ರಾಯಚೂರಿಗೆ ಏಮ್ಸ್‌ಗಾಗಿ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ಏಮ್ಸ್ ಮಂಜೂರಿಗಾಗಿ ಒತ್ತಾಯಿಸಿ ಕಳೆದ 401 ದಿನಗಳಿಂದ ರಾಯಚೂರು ನಗರದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಇದರ ಜೊತೆಗೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ತಮ್ಮ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಪತ್ರ ಬರೆದು ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ಮಾಡಬೇಕು ಎಂದು ಕೋರಿದ ಸಿಎಂ ಸಿದ್ದರಾಮಯ್ಯ
ರಾಯಚೂರು(ಜೂ.18): ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್)ಯನ್ನು ರಾಯಚೂರು ಜಿಲ್ಲೆಗೆ ಮಂಜೂರು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಶಿಫಾರಸ್ಸು ಪತ್ರವನ್ನು ಶನಿವಾರ ಬರೆದಿದ್ದಾರೆ.
ಏಮ್ಸ್ ಮಂಜೂರಿಗಾಗಿ ಒತ್ತಾಯಿಸಿ ಕಳೆದ 401 ದಿನಗಳಿಂದ ನಗರದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಇದರ ಜೊತೆಗೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ತಮ್ಮ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಪತ್ರ ಬರೆದು ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ಮಾಡಬೇಕು ಎಂದು ಕೋರಿದ್ದಾರೆ.
Raichur AIIMS: 400ನೇ ದಿನಕ್ಕೆ ಕಾಲಿಟ್ಟಏಮ್ಸ್ ಹೋರಾಟ!
ಕೇಂದ್ರದ ಮಹತ್ವಕಾಂಕ್ಷಿ ಜಿಲ್ಲೆಗಳಲ್ಲೊಂದಾಗಿರುವ ರಾಯಚೂರು ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ ಮಟ್ಟಹಾಗೂ ತಲಾ ಆದಾಯವು ಇತರ ಪ್ರದೇಶಗಳಿಂದ ಕಡಿಮೆ ಪ್ರಮಾಣದಲ್ಲಿದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲದ ವಾತಾವರಣ ಹೊಂದಿದೆ. ಇಂತಹ ಜಿಲ್ಲೆಗೆ ಆತ್ಯಾಧುನಿಕ ವೈದ್ಯಕೀಯ ಸಂಸ್ಥೆಯ ಅವಶ್ಯವಿದೆ. ಈ ಹಿನ್ನೆಲೆಯಲ್ಲಿ ಏಮ್ಸ್ ಸ್ಥಾಪಿಸಿ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೇವೆ ಕಲ್ಪಿಸಿಕೊಡಲು ಅನುಕೂಲ ಮಾಡಿಕೊಡಬೇಕು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಮ್ಮ ಆದ್ಯತೆಗಳಲ್ಲಿ ಒಂದಾಗಿದೆ. ಇದರ ಜೊತೆಗೆ ರಾಯಚೂರಿಗೆ ಏಮ್ಸ್ ಮಂಜೂರು ಮಾಡಬೇಕು ಎನ್ನುವುದು ಈ ಪ್ರದೇಶದ ಸಾರ್ವಜನಿಕರು, ಸಂಘ-ಸಂಸ್ಥೆ ಹಾಗೂ ಜನಪ್ರತಿನಿಧಿಗಳ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಏಮ್ಸ್ ಸ್ಥಾಪನೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದವರಿಗೆ ಸೂಚಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.