ಶಿವಮೊಗ್ಗ: ನೆರೆ ಪ್ರದೇಶಕ್ಕೆ ಸಿಎಂ ಭೇಟಿ, ಕುಸಿದು ಬಿದ್ದ ರೈತ

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ನೆರೆ ಸಂತ್ರಸ್ತ ಪ್ರದೇಶಗಳಿಗ ಭೇಟಿ ನೀಡುತ್ತಿದ್ದಾರೆ. ಶಿವಮೊಗ್ಗದ ಹೆಗಲತ್ತಿ ಗ್ರಾಮಕ್ಕೆ ಸಿಎಂ ಭೇಟಿ ಸಂದರ್ಭ ರೈತರೊಬ್ಬರು ಕುಸಿದು ಬಿದ್ದಿರುವ ಘಟನೆ ನಡೆದಿದೆ. ಪ್ರವಾಹದಿಂದ ಹಾನಿಗೀಡಾದ ಅರಣ್ಯ ಭೂಮಿ, ಕೃಷಿ ಭೂಮಿ, ಆಸ್ತಿ ಪಾಸ್ತಿಗಳ ಸಮಗ್ರ ಸಮೀಕ್ಷೆಗೆ ಸೂಚನೆ ನೀಡಿದ್ದಾರೆ.

CM BS yediyurappa visits flooded areas in Shivamogga

ಶಿವಮೊಗ್ಗ(ಆ.13): ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದಲ್ಲಿ ಉಂಟಾದ ಭಾರೀ ಮಳೆ ಹಾಗೂ ಪ್ರವಾಹ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಇದೀಗ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ನೆರೆ ಸಂತ್ರಸ್ತ ಪ್ರದೇಶಗಳಿಗ ಭೇಟಿ ನೀಡುತ್ತಿದ್ದಾರೆ.

ಶಿವಮೊಗ್ಗದ ಹೆಗಲತ್ತಿ ಗ್ರಾಮಕ್ಕೆ ಸಿಎಂ ಭೇಟಿ ಸಂದರ್ಭ ರೈತರೊಬ್ಬರು ಕುಸಿದು ಬಿದ್ದಿರುವ ಘಟನೆ ನಡೆದಿದೆ. ಲೋ ಬಿಪಿಗೆ ಒಳಗಾಗಿ ರೈತ ಮಂಜುನಾಥ್‌ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ವೈದ್ಯರು ಮಂಜುನಾಥ್‌ಗೆ ಚಿಕಿತ್ಸೆ ನೀಡಿದ್ದಾರೆ. ಗುಡ್ಡಕುಸಿತದಲ್ಲಿ ಮಂಜುನಾಥ್ ಕುಟುಂಬ ಎರಡು ಎಕರೆ ತೋಟ ನಾಶವಾಗಿದ್ದು, ಇದರಿಂದ ಮಾನಸಿಕವಾಗಿ ನೊಂದಿದ್ದರು.

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತೀರ್ಥಹಳ್ಳಿ ತಾಲೂಕು ಹೆಗಲತ್ತಿ ಗ್ರಾಮದಲ್ಲಿ ಗುಡ್ಡ ಕುಸಿತದಿಂದ ಹಾನಿ ಸಂಭವಿಸಿರುವ ಸ್ಥಳಕ್ಕೆ ಮುಖ್ಯಮಂತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಪ್ರವಾಹದಿಂದ ಉಂಟಾಗಿರುವ  ಸ್ಥಳಗಳಲ್ಲಿ ಹಾನಿ ಪರಿಶೀಲಿಸಿ ಒಂದು ವಾರದ ಒಳಗಾಗಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರವಾಹದಲ್ಲಿ ಕೊಚ್ಚಿ ಹೋಯ್ತು ವಿದ್ಯಾರ್ಥಿನಿ ಕನಸು!

ಪ್ರವಾಹ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಸಧ್ಯದಲ್ಲಿಯೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಭರವಸೆ ನೀಡಿದ್ದು, ಪ್ರವಾಹದಿಂದ ಹಾನಿಗೀಡಾದ ಅರಣ್ಯ ಭೂಮಿ, ಕೃಷಿ ಭೂಮಿ, ಆಸ್ತಿ ಪಾಸ್ತಿಗಳ ಸಮಗ್ರ ಸಮೀಕ್ಷೆಗೆ ಸೂಚನೆ ನೀಡಿದ್ದಾರೆ. ಕೃಷಿಕರು ಕಂಗಾಲಾಗುವ ಅಗತ್ಯವಿಲ್ಲ. ರೈತರಿಗೆ ರಾಜ್ಯ ಸರಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

Latest Videos
Follow Us:
Download App:
  • android
  • ios