನದಲ್ಲಿ ಜಿಲ್ಲಾಧಿಕಾರಿಗಳ ನಡಿಗೆ ಗ್ರಾಮದ ಕಡೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಇದಕ್ಕೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ. ಈ ವೇಳೆ ಜನರ ಅಹವಾಲಗಳನ್ನು ಕೇಳಲಾಗುತ್ತದೆ ಎಂದು ತಿಳಿಸಿದರು.