ಹಾವೇರಿ ಜಿಲ್ಲಾಸ್ಪತ್ರೆ ಅವ್ಯವಸ್ಥೆ: ಸಿದ್ದು ಗರಂ

ಸಭೆಗೂ ಮುನ್ನ ನೇರವಾಗಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆ ಅವ್ಯವಸ್ಥೆ ಕಂಡು ಕೆಂಡಾಮಂಡಲರಾದರ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಥಳದಲ್ಲಿಯೇ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿ.ಕೆ.ಅನಿಲ್‌ಕುಮಾರ್‌ ಅವರಿಗೆ ಕರೆ ಮಾಡಿ, ಆರೋಗ್ಯ ಇಲಾಖೆಯ ಸಹಾಯಕ ಎಂಜಿನಿಯರ್‌ರನ್ನು ತಕ್ಷಣ ಅಮಾನತುಗೊಳಿಸುವಂತೆ ಸೂಚನೆ ನೀಡಿದರು. 

CM Siddaramaiah Anger on Officials For Haveri District Hospital Chaos grg

ಹಾವೇರಿ(ಜು.26):  ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಹಾಗೂ ಮಕ್ಕಳು-ತಾಯಂದಿರ ವಾರ್ಡ್‌ ಮಳೆಯಿಂದ ಸೋರುತ್ತಿರುವುದನ್ನು ಕಂಡು ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಇಲಾಖೆ ಯ ಸಹಾಯಕ ಎಂಜಿನಿಯರ್‌ ಮಂಜುನಾಥರನ್ನು ಅಮಾನತುಗೊಳಿಸುವಂತೆ ಸೂಚಿಸಿದರು.

ನಗರಕ್ಕೆ ಮಂಗಳವಾರ ಪ್ರಗತಿ ಪರಿಶೀಲನೆ ಸಭೆಗೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಗೂ ಮುನ್ನ ನೇರವಾಗಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆ ಅವ್ಯವಸ್ಥೆ ಕಂಡು ಕೆಂಡಾಮಂಡಲರಾದರು. ಸ್ಥಳದಲ್ಲಿಯೇ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿ.ಕೆ.ಅನಿಲ್‌ಕುಮಾರ್‌ ಅವರಿಗೆ ಕರೆ ಮಾಡಿ, ಆರೋಗ್ಯ ಇಲಾಖೆಯ ಸಹಾಯಕ ಎಂಜಿನಿಯರ್‌ರನ್ನು ತಕ್ಷಣ ಅಮಾನತುಗೊಳಿಸುವಂತೆ ಸೂಚನೆ ನೀಡಿದರು.

ಹಾವೇರಿ ಜಿಲ್ಲೆ ವಿವಿಧ ಸೂಚ್ಯಂಕಗಳಲ್ಲಿ ತೀರಾ ಕಳಪೆ, ಪ್ರಗತಿ ಸಾಧಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಸೋರುತ್ತಿರೋ ಛಾವಣಿ: 

ಮಕ್ಕಳ ವಾರ್ಡ್‌, ತುರ್ತು ಚಿಕಿತ್ಸಾ ವಾರ್ಡ್‌, ತಾಯಂದಿರ ವಾರ್ಡ್‌ ಸೇರಿದಂತೆ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ, ಮಳೆಯಿಂದ ಸೋರುತ್ತಿರುವ ಗೋಡೆ, ಚಾವಣಿ ಕಂಡು ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.

ಇಂಜಿನಿಯರ್‌ಗೆ ತರಾಟೆ: 

ರೋಗಿಗಳನ್ನು ಬೇರೆ ಕಡೆ ಸ್ಥಳಾಂತರ ಮಾಡದೆ, ಅವರ ವಾರ್ಡಿನ ಮೇಲ್ಭಾಗ ಹೇಗೆ ಕಟ್ಟಡ ಕಾಮಗಾರಿ ನಡೆಸುತ್ತಿದ್ದೀರಿ. ನಿಮಗೆ ತಲೆಯಲ್ಲಿ ಬುದ್ಧಿ ಇಲ್ವಾ? ಎಂದು ಸ್ಥಳದಲ್ಲೇ ಇದ್ದ ಜಿಲ್ಲಾ ಶಸ್ತ್ರಚಿಕಿತ್ಸಕ, ಎಂಜಿನಿಯರ್‌ರನ್ನು ತರಾಟೆಗೆ ತೆಗೆದುಕೊಂಡರು.ಇನ್ನು ನಾಲ್ಕು ದಿನಗಳಲ್ಲಿ ಮಳೆ ಸೋರಿಕೆ ತಡೆಗಟ್ಟಬೇಕು ಎಂದು ಖಡಕ್‌ ಸೂಚನೆ ನೀಡಿದರು.

ಶಾಸಕ, ಸಚಿವರಿಗೂ ಪ್ರಶ್ನೆ: 

ನೀವು ಈ ಸಮಸ್ಯೆ ಬಗ್ಗೆ ಏಕೆ ಗಮನಹರಿಸಿಲ್ಲ ಎಂದು ವಿಧಾನಸಭಾ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರನ್ನೂ ಪ್ರಶ್ನಿಸಿದರು.ಗುತ್ತಿಗೆದಾರ ಕಾಮಗಾರಿ ವಿಳಂಬ ಮಾಡಿರುವ ಬಗ್ಗೆ ಶಾಸಕ ರುದ್ರಪ್ಪ ಲಮಾಣಿ ಸಿಎಂ ಗಮನಕ್ಕೆ ತಂದರು. ಕಳಪೆ ಕಾಮಗಾರಿ ಮತ್ತು ವಿಳಂಬ ಧೋರಣೆ ಮಾಡಿದ ಗುತ್ತಿಗೆ ದಾರನನ್ನು ಕಪ್ಪು ಪಟ್ಟಿಗೆ ಏಕೆ ಸೇರಿಸಿಲ್ಲ ಎಂದು ಸಿಎಂ ಪ್ರಶ್ನಿಸಿದರು.

Latest Videos
Follow Us:
Download App:
  • android
  • ios