Asianet Suvarna News Asianet Suvarna News

Karnataka Politics : ಪರಿಷತ್ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ ಸೇರಿದ ಮಂಡ್ಯದ ಮುಖಂಡ

  • ಸಿಎಂ ಬಸವರಾಜ ಬೊಮ್ಮಾಯಿ ಅವರ ಆಪ್ತ ಎಲೆಚಾಕನಹಳ್ಳಿ ಬಸವರಾಜು ಬಿಜೆಪಿಗೆ
  • ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ  ಅಧಿಕೃತವಾಗಿ ಬಿಜೆಪಿ ಸೇರ್ಪಡೆ
CM Basavaraj Bommai Close Aide Mandya Basavaraju Joins bjp snr
Author
Bengaluru, First Published Dec 6, 2021, 1:29 PM IST

ಮಂಡ್ಯ (ಡಿ.06):  ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಆಪ್ತ ಎಲೆ ಚಾಕನಹಳ್ಳಿ ಬಸವರಾಜು (Basavaraju)  ಅವರು ಬಿಜೆಪಿಗೆ (BJP) ಸೇರ್ಪಡೆಯಾದರು.  ಮಾಜಿ ಸಿಎಂ ಯಡಿಯೂರಪ್ಪ (BS Yediyurappa)  ನೇತೃತ್ವದಲ್ಲಿ  ಅಧಿಕೃತವಾಗಿ  ಸೇರ್ಪಡೆಯಾದರು. ವಿಧಾನ ಪರಿಷತ್ ಚುನಾವಣೆಗೆ (Karnataka MLC Election)  ಬಿಜೆಪಿಯಿಂದ  ಸ್ಪರ್ಧಿಸುವ ಪ್ರಬಲ ಆಕಾಂಕ್ಷಿಗಳಲ್ಲಿ ಎಲೆಚಾಕನಹಳ್ಳಿ ಬಸವರಾಜು ಅವರು ಕೂಡ ಒಬ್ಬರಾಗಿದ್ದರು. ಇದೀಗ ಪರಿಷತ್  ಚುನಾವಣೆಯ ಸಂದರ್ಭದಲ್ಲಿಯೇ  ಬಿಜೆಪಿ (BJP) ಸೇರ್ಪಡೆಯಾಗಿ ಹೊಸ ರಾಜಕೀಯ (Politics) ಆರಂಭ ಮಾಡಿದ್ದಾರೆ. 

ಈ ಹಿಂದಿನ  ಬಿಜೆಪಿ ಸರ್ಕಾರದಲ್ಲಿ  (BJP Govt) ಬೊಮ್ಮಾಯಿ ಅವರು ಜಲ ಸಂಪನ್ಮೂಲ  ಸಚಿವರಾಗಿದ್ದಾಗ (Minister)  ಎಲೆಚಾಕನಹಳ್ಳಿ  ಏತ ನೀರಾವರಿ ಯೋಜನೆ ತಂಡು ಹಲವು ಕೆರೆ ತುಂಬಿಸುವಲ್ಲಿ ಯಶಸ್ವಿಯಾಗಿದ್ದರು.  ಬೊಮ್ಮಾಯಿ ಸಿಎಂ ಆದ  ಸಂದರ್ಭದಿಂದ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದರಲ್ಲದೆ ಸಚಿವ ಅಶ್ವತ್ಥ ನಾರಾಯಣ (Dr CN Ashwath Narayan) ಅವರೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದರು.  ಇದೀಗ ಬಸವರಾಜು ಅವರನ್ನು ಬಿ ಎಸ್ ಯಡಿಯೂರಪ್ಪ (BS Yediyurappa)  ಬರಮಾಡಿಕೊಂಡರು.

ಮಂಡ್ಯದಲ್ಲಿ ಮೈತ್ರಿ ಇಲ್ಲ  :  ವಿಧಾನಪರಿಷತ್ ಚುನಾವಣೆಯಲ್ಲಿ (Karnataka MLC Elections) ನೂರಕ್ಕೆ ನೂರರಷ್ಟು ಬಿಜೆಪಿಗೆ(BJP ಜೆಡಿಎಸ್‌(JDS) ಬೆಂಬಲಿಸಲಿದೆ ಎಂದಯ ಸ್ವತಃ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa)ಬಹಿರಂಗವಾಗಿಯೇ ಹೇಳಿದ್ದರು. ಆದ್ರೆ, ಇದೀಗ ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಪಕ್ಷದ ಜೊತೆ ಯಾವುದೇ ಹೊಂದಾಣಿಕೆ ಇಲ್ಲ ಅಚ್ಚರಿಕೆ ಹೇಳಿಕೆ ನೀಡಿದ್ದಾರೆ.

ಮಂಡ್ಯದ ಕಾಳಿಕಾಂಬ ಸಮುದಾಯ ಭವನದಲ್ಲಿ ಬಿಜೆಪಿ ಅಭ್ಯರ್ಥಿ ಬೊಕ್ಕಳ್ಳಿ ಮಂಜು ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಯಾವುದೇ ಪಕ್ಷದ ಜೊತೆ ಹೊಂದಾಣಿ ಇಲ್ಲ. ಜೆಡಿಎಸ್ ಅಭ್ಯರ್ಥಿ ಇಲ್ಲದ ಕಡೆ ಬೆಂಬಲ ಕೇಳಿದ್ದೇವೆ ಅಷ್ಟೇ. ಆದರೆ ಯಾವುದೇ ಕಾರಣಕ್ಕೂ ಮಂಡ್ಯದಲ್ಲಿ ಮೈತ್ರಿ ಇಲ್ಲ. ಇದನ್ನ ನಾನು ಮತ್ತೊಮ್ಮೆ ಸ್ಪಷ್ಟಪಡಿಸುತ್ತಿದ್ದೇನೆ ಎಂದು ಹೇಳಿದರು.

ಪಾಂಡವಪುರದಲ್ಲಿ ಉತ್ತಮವಾಗಿ ಸಕ್ಕರೆ ಕಾರ್ಖಾನೆ ನಡೆಯುತ್ತಿದೆ. ಆದಷ್ಟು ಬೇಗ ಮೈಶುಗರ್ ಕಾರ್ಖಾನೆ ಕೂಡ ಆರಂಭವಾಗಲಿದೆ. ನಾರಾಯಣಗೌಡರ ನೇತೃತ್ವದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ನಾಲ್ಕೈದು ಸ್ಥಾನಗಳನ್ನ ಗೆಲ್ಲಬೇಕು. ನಾನು ಕೈ ಜೋಡಿಸುತ್ತೇನೆ ಎಂದು ತಿಳಿಸಿದರು.

ಕಾಂಗ್ರೆಸ್ ನಾಯಕರಿಗೆ ಹೇಳುತ್ತೇನೆ, ಹಣ, ಹೆಂಡದ ಬಲದಿಂದ ಜಾತಿ ವಿಷ ಬೀಜ ಬಿತ್ತುತ್ತಿದ್ದ ನಿಮ್ಮ ಕಾಲ ಹೋಗಿದೆ. ರಾಜ್ಯದಲ್ಲಿ ಒಂದಿಬ್ಬರಿಂದ ಸ್ವಲ್ಪ ಉಸಿರಾಡುತ್ತಿದೆ. ಆ ಉಸಿರನ್ನು ನಿಲ್ಲಿಸಬೇಕು ಅಂದ್ರೇ, ನಮ್ಮ ಅಭ್ಯರ್ಥಿ ಬಿಸಿ ಮಂಜು ಅವರನ್ನು ಗೆಲ್ಲಿಸಬೇಕು ಎಂದು ಬಿಎಸ್‌ವೈ ಕರೆ ನೀಡಿದರು.

 ನರೇಂದ್ರ ಮೋದಿಯವರ ನಾಯಕತ್ವಕ್ಕೆ ಇಡೀ ವಿಶ್ವವೇ ತಿರುಗಿ ನೋಡುತ್ತಿದೆ. ಅಂತಹ ಮಹಾನ್ ನಾಯಕರ ಪಕ್ಷದಲ್ಲಿ ಸದಸ್ಯರು ಆಗಿರೋದು ಹೆಮ್ಮೆ ವಿಚಾರ. 20 ಸ್ಥಾನದಲ್ಲಿ ಮಂಜು ಸೇರಿ ೧೭-೧೮ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಯಡಿಯೂರಪ್ಪನವರು ವಿಶ್ವಾಸ ವ್ಯಕ್ತಪಡಿಸಿದರು.

ನನ್ನ ಸ್ವಂತ ಜಿಲ್ಲೆ ಮಂಡ್ಯದಲ್ಲಿ ಈ ರೀತಿಯ ಸ್ವಾಗತ ಸಿಗುತ್ತೆ ಎಂದು ನಾನು ನಿರೀಕ್ಷೆ ಮಾಡಿರಲಿಲ್ಲ. ನಾನು ಪ್ರಾಮಾಣಿಕವಾಗಿ ಹೇಳ್ತೇನೆ ಇಷ್ಟು ಜನ ಸೇರ್ತಾರೆ ಎಂದು ಊಹಿಸಿರಲಿಲ್ಲ. ನಾರಾಯಣಗೌಡರು ಹಾಗೂ ಎಲ್ಲಾ ನಾಯಕರಿಗೆ ಅಭಿನಂದನೆ ಹೇಳಿದರು.

ವಿಧಾನಪರಿಷತ್‌ ಚುನಾವಣೆಯಲ್ಲಿ (MLC Election) ಬಿಜೆಪಿ-ಜೆಡಿಎಸ್‌ (BJP-JDS) ಹೊಂದಾಣಿಕೆ ಮಾಡಿಕೊಂಡಿವೆ ಎಂಬ ಸುದ್ದಿಗಳು ಹರಿದಾಡುತ್ತಿರುವುದರ ನಡುವೆಯೂ ಮಂಡ್ಯ ಅಖಾಡಕ್ಕೆ ಬಿಜೆಪಿ ಧುಮುಕಿದೆ.

ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಭಾರೀ ಪ್ರಚಾರದಲ್ಲಿ ತೊಡಗಿದ್ದು, ಜೆಡಿಎಸ್‌-ಕಾಂಗ್ರೆಸ್‌ ತೀವ್ರ ಪೈಪೋಟಿ ನೀಡುವ ರಣೋತ್ಸಾಹ ಪ್ರದರ್ಶಿಸುತ್ತಿದ್ದಾರೆ. ಸಚಿವ ಕೆ.ಸಿ.ನಾರಾಯಣಗೌಡರು(KC Narayanagouda) ಚುನಾವಣಾ ಅಖಾಡದಲ್ಲಿ ಸಾರಥಿಯಾಗಿ ನಿಂತು ಮಂಜು ಅವರಿಗೆ ಬಲ ತುಂಬುತ್ತಿದ್ದಾರೆ.

ಜಿದ್ದಾಜಿದ್ದಿ
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ( MLC Election) ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್‌ (JDS) ಮತ್ತು ಕಾಂಗ್ರೆಸ್‌ (Congress) ಅಭ್ಯರ್ಥಿಗಳು ಮತಬೇಟೆಯಲ್ಲಿ ಜಿದ್ದಾ ಜಿದ್ದಿನ ಪೈಪೋಟಿಗಿಳಿದಿದ್ದಾರೆ. ಗ್ರಾಪಂ ಸದಸ್ಯರನ್ನೇ ಗುರಿಯಾಗಿಸಿಕೊಂಡು ಚುನಾವಣಾ (Election) ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಎರಡೂ ಪಕ್ಷಗಳು ಗೆಲುವಿಗೆ ಶತ ಪ್ರಯತ್ನ ನಡೆಸುತ್ತಿವೆ.ಜೆಡಿಎಸ್‌ , ಕಾಂಗ್ರೆಸ್‌ ಪಕ್ಷಗಳಿಗೆ ಸರಿಸಮನಾಗಿ ಪೈಪೋಟಿ ನೀಡುವುದಕ್ಕೆ ಮುಂದಾಗಿರುವ ಬಿಜೆಪಿ, ಅಬ್ಬರದ ಚುನಾವಣಾ ಪ್ರಚಾರದೊಂದಿಗೆ ಮುನ್ನಡೆಯುತ್ತಿದೆ. ಸಚಿವ ಕೆ.ಸಿ.ನಾರಾಯಣಗೌಡರು ಅಭ್ಯರ್ಥಿಯೊಂದಿಗೆ ಎಲ್ಲೆಡೆ ಪ್ರಚಾರಕ್ಕಿಳಿದಿದ್ದು ಹೆಚ್ಚಿನ ಮತಗಳನ್ನು ಕಮಲ (BJP) ಬುಟ್ಟಿಗೆ ಬೀಳಿಸಿಕೊಳ್ಳುವುದಕ್ಕೆ ತೀವ್ರ ಹೋರಾಟ ನಡೆಸುತ್ತಿದ್ದಾರೆ.

ಕೆ.ಆರ್‌.ಪೇಟೆ ಉಪ ಚುನಾವಣೆಯ ನಂತರ ಮತ್ತೊಮ್ಮೆ ಜಿಲ್ಲೆಯಲ್ಲಿ ಕಮಲ ಅರಳಿಸಲು ಕಸರತ್ತು ನಡೆಸುತ್ತಿದ್ದಾರೆ. ಗ್ರಾಮ ಪಂಚಾಯಿತಿಗಳಲ್ಲೂ ಬಿಜೆಪಿ ತೃಪ್ತಿದಾಯಕ ಮತಗಳನ್ನು ಹೊಂದಿದ್ದು, ಬಿಜೆಪಿ ಪಕ್ಷ ಅಧಿಕಾರದಲ್ಲಿರುವುದರಿಂದ ಗ್ರಾಪಂ ಸದಸ್ಯರು ಪಕ್ಷವನ್ನು ಕೈಹಿಡಿಯುವರೆಂಬ ನಂಬಿಕೆ ಅವರಲ್ಲಿದೆ. ಈಗಾಗಲೇ ಬೂಕಹಳ್ಳಿ ಮಂಜು ಅವರು ಮೂರ್ನಾಲ್ಕು ಬಾರಿ ಗ್ರಾಮ ಪಂಚಾಯಿತಿ ಸದಸ್ಯರನ್ನು ಭೇಟಿಯಾಗಿ ಬಂದಿರುವ ಅವರು ಮತದಾರರು ನನ್ನ ಪರವಾಗಿದ್ದಾರೆ ಎಂಬ ವಿಶ್ವಾಸದಲ್ಲಿದ್ದಾರೆ.

ಇನ್ನು ಇಂದು(ಡಿ.05) ಬಿಜೆಪಿ ದಂಡು ಮಂಡ್ಯ ಅಖಾಡಕ್ಕಿಳಿದಿದೆ. ಸಚಿವರಾದ, ಎಸ್. ಟಿ. ಸೋಮಶೇಖರ್,  ನಾರಾಯಣಗೌಡ, ಮಂಡ್ಯ ಡಿಸಿಸಿ  ಬ್ಯಾಂಕ್ ಅಧ್ಯಕ್ಷ ಉಮೇಶ, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಪ್ರಮುಖರು  ತಮ್ಮ ಮಂಜು ಪರವಾಗಿ ಭರ್ಜರಿ ಪ್ರಚಾರ ಮಾಡಿದರು. 

Follow Us:
Download App:
  • android
  • ios