ನಾನು ನಾಸ್ತಿಕನಲ್ಲ ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾ ಇದ್ದೇವೆ, ಗುಡಿ ಕಟ್ಟುತ್ತೇವೆ, ಪೂಜಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಮಹದೇವಪುರ(ಬೆಂಗಳೂರು)(ಜ.23):  ಅಧರ್ಮದ ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿ ದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿ ಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಬೆಂಗಳೂರಿನ ಮಹದೇವಪುರ ವಿಧಾನ ಸಭಾ ಕ್ಷೇತ್ರದ ಬಿದರಹಳ್ಳಿ ಹೋಬಳಿಯ ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ಶ್ರೀ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾಠ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡು ಮಾತನಾಡಿದರು.

ಅಯೋಧ್ಯೆ ಪ್ರಾಣ ಪ್ರತಿಷ್ಠೆ: ಇದುವರೆಗೆ ಅತೀ ಹೆಚ್ಚು ವೀಕ್ಷಿಸಿದ ಯೂಟ್ಯೂಬ್ ಲೈವ್ ಸ್ಟ್ರೀಮ್

ನಾನು ನಾಸ್ತಿಕನಲ್ಲ ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾ ಇದ್ದೇವೆ, ಗುಡಿ ಕಟ್ಟುತ್ತೇವೆ, ಪೂಜಿಸುತ್ತೇವೆ ಎಂದರು.

ಜೈಶ್ರೀರಾಂ ಘೋಷಣೆ: 

ಸಿದ್ದರಾಮಯ್ಯ ಅವರು, ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬಬ್ಬ ಭಕ್ತರ ಸ್ವತ್ತು ಎನ್ನುತ್ತಾ ತಾವೂ ಜೈ ಶ್ರೀರಾಮ್ ಘೋಷಣೆ ಕೂಗಿ ನೆರೆದಿದ್ದ ಸಾರ್ವಜನಿಕರಿಗೂ ಕೂಗಿಸಿದರು.