Asianet Suvarna News Asianet Suvarna News

ಇಂದು ರಾಯಚೂರು ಜಿಲ್ಲೆಯಲ್ಲಿ ಮೋಡ ಬಿತ್ತನೆ

ಬರ ಪರಿಸ್ಥಿತಿ ನಿವಾರಿಸಲು ಹಾಗೂ ನೀರಿನ ಲಭ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಮೋಡ ಬಿತ್ತನೆ ಬಹಳ ಪರಿಣಾಮಕಾರಿಯಾಗಿದೆ. ಜಿಲ್ಲೆಯಲ್ಲಿ ಮೋಡ ಬಿತ್ತನೆ ಮೂಲಕ ಜಿಲ್ಲೆಯ ರೈತರಿಗೆ ಅನುಕೂಲ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ: ಫೌಂಡೇಶನ್ ಮುಖಂಡ ರವಿ ಬೋಸರಾಜು 

Cloud Seeding in Raichur district on November 5th grg
Author
First Published Nov 5, 2023, 4:31 AM IST

ರಾಯಚೂರು(ನ.05):  ಜಿಲ್ಲೆಯನ್ನು ಬರದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಿಕೆಕೆ ಸಂಸ್ಥೆಯ ಸಹಭಾಗಿತ್ವದಲ್ಲಿ ಬೋಸರಾಜು ಫೌಂಡೇಶನ್‌ನಿಂದ ನ.5 ರಂದು ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲಾಗುತ್ತಿದೆ ಎಂದು ಫೌಂಡೇಶನ್ ಮುಖಂಡ ರವಿ ಬೋಸರಾಜು ತಿಳಿಸಿದ್ದಾರೆ.

ರಾಜ್ಯದಲ್ಲಿ ಈ ವರ್ಷ ಮಳೆ ಕಡಿಮೆಯಾಗಿ ಬರಗಾಲದ ಪರಿಸ್ಥಿತಿ ಏರ್ಪಟ್ಟಿದೆ. ಇಡೀ ಜಿಲ್ಲೆ ಬರಕ್ಕೆ ತುತ್ತಾಗಿದ್ದು, ತುಂಗಭದ್ರಾ ನಾಲೆಗಳಲ್ಲೂ ಸಮರ್ಪಕ ನೀರು ಹರಿಯುತ್ತಿಲ್ಲ. ಆದ್ದರಿಂದ ರೈತರು ಬೆಳೆದಿರುವ ಬೆಳೆಗಳನ್ನು ರಕ್ಷಿಸುವ ನಿಟ್ಟಿನಲ್ಲಿ ವೈಜ್ಞಾನಿಕ ಕ್ರಮ ಅನುಸರಿಸಿ ಮಳೆ ಸುರಿಸುವ ನಿಟ್ಟಿನಲ್ಲಿ ಮೋಡ ಬಿತ್ತನೆ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಸಿಎಂ ಯಡಿಯೂರಪ್ಪ ಸೂಚನೆಗೂ ಕ್ಯಾರೆ ಅನ್ನದ ಗುತ್ತಿಗೆದಾರರು

ಬರ ಪರಿಸ್ಥಿತಿ ನಿವಾರಿಸಲು ಹಾಗೂ ನೀರಿನ ಲಭ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಮೋಡ ಬಿತ್ತನೆ ಬಹಳ ಪರಿಣಾಮಕಾರಿಯಾಗಿದೆ. ಜಿಲ್ಲೆಯಲ್ಲಿ ಮೋಡ ಬಿತ್ತನೆ ಮೂಲಕ ಜಿಲ್ಲೆಯ ರೈತರಿಗೆ ಅನುಕೂಲ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಸ್ಥಳೀಯ ಆರ್ಥಿಕತೆಗೆ ಇಂಬು ನೀಡುವ ನಿಟ್ಟಿನಲ್ಲಿ ಕೃಷಿ ಚಟುವಟಿಕೆಗಳ ಪ್ರಮುಖ ಪಾತ್ರ ವಹಿಸುತ್ತವೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಮೋಡ ಬಿತ್ತನೆ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು.

ವೈಜ್ಞಾನಿಕವಾಗಿ ಪರಿಶೀಲನೆ ನಡೆಸುವ ಮೂಲಕ ಮೋಡಗಳ ಲಭ್ಯತೆಯ ಅನುಸಾರವಾಗಿ ಜಿಲ್ಲಾದ್ಯಂತ ಮೋಡ ಬಿತ್ತನೆ ಮಾಡಲಾಗುವುದು. ಈಗಾಗಲೇ ಹಾವೇರಿ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಮೋಡ ಬಿತ್ತನೆಯ ಕಾರ್ಯ ಯಶಸ್ವಿಯಾಗಿದೆ ಎಂದು ಫೌಂಡೇಶನ್ ಮುಖಂಡ ರವಿ ಬೋಸರಾಜು ಹೇಳಿದರು.

Follow Us:
Download App:
  • android
  • ios