ಬೆಂಗಳೂರು [ಸೆ.08] : ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಭಾನುವಾರ ಬೆಂಗಳೂರು ನಗರ ಪ್ರದಕ್ಷಿಣೆ ಕೈಗೊಂಡು ಕಾಮಗಾರಿ ಸೇರಿದಂತೆ ಇತರೆ ಕಾರ್ಯಗಳ ಪರಿಶೀಲನೆ ನಡೆಸಲಿದ್ದಾರೆ. 

ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಿಂದ ಬೆಳಗ್ಗೆ 9ಕ್ಕೆ ಪ್ರಯಾಣ ಆರಂಭಿಸಲಿದ್ದು, ಮೂರು ತಾಸುಗಳ ಕಾಲ ನಗರದಲ್ಲಿ ಪ್ರದಕ್ಷಿಣೆ ಕೈಗೊಳ್ಳಲಿದ್ದಾರೆ.

ನಗರದ ಹೆಬ್ಬಾಳ, ಟಿನ್‌ ಫ್ಯಾಕ್ಟರ್‌, ಬೆಳ್ಳಂದೂರು, ಸಿಲ್‌್ಕಬೋರ್ಡ್‌ ಸೇರಿದಂತೆ ಇತರೆ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಮುಖ್ಯಮಂತ್ರಿಯ ಜತೆಗೆ ನಗರದ ಶಾಸಕರು, ಸಂಸದರು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದಾರೆ. 

ನಗರದಲ್ಲಿ ಕೈಗೊಂಡಿರುವ ಕಾಮಗಾರಿ, ಅಭಿವೃದ್ಧಿ ಕಾರ್ಯಗಳ ಕುರಿತು ವೀಕ್ಷಣೆ ನಡೆಸಿ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಲಿದ್ದಾರೆ.