ಜನರ ಬಳಿ ಆಡಳಿತ ಯೋಜನೆಗೆ ಸಿದ್ಧತೆ: ಸಿಎಂ ಬೊಮ್ಮಾಯಿ

*  ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿರುವ ಸಿಎಂ ಬೊಮ್ಮಾಯಿ 
*  ಸಂಕೇಶ್ವರ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ
*  ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ
 

CM Basavaraj Bommai Talks Over Governance Plan in Karnataka grg

ಸಂಕೇಶ್ವರ(ಸೆ.26): ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಯೋಜನೆ ಮೂಲಕ ರೈತರ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಮಾಡಲಾಗಿದೆ. ಜನರ ಬಳಿಗೆ ಆಡಳಿತ ಎಂಬ ಯೋಜನೆಗೆ ಸಿದ್ಧತೆ ಮಾಡಲಾಗುತ್ತಿದೆ. ಜನಪರ, ಬಡಪರವಾಗಿ ಇರುವಂತ ಸರ್ಕಾರ ನಮ್ಮದಾಗಿದೆ. ಇಲ್ಲಿ ನನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳಿಗೆ ಮಂಜೂರಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ.

ಸಂಕೇಶ್ವರ ಪಟ್ಟಣದ ನೂತನ ಆಡಳಿತ ಕಚೇರಿ ಕಟ್ಟಡ ಉದ್ಘಾಟನೆ ವಸತಿ ರಹಿತರಿಗೆ ವಸತಿ ಕಲ್ಪಿಸುವ ನಿಟ್ಟಿನಲ್ಲಿ 50 ಎಕರೆ ಗಾಯರಾಣಾ ಭೂಮಿಯನ್ನು ಪುರಸಭೆಗೆ ಹಸ್ತಾಂತರ, ಕೆಎಸ್ಸಾರ್ಟಿಸಿ ನೂತನ ಬಸ್‌ ನಿಲ್ದಾಣ, ಅಂಬೇಡ್ಕರ್‌ ಭವನ, ಮೆಟ್ರಿಕ್‌ ನಂತರ ಬಾಲಕರ ವಸತಿ ನಿಲಯ ರೈತ ಸೇವಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಅರಣ್ಯ, ಆಹಾರ ಇಲಾಖೆ ಸಚಿವ ಉಮೇಶ ಕತ್ತಿ(Umesh Katti) ಮಾತನಾಡಿ, ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು, ಹುಕ್ಕೇರಿ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿದ್ದು ಮುಂಬರುವ ದಿನಗಳಲ್ಲಿ ಇನ್ನು ಬಾಕಿಯಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಶ್ರಮಿಸಲಾಗುವುದು ಎಂದರು.

ಭಾರತ್‌ ಬಂದ್‌ಗೆ ಸಿಎಂ ಬೊಮ್ಮಾಯಿ ವಿರೋಧ

ಸಾರಿಗೆ ಸಚಿವ ಬಿ.ಶ್ರೀರಾಮುಲು(B Sriramulu) ಮಾತನಾಡಿ, ಸಾರಿಗೆ ಇಲಾಖೆ ಸುಧಾರಣೆಗೆ ಶ್ರಮಿಸುತ್ತಿದ್ದು, ಪ್ರಯಾಣಿಕರ ವಿಶ್ವಾಸ ಗಳಿಸುವ ಕಾರ್ಯವನ್ನು ಸಿಎಂ ಬಸವರಾಜ ಬೊಮ್ಮಾಯಿ ಮಾರ್ಗದರ್ಶನದಲ್ಲಿ ಮಾಡಲಾಗುವುದು ಎಂದರು.

ಪ್ರಾಸ್ತಾವಿಕ ಮಾಜಿ ಸಂಸದ ರಮೇಶ ಕತ್ತಿ ಮಾತನಾಡಿ, ಸಹೋದರ ಸಚಿವ ಉಮೇಶ ಕತ್ತಿ ಎಂಟು ಬಾರಿ ಶಾಸಕರಾಗಿ ಹಲವಾರು ಯೋಜನೆಗಳನ್ನು ಕ್ಷೇತ್ರಕ್ಕೆ ನೀಡಿದ್ದು ಇಂದು ಹುಕ್ಕೇರಿ ಕ್ಷೇತ್ರಕ್ಕೆ ಹೈಟೆಕ್‌ ಸ್ಪರ್ಶ ನೀಡಿದ್ದಾರೆ ಎಂದರು. ಸಿಎಂ ಬೊಮ್ಮಾಯಿ ಅವರು ಅನುಭವಿಗಳಾಗಿದ್ದು ಉತ್ತರ ಕರ್ನಾಟಕ ಅಭಿವೃದ್ಧಿಗೆ ಒತ್ತು ನೀಡಬೇಕು. ಹುಕ್ಕೇರಿ ತಾಲೂಕಿನ ಶಂಕರಲಿಂಗ ಏತ ನೀರಾವರಿ, ಅಡವಿಸಿದ್ದೇಶ್ವರ ಏತ ನೀರಾವರಿಗೆ ಮಂಜೂರಾತಿ ನೀಡಬೇಕೆಂದು ಸಿಎಂಗೆ ಮನವಿ ಮಾಡಿದರು.

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಪೌರಾಡಳಿತ ಸಚಿವ ಎಂಟಿಬಿ, ಪರಿಷತ್‌ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಐಹೊಳೆ, ವಿ.ಪ.ಸದಸ್ಯ ಹನುಮಂತ ನಿರಾಣಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪುರಸಭೆ ಅಧ್ಯಕ್ಷೆ ಸೀಮಾ ಹತನೂರೆ, ಉಪಾಧ್ಯಕ್ಷ ಅಜೀತ ಕರಜಗಿ, ಸ್ಥಾಯಿ ಸಮಿತಿ ಚೇರಮನ್‌ ಸುನೀಲ ಪರ್ವತರಾವ್‌ ,ಮುಖ್ಯಾಧಿಕಾರಿ ಜಗದೀಶ ಈಟಿ, ತಹಸೀಲ್ದಾರ್‌ ಡಾ.ಡಿ.ಹೆಚ್‌. ಹೂಗಾರ, ಹೀರಾ ಶುಗರ್ಸ್‌ ಅಧ್ಯಕ್ಷ ನಿಖಿಲ ಕತ್ತಿ, ಮಾಜಿ ಜಿ.ಪಂ ಸದಸ್ಯ ಪವನ ಕತ್ತಿ, ಪೃಥ್ವಿ ಕತ್ತಿ, ಪುರಸಭೆ ಸದಸ್ಯರು, ಸಾರಿಗೆ ಇಲಾಖೆ ಅಧಿಕಾರಿಗಳು ಇದ್ದರು.

ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ:

ವಿವಿಧ ಬೇಡಿಕೆಗಾಗಿ ಆಗ್ರಹಿಸಿ ಹಲವು ಸಂಘಟನೆಗಳಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಗ್ರಂಥಪಾಲಕರು, ಮಾಹಿತಿ ಸಹಾಯಕರ ಸಮಯವನ್ನು ಹೆಚ್ಚಿಸುವಂತೆ ಹಾಗೂ ಕನಿಷ್ಠ ವೇತನಕ್ಕೆ ಒಳಪಡಿಸುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲಾ ಸರ್ಕಾರಿ ಗ್ರಾಮ ಪಂಚಾಯತಿ ಗ್ರಂಥಾಲಯದ ಮೇಲ್ವಿಚಾರಕ ಸಂಘ ಮುಖಂಡರು ಮನವಿ ಸಲ್ಲಿಸಿದರು .

ಕಾಗದ ರಹಿತ ವ್ಯವಸ್ಥೆಗೆ ಸಾರಿಗೆ ಇಲಾಖೆ ಸಿದ್ಧತೆ: ಸಚಿವ ರಾಮುಲು

ಸಂಕೇಶ್ವರ ಪಟ್ಟಣದ ಅಭಿವೃದ್ಧಿಗಾಗಿ ವಿವಿಧ ಕಾಮಗಾರಿಗಳಿಗೆ ವಿಶೇಷ ಅನುದಾನ ನೀಡುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಸಂಕೇಶ್ವರ ಬ್ಲಾಕ್‌ ವತಿಯಿಂದ ಮನವಿ ಸಲ್ಲಿಸಿದರು. ಸಂಕೇಶ್ವರ ಪಟ್ಟಣದ ರುದ್ರಭೂಮಿ ಒದಗಿಸುವಂತೆ, ಕನ್ನಡ ಗಡಿನಾಡು ಭವನ ನಿರ್ಮಿಸಲು ಅನುದಾನ ಮಂಜೂರಾತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಲಾಯಿತು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂತೋಷ ಮುಡಶಿ, ಕನ್ನಡ ಚಳುವಳಿಗಾರ ಸಂಘದ ಅಧ್ಯಕ್ಷ ಕಿರಣ ನೇಸರಿ, ಭಾರತೀಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನ್ಯಾಯವಾದಿ ವಿಕ್ರಮ ಕರನಿಂಗ, ಗ್ರಂಥಾಲಯ ಮೇಲ್ವಿಚಾರಕ ಸಂಘದ ತಾಲೂಕು ಉಪಾಧ್ಯಕ್ಷ ಮಲಗೌಡ ಪಾಟೀಲ ಸೇರಿದಂತೆ ಅನೇಕರಿದ್ದರು.

ಸಂಕೇಶ್ವರ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ

ಸಂಕೇಶ್ವರ ಪಟ್ಟಣಕ್ಕೆ ಸಂಪೂರ್ಣ ಒಳಚರಂಡಿ ವ್ಯವಸ್ಥೆ ಯೋಜನೆಗೆ ವಷಾಂರ್‍ತ್ಯದಲ್ಲಿ ಅನುಮತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ವಿಶ್ವನಾಥ್‌ ಕತ್ತಿ ಹಾಗೂ ತಮ್ಮ ತಂದೆಯವರಾದ ದಿ.ಎಸ್‌.ಆರ್‌.ಬೊಮ್ಮಾಯಿ ಅವರ ಆತ್ಮೀಯ ಒಡನಾಟವನ್ನು ಸ್ಮರಿಸಿದರು. ಅಧಿಕಾರ ಶಾಶ್ವತವಲ್ಲ, ಪ್ರತಿದಿನ ಇದನ್ನು ನೆನಪಿನಲ್ಲಿಟ್ಟುಕೊಂಡು ಕೆಲಸ ಮಾಡುತ್ತೇವೆ. ಜನರ ಮನಸ್ಸಿನಲ್ಲಿ ನಮ್ಮ ಬಗ್ಗೆ ಪ್ರೀತಿ-ವಿಶ್ವಾಸ ಇರುವವರೆಗೆ ನಾವು ಅಧಿಕಾರದಲ್ಲಿರುತ್ತೇವೆ ಎಂದರು.

Latest Videos
Follow Us:
Download App:
  • android
  • ios