ಇಂದು ಆಲಮಟ್ಟಿ ಅಣೆಕಟ್ಟೆಗೆ ಸಿಎಂ ಬಾಗಿನ ಅರ್ಪಣೆ, ಗಂಗಾಪೂಜೆ

ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್‌ ನಿರ್ಮಾಣದ ಕುರಿತು ಚರ್ಚೆ ನಡೆಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah Will Be Perform Bagina to Almatti Dam in Vijayapura grg

ಆಲಮಟ್ಟಿ(ಸೆ.02):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಶನಿವಾರ) ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಆಗಮಿಸಲಿದ್ದು, ತುಂಬಿರುವ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.

ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಜಿಂದಾಲ್‌ ಏರ್‌ಸ್ಟ್ರಿಪ್‌ಗೆ ಆಗಮಿಸಿ, ಅಲ್ಲಿಂದ ಬೆಳಗ್ಗೆ 11.45ಕ್ಕೆ ಆಲಮಟ್ಟಿಯ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಅಲ್ಲಿಂದ ನೇರವಾಗಿ ಜಲಾಶಯ ಬಳಿ ಆಗಮಿಸಿ, ಕೃಷ್ಣಾ ನದಿಗೆ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಲಿದ್ದಾರೆ. ನಂತರ, ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್‌ ನಿರ್ಮಾಣದ ಕುರಿತು ಚರ್ಚೆ ನಡೆಸಲಿದ್ದಾರೆ. 

ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ: ಪರಿಹಾರ ಮುಂದಿನ ವರ್ಷ ಜಾರಿ, ಸಚಿವ ಎಂ.ಬಿ.ಪಾಟೀಲ

ಬಳಿಕ, ಮಧ್ಯಾಹ್ನ 3ಕ್ಕೆ ಆಲಮಟ್ಟಿಯಿಂದ ಬೆಂಗಳೂರಿಗೆ ತೆರಳಲಿದ್ದಾರೆ. ಸಿಎಂ ಭೇಟಿ ಹಿನ್ನೆಲೆಯಲ್ಲಿ ಜಲಾಶಯದ ಸುತ್ತಮುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios