ಕೃಷ್ಣರಾಜಸಾಗರ ಬಳಿಯ ಕಾವೇರಿ ಮಾತೆ ಪ್ರತಿಮೆಗೆ ಪೂಜೆ ಸಲ್ಲಿಸಿದ ನಂತರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿರುವ ಸಿಎಂ ಬೊಮ್ಮಾಯಿ
ಮಂಡ್ಯ(ಜು.20): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜುಲೈ 20 ಮತ್ತು 21ರಂದು 2 ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು(ಬುಧವಾರ) ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತದಿಂದ ಕೆಆರ್‌ಎಸ್‌ನಲ್ಲಿ ಹಮ್ಮಿಕೊಂಡಿರುವ ಬಾಗಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೈಸೂರಿನಿಂದ ಬೆಳಗ್ಗೆ 11.45ಕ್ಕೆ ಕೆಆರ್ ಸಾಗರ ಬಳಿ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ಆಗಮಿಸುವ ಮುಖ್ಯಮಂತ್ರಿಗಳು ನಂತರ ಕೃಷ್ಣರಾಜಸಾಗರ ಬಳಿಯ ಕಾವೇರಿ ಮಾತೆ ಪ್ರತಿಮೆಗೆ ಪೂಜೆ ಸಲ್ಲಿಸುವರು. ನಂತರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ.
ಜಲ ಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ರೇಷ್ಮೆ ಸಚಿವ ಕೆ.ಸಿ ನಾರಾಯಣಗೌಡ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಿಎಂ ಬಾಗಿನ ಕಾರ್ಯಕ್ರಮಕ್ಕೆ ಕೈ ಜೋಡಿಸಲಿದ್ದಾರೆ.
ತುಂಗಭದ್ರಾ ಡ್ಯಾಂ ಭರ್ತಿ: ಎರಡು ಹಂಗಾಮಿಗೂ ನೀರು ಲಭ್ಯ, ಸಚಿವ ಆನಂದ ಸಿಂಗ್
ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಅಧ್ಯಕ್ಷತೆ ವಹಿಸಲಿದ್ದು, ಮಂಡ್ಯ, ಮೈಸೂರು, ಚಾಮರಾಜನಗರ ಸಂಸದರು, ಶಾಸಕರು, ವಿಧಾನ ಪರಿಷತ್ ಭಾಗವಹಿಸುವರು. ಅತಿಥಿಗಳಾಗಿ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪು ಸಿದ್ದಲಿಂಗಸ್ವಾಮಿ, ಮೈಸೂರು ಮುಡಾ ಅಧ್ಯಕ್ಷ ಎಚ್.ವಿ ರಾಜೀವ್, ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ, ರಾಜ್ಯ ಕಾಂಪೋಸ್ವ್ ಅಭಿವೃದ್ಧಿ ನಿಗಮ ನಿಯಮಿತ ದ ಅಧ್ಯಕ್ಷ ಎಸ್.ಮಹದೇವಯ್ಯ, ಕೃಷ್ಣರಾಜಸಾಗರ ಗ್ರಾಪಂ ಅಧ್ಯಕ್ಷ ಕೆ.ನರಸಿಂಹ ಸೇರಿದಂತೆ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಜಿಲ್ಲಾ ಎಸ್ಪಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳುವರು.
ಜುಲೈ 21ರಂದು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜುಲೈ 21 ಕೆ.ಆರ್.ಪೇಟೆ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 10.20ಕ್ಕೆ ಕೆ.ಆರ್.ಪೇಟೆ ತಾಲೂಕಿನ ಬಂಡಬೋಯಿನಹಳ್ಳಿಯಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ಆಗಮಿಸುವರು. ಬೆಳಗ್ಗೆ 10.40ಕ್ಕೆ ಕೆ.ಆರ್.ಪೇಟೆ ಟೌನ್ ಪುರಸಭಾ ಕಚೇರಿ ಬಳಿ ಜಿಲ್ಲಾಡಳಿತ, ಜಿಪಂ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಿರುವ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸುವರು.
ಉತ್ತರ ಕನ್ನಡ: ನದಿಯಲ್ಲಿ ಪ್ರವಾಹ ಏರಿಕೆ, ವರದೆಗೆ ಬಾಗೀನ ಅರ್ಪಿಸಿದ ಸಚಿವ ಹೆಬ್ಬಾರ
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಫಲಾನುಭವಿಗಳಿಗೆ ಸವಲತ್ತು ವಿತರಿಸುವರು. ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಉಪಸ್ಥಿತರಿರುವರು. ಬಾರಿ ನೀರಾವರಿ ಸಚಿವ ಗೋವಿಂದ ಎಂ. ಕಾರಜೋಳ, ಕಂದಾಯ ಸಚಿವ ಆರ್.ಅಶೋಕ್, ಸಾರಿಗೆ ಸಚಿವ ಬಿ.ಶ್ರೀರಾಮುಲು, ವಸತಿ ಸಚಿವ ವಿ.ಸೋಣ್ಣ, ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ನಗರಾಭಿವೃದ್ಧಿ ಸಚಿವ ಬಿ.ಎ ಬಸವರಾಜ, (ಬೈರತಿ) ಆರೋಗ್ಯಸಚಿವ ಡಾ.ಕೆ ಸುಧಾಕರ್, ಪೌರಾಡಳಿತ ಸಚಿವ ಎನ್.ನಾಗರಾಜು, ಇಂಧನ ಸಚಿವ ವಿ.ಸುನೀಲ್‌ಕುಮಾರ್, ಗಣಿ ಸಚಿವ ಆಚಾರ್ ಹಾಲಪ್ಪ ಬಸಪ್ಪ, ತೋಟಗಾರಿಕೆ ಸಚಿವ ಮುನಿರತ್ನ ಪಾಲ್ಗೊಲ್ಳುವರು.
ಅತಿಥಿಗಳಾಗಿ ಸಂಸದರು, ಜಿಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪುರಸಭೆ ಅಧ್ಯಕ್ಷೆ ಮಹಾದೇವಿ ನಂಜುಂಡ, ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್, ಮುಡಾ ಅಧ್ಯಕ್ಷ ಶ್ರೀನಿವಾಸ್, ಪುರಸಭೆ ಉಪಾಧ್ಯಕ್ಷೆ ಗಾಯಿತ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಪ್ರಸಾಥ್ ಮನೋಹರ್ ಸೇರಿದಂತೆ ಇತರ ಗಣ್ಯರು ಭಾಗವಹಿಸುವರು.
