ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯ ಸಹಿಸದೆ ಕಾಂಗ್ರೆಸ್‌ ಹಗುರ ಮಾತು| ಕಾಂಗ್ರೆಸ್‌ನವರು ಏನೇ ಮಾಡಿದರೂ ಬಿಜೆಪಿ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದಿಂದ ಗೆಲವು| ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಒಳ್ಳೆಯ ಕೆಲಸ ಮಾಡುತ್ತಿದೆ: ಯಡಿಯೂರಪ್ಪ| 

ಮುದಗಲ್‌/ಮಸ್ಕಿ(ಏ.10): ಉಪಚುನಾವಣೆಯಲ್ಲಿ ಮತಕ್ಕಾಗಿ ಬಿಜೆಪಿಯವರು ಹಣ ಹಂಚಿಕೆ ಮಾಡುತ್ತಿದ್ದಾರೆಂಬ ಪ್ರತಿಪಕ್ಷ ಕಾಂಗ್ರೆಸ್‌ ಟೀಕೆಯನ್ನು ಅಲ್ಲಗೆಳೆದಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೈಲಾಗದವರು ಮೈಪರಚಿಕೊಂಡಂತೆ ಕಾಂಗ್ರೆಸ್‌ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಸ್ಕಿ ಉಪಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಆಗಮಿಸಿರುವ ಅವರು ಮುದುಗಲ್‌ ಮತ್ತು ಮಸ್ಕಿಯಲ್ಲಿ ಮಾತನಾಡಿ, ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಯಾವ ಕೆಲಸವನ್ನೂ ಮಾಡಲಿಲ್ಲ. ಇದೀಗ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಒಳ್ಳೆಯ ಕೆಲಸ ಮಾಡುತ್ತಿದ್ದು, ಅದನ್ನು ಸಹಿಸಲಾಗದ ಕಾಂಗ್ರೆಸ್ಸಿಗರು ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಮಸ್ಕಿ ಉಪಚುನಾವಣಾ ಅಖಾಡ: ದಲಿತರ ಮನೆಯಲ್ಲಿ ಸಿಎಂ ಉಪಹಾರ

ಕಾಂಗ್ರೆಸ್‌ನವರು ಏನೇ ಮಾಡಿದರೂ ಬಿಜೆಪಿ ಅಭ್ಯರ್ಥಿ 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಹೇಳಿದರು. ಹೆಲಿಕಾಪ್ಟರ್‌ನಿಂದ ಇಳಿಯುದ್ದಂತೆ ಮಳೆ ಹನಿ ಬಿದ್ದಿರುವುದು ಶುಭಸೂಚನೆಯಾಗಿದ್ದು, ಪ್ರತಾಪಗೌಡ ಪಾಟೀಲ್‌ ಸುಮಾರು 20 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎನ್ನುವ ಸಾಕ್ಷಿ ಸಿಕ್ಕಿತು ಎಂದು ನುಡಿದರು.