ಭಾನುವಾರ ಬೆಳಗ್ಗೆ ಸಿದ್ದರಾಮಯ್ಯ ನಿವಾಸದ ಸುತ್ತಮುತ್ತ ಜನವೋ ಜನ. ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳು ಹಾಗೂ ಪೊಲೀಸರಿಂದ ಸಿದ್ದರಾಮಯ್ಯ ಅವರ ನಿವಾಸ ಗಿಜಿಗಿಜಿಡುತ್ತಿತ್ತು. 

ಮೈಸೂರು(ಜೂ.12): ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಮೇಲೆ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ್ದ ಸಿದ್ದರಾಮಯ್ಯ ಅವರನ್ನು ನೋಡಲು ಅವರ ನಿವಾಸದ ಎದುರು ಸಾವಿರಾರು ಜನ ನೆರೆದಿದ್ದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ವೇಳೆ ಸಿದ್ದರಾಮಯ್ಯ ಅವರು ಕೆಲಕಾಲ ಜನತಾದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ವರುಣ ಕ್ಷೇತ್ರದ ಮತದಾರರಿಗೆ ಶನಿವಾರ ಕೃತಜ್ಞತಾ ಸಮಾವೇಶದ ಸಿದ್ದರಾಮಯ್ಯ ಅವರು, ಟಿ.ಕೆ.ಬಡಾವಣೆಯಲ್ಲಿ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದರು. ಇನ್ನು ಭಾನುವಾರ ಬೆಳಗ್ಗೆ ಸಿದ್ದರಾಮಯ್ಯ ನಿವಾಸದ ಸುತ್ತಮುತ್ತ ಜನವೋ ಜನ. ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳು ಹಾಗೂ ಪೊಲೀಸರಿಂದ ಸಿದ್ದರಾಮಯ್ಯ ಅವರ ನಿವಾಸ ಗಿಜಿಗಿಜಿಡುತ್ತಿತ್ತು. 

ಕಾಂಗ್ರೆಸ್‌ ಗ್ಯಾರಂಟಿಗೆ ಚಾಲನೆ ಕೊಟ್ಟ ಬಿಜೆಪಿ ಶಾಸಕ: ಉಚಿತ ಬಸ್‌ ಟಿಕೆಟ್ ವಿತರಣೆ

ಬೆಂಗಳೂರಿಗೆ ತೆರಳಲು ಸಿದ್ದರಾಮಯ್ಯ ಅವರು ಮನೆಯಿಂದ ಹೊರಗೆ ಬಂದು ಸಾರ್ವಜನಿಕರಿಂದ ಕೆಲ ನಿಮಿಷ ಮನವಿ ಪತ್ರಗಳನ್ನು ಸ್ವೀಕರಿಸಿದರು. ಅಹವಾಲುಗಳ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಸೂಚಿಸಿದರು. ನಂತರ ಮೈಸೂರು ವಿಮಾನ ನಿಲ್ದಾಣಕ್ಕೆ ತೆರಳಿ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ತೆರಳಿದರು.