ಶಿವಮೊಗ್ಗ(ಮಾ.01): ಮುಂಬರುವ ಉಪಚುನಾವಣೆಗಳಲ್ಲಿ ನೂರಕ್ಕೆ ನೂರು ನಾವೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ಯಾವುದೇ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಲ್ಲ. ಈಗಾಗಲೇ ಉಪಚುನಾವಣೆ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ನೂರಕ್ಕೆ ನೂರು ಉಪಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದರು.

ಮುನಿಸಿಕೊಂಡಿದ್ದ ಶಾಸಕ ಕುಮಾರ ಬಂಗಾರಪ್ಪ ಸಂಧಾನ ಸಕ್ಸಸ್

ಬಜೆಟ್‌ಗೆ ಸಂಬಂಧಿಸಿದಂತೆ ಎಲ್ಲಾ ಚರ್ಚೆ ಮುಗಿದಿದೆ. ಶಿವಮೊಗ್ಗದಿಂದ ವಾಪಸ್‌ ಬೆಂಗಳೂರಿಗೆ ಹೋದ ಬಳಿಕ ಬಜೆಟ್‌ ಸಿದ್ಧತೆ ಅಂತಿಮಗೊಳಿಸುತ್ತೇನೆ ಎಂದು ಹೇಳಿದ್ದಾರೆ.