Asianet Suvarna News Asianet Suvarna News

ಕೊಡಗಿನಲ್ಲಿ ಗುಡ್ಡ ಕುಸಿತ ತಡೆ ಕಾರ್ಯಕ್ಕೆ ಸಿಎಂ 100 ಕೋಟಿ ಮಂಜೂರು: ಸಚಿವ ಕೃಷ್ಣ ಬೈರೇಗೌಡ

ಕೊಡಗು ಜಿಲ್ಲೆಯಲ್ಲಿ ಗುಡ್ಡ ಕುಸಿಯುವ ಪ್ರದೇಶವನ್ನು ಜಿಎಸ್ಐ ತಾಂತ್ರಿಕ ಸಂಸ್ಥೆ ಅಧ್ಯಯನ ಮಾಡಿ ವರದಿ ನೀಡಿದ್ದು, ಗುಡ್ಡು ಕುಸಿಯುವ ಪ್ರದೇಶಗಳಲ್ಲಿ ಅಗತ್ಯ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ 100 ಕೋಟಿ ರು. ಮಂಜೂರು ಮಾಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. 

CM sanctioned Rs 100 crore for hill slide prevention work in Kodagu Says Minister Krishna Byre Gowda gvd
Author
First Published Aug 1, 2024, 11:29 PM IST | Last Updated Aug 2, 2024, 9:22 AM IST

ಮಡಿಕೇರಿ (ಆ.01): ಕೊಡಗು ಜಿಲ್ಲೆಯಲ್ಲಿ ಗುಡ್ಡ ಕುಸಿಯುವ ಪ್ರದೇಶವನ್ನು ಜಿಎಸ್ಐ ತಾಂತ್ರಿಕ ಸಂಸ್ಥೆ ಅಧ್ಯಯನ ಮಾಡಿ ವರದಿ ನೀಡಿದ್ದು, ಗುಡ್ಡು ಕುಸಿಯುವ ಪ್ರದೇಶಗಳಲ್ಲಿ ಅಗತ್ಯ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ 100 ಕೋಟಿ ರು. ಮಂಜೂರು ಮಾಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಅತ್ತೂರು ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಸಹ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಸರ್ಕಾರ ಜಿಲ್ಲಾಡಳಿತದ ಜೊತೆ ಸದಾ ಸ್ಪಂದಿಸಿದೆ ಎಂದು ಅವರು ಹೇಳಿದರು.

ಮಲೆನಾಡು ಪ್ರದೇಶದಲ್ಲಿ ಗುಡ್ಡ ಕುಸಿಯುವುದನ್ನು ತಡೆಯುವ ಅಗತ್ಯ ಮುನ್ನೆಚ್ಚರ ಕ್ರಮಗಳನ್ನು ಕೈಗೊಳ್ಳಲು 300 ಕೋಟಿ ರು. ಬಿಡುಗಡೆಗೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದು, ಶಾಶ್ವತ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕಿದೆ ಎಂದು ತಿಳಿಸಿದರು. ಹವಾಮಾನ ವೈಪರಿತ್ಯದಿಂದ ಅತಿವೃಷ್ಟಿ ಉಂಟಾಗಿದ್ದು, ಜುಲೈ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಆಗಸ್ಟ್ ತಿಂಗಳಲ್ಲಿಯೂ ಹೆಚ್ಚಿನ ಮುನ್ನೆಚ್ಚರ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಸಿವಿಲ್ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್ ಸರ್ಕಾರ ಪತನ ಬಿಜೆಪಿಗರ ಕನಸು: ಶಾಸಕ ಕೊತ್ತೂರು ಮಂಜುನಾಥ್‌

ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ಆಗುತ್ತಿರುವುದರಿಂದ ರಸ್ತೆ, ವಿದ್ಯುತ್ ಪರಿವರ್ತಕ ಮತ್ತು ಕಂಬಗಳು, ಬೆಳೆ ಹಾನಿ ಸೇರಿದಂತೆ ಸಾಕಷ್ಟು ನಷ್ಟ ಉಂಟಾಗಿದೆ ಎಂದು ಮಾಹಿತಿ ನೀಡಿದರು. ಮುಂಗಾರು ಸಂದರ್ಭದಲ್ಲಿ ರಾಜ್ಯದಲ್ಲಿ ವಿವಿಧ ರೀತಿಯ ರಸ್ತೆ, ವಿದ್ಯುತ್, ಮನೆ, ಗುಡ್ಡ ಕುಸಿತ, ಹೀಗೆ ಹಲವು ರೀತಿಯ ಆಸ್ತಿ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು. ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಭೂಕುಸಿತ ಹಾಗೂ ಪ್ರವಾಹ ಪೀಡಿತ ಜನರು ಸ್ವಯಂ ಪ್ರೇರಣೆಯಿಂದ ಸ್ಥಳಾಂತರವಾಗಬೇಕು. ಜಿಲ್ಲಾಡಳಿತ ಆ ನಿಟ್ಟಿನಲ್ಲಿ ನಿಷ್ಠುರವಾಗಿ ನಡೆದುಕೊಳ್ಳಬೇಕು ಎಂದು ಕೃಷ್ಣಬೈರೇಗೌಡ ಸೂಚನೆ ನೀಡಿದರು.

ಸರ್ಕಾರಕ್ಕೆ ಪ್ರಾಣ ಉಳಿಸುವುದು ಮುಖ್ಯ. ಪ್ರಾಣ ಹೋದ ನಂತರ ಪರಿಹಾರ ನೀಡುವುದು ಮುಖ್ಯವಲ್ಲ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು. ಜನರು ಸಹ ಬದಲಾಗಬೇಕು ಎಂದು ಹೇಳಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ, ಶಾಸಕ ಡಾ.ಮಂತರ್ ಗೌಡ ಅವರು ವಾಲ್ನೂರು ತ್ಯಾಗತ್ತೂರು ಕಾಳಜಿ ಕೇಂದ್ರ, ಹಾರಂಗಿ ಬಳಿಯ ಅತ್ತೂರು, ನೆಲ್ಲಿಹುದಿಕೇರಿ ಪ್ರವಾಹ ಪೀಡಿತ ಪ್ರದೇಶ, ಸಿದ್ದಾಪುರದಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರ ಹೀಗೆ ಮಳೆ ಹಾನಿ ಪ್ರದೇಶಗಳಿಗೆ ವೀಕ್ಷಿಸಿ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.

Haveri: ಕೈಯಲ್ಲೇ ಬ್ಲಾಸ್ಟ್ ಆಯ್ತು ಮೊಬೈಲ್: ಸ್ವಲ್ಪದರಲ್ಲೇ ಇಬ್ಬರು ಯುವಕರು ಅಪಾಯದಿಂದ ಪಾರು!

ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಂದ ಹಾರಂಗಿ ಪ್ರವಾಸಿ ಮಂದಿರದಲ್ಲಿ ಮಾಹಿತಿ ಪಡೆದರು. ರಸ್ತೆ, ಸೇತುವೆ, ವಿದ್ಯುತ್ ಕಂಬ ಮತ್ತು ಪರಿವರ್ತಕಗಳು, ಬೆಳೆ ಹಾಗೂ ಮನೆ ಹಾನಿ... ಹೀಗೆ ಪ್ರಾಕೃತಿಕ ವಿಕೋಪದಿಂದ ಉಂಟಾದ ನಷ್ಟದ ಬಗ್ಗೆ ಮಾಹಿತಿ ಪಡೆದರು.

Latest Videos
Follow Us:
Download App:
  • android
  • ios