ಮಂಡ್ಯ(ಫೆ.20): ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಎಚ್‌. ಗುರು ಸ್ಮಾರಕ ನಿರ್ಮಾಣಕ್ಕೆ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಹಣ ಬಿಡುಗಡೆ ಮಾಡಿದ್ದಾರೆ. ಇತ್ತೀಚೆಗಷ್ಟೇ ಪುಲ್ವಾಮ ದಾಳಿ ನಡೆದ ದಿನ ಎಚ್‌ ಗುರು ಸಮಾಧಿಗೆ ಪೂಜೆ ಸಲ್ಲಿಸಲಾಗಿತ್ತು.

ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧ ಗುರು ಸ್ಮಾರಕ ನಿರ್ಮಾಣ ವಿಚಾರವಾಗಿ 25 ಲಕ್ಷ ರೂ ಹಣ ಬಿಡುಗಡೆ ಮಾಡಿ ಸಿ ಎಂ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಹುತಾತ್ಮ ಯೋಧ ಅವರ ಬಲಿದಾನ ಮುಂದಿನ ಪೀಳಿಗೆಗೆ ಆದರ್ಶ ವಾಗಬೇಕಿದ್ದು, ಸ್ಮಾರಕ ನಿರ್ಮಾಣ ಮಾಡಬೇಕಿರುವುದು ಅವಶ್ಯಕವಾಗಿದೆ ಎಂದು ಅವರು ಹೇಳಿದ್ದಾರೆ.

ಹುತಾತ್ಮ ಯೋಧ ಗುರು ಮೊದಲ ವರ್ಷದ ಪುಣ್ಯಸ್ಮರಣೆ

ಸ್ಮಾರಕ ನಿರ್ಮಾಣಕ್ಕಾಗಿ ಮಂಡ್ಯ ಜಿಲ್ಲಾಧಿಕಾರಿಗಳ ಹೆಸರಿಗೆ 25 ಲಕ್ಷ ರೂಪಾಯಿಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಸಿಎಂ ಯಡಿಯೂರಪ್ಪ ಅವರು ಆದೇಶ ನೀಡಿದ್ದಾರೆ. ಯೋಧ ಗುರು ಅವರು ಫೆಬ್ರವರಿ 14ರಂದು ಪುಲ್ವಾಮದಲ್ಲಿ ನಡೆದ ದಾಳಿಯಲ್ಲಿ ಹುತಾತ್ಮರಾಗಿದ್ದರು.

ವರ್ಷವಾದರೂ ವಿಸರ್ಜಿಸಿಲ್ಲ ಯೋಧ ಗುರು ಚಿತಾಭಸ್ಮ, ಕೃಷ್ಣ ಬೇಸರ!