ಬೆಂಗಳೂರು [ಆ.15]:  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಸಚಿವ ಸಂಪುಟ ಸಭೆಯಲ್ಲಿ ಬಂಪರ್‌ ಕೊಡುಗೆ ಘೋಷಿಸಿದ್ದಾರೆ.

ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗವನ್ನು 956 ಕೋಟಿ ರು. ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳುವುದು, ಶಿವಮೊಗ್ಗ ಕಿರು ವಿಮಾನ ನಿಲ್ದಾಣದಲ್ಲಿ ಇಳಿದಾಣವನ್ನು ಕೆಎಸ್‌ಐಐಡಿಸಿ ಸಂಸ್ಥೆಯ ಮೂಲಕ 38 ಕೋಟಿ ರು. ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ಅನುಮೋದನೆ ನೀಡಿದೆ. 

ವಿಧಾನಸೌಧದಲ್ಲಿ ಬುಧವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. 

ಶಿವಮೊಗ್ಗ: ಆ.14, 15ರಂದು ಶಾಲೆಗಳಿಗೆ ರಜೆ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ 66 ಸಣ್ಣ ನೀರಾವರಿ ಹಾಗೂ ಜಿಲ್ಲಾ ಪಂಚಾಯತ್‌ ಕೆರೆಗಳಿಗೆ ಮೂಡಿ ಗ್ರಾಮದ ಬಳಿ ವರದಾ ನದಿಯಿಂದ ನೀರನ್ನೆತ್ತಿ ತುಂಬಿಸುವ 285 ಕೊಟಿ ರು. ಮುಡಿ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ