Asianet Suvarna News Asianet Suvarna News

ಗೇಟ್‌ ಮುರಿತದಿಂದ ಮುಂದೂಡಿದ್ದ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಸೆ.22ಕ್ಕೆ

ಈಗ ಜಲಾಶಯ ಪುನಃ ಭರ್ತಿಯಾಗಿದೆ. ಕ್ರಸ್ಟ್ ಗೇಟ್ ದುರಸ್ತಿಗೆ ಶ್ರಮಿಸಿದ ಎಲ್ಲ ಅಧಿಕಾರಿಗಳು, ಎಂಜಿನಿಯರ್‌ ಹಾಗೂ ಕಾರ್ಮಿಕರು ಸೇರಿ ಸುಮಾರು 108 ಜನರಿಗೆ ಅಂದು ಸತ್ಕರಿಸಿ, ಗೌರವಿಸಲಾಗುವುದು ಎಂದ ಉಪಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ 

Cm Siddaramaiah will be perform bagina to Tungabhadra Dam on september 22nd grg
Author
First Published Sep 18, 2024, 4:26 AM IST | Last Updated Sep 18, 2024, 4:26 AM IST

ಕಲಬುರಗಿ(ಸೆ.18): ಸೆ.22ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಹೇಳಿದರು.

ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ನೆರೆಯ ಆಂಧ್ರಪ್ರದೇಶ ಕಡಪಾ, ಕರ್ನೂಲು ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ಸುಮಾರು ಒಂದು ತಿಂಗಳ ಹಿಂದೆ ಕಿತ್ತು ಹೋಗಿ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ರೈತರು ಆತಂಕಗೊಂಡಿದ್ದರು.

ಕಲ್ಯಾಣ ಕರ್ನಾಟಕದಲ್ಲಿ ಮೂಲಸೌಕರ್ಯದ್ದೇ ಸಮಸ್ಯೆ: ಅಜಯ್‌ ಸಿಂಗ್

ಸರ್ಕಾರ, ಸ್ಥಳೀಯ ಜನಪ್ರತಿನಿಧಿಗಳು, ಎಂಜಿನಿಯರ್‌ಗಳು ತೋರಿದ ಕಾಳಜಿ ಹಾಗೂ ತಜ್ಞ ಕನ್ಹಯ್ಯ ನಾಯ್ಡು ನೇತೃತ್ವದಲ್ಲಿ ನೂರಾರು ಕಾರ್ಮಿಕರ ತಂಡ ಶ್ರಮವಹಿಸಿ ಕೇವಲ ಐದೇ ದಿನಗಳಲ್ಲಿ ಗೇಟ್‌ ಅಳವಡಿಸಿ ನೀರು ಪೋಲಾಗುವುದನ್ನು ನಿಯಂತ್ರಿಸಿದರು. 

ಪರಿಣಾಮವಾಗಿ ಈಗ ಜಲಾಶಯ ಪುನಃ ಭರ್ತಿಯಾಗಿದೆ. ಕ್ರಸ್ಟ್ ಗೇಟ್ ದುರಸ್ತಿಗೆ ಶ್ರಮಿಸಿದ ಎಲ್ಲ ಅಧಿಕಾರಿಗಳು, ಎಂಜಿನಿಯರ್‌ ಹಾಗೂ ಕಾರ್ಮಿಕರು ಸೇರಿ ಸುಮಾರು 108 ಜನರಿಗೆ ಅಂದು ಸತ್ಕರಿಸಿ, ಗೌರವಿಸಲಾಗುವುದು ಎಂದರು.

Latest Videos
Follow Us:
Download App:
  • android
  • ios