ಸಿಎಂ ಬೆಂಗಾವಲು ವಾಹನ ಪಲ್ಟಿ : ಮೂವರಿಗೆ ಗಾಯ

ಬೆಳಗಾವಿ ಜಿಲ್ಲೆಗೆ ಸಿಎಂ ಯಡಿಯೂರಪ್ಪ ಅವರ ಬೆಂಗಾವಲು ವಾಹನ ಬಾಗಲಕೋಟೆ ಜಿಲ್ಲೆಯಲ್ಲಿ ಪಲ್ಟಿಯಾಗಿದ್ದು ಈ ವೇಳೆ ಮೂವರು ಗಾಯಗೊಂಡಿದ್ದಾರೆ. 

CM Yediyurappa convoy vehicle topple 3 injured in Bagalkot

ಬಾಗಲಕೋಟೆ [ಅ04]: ಬೆಳಗಾವಿ ಜಿಲ್ಲಾ ಪ್ರವಾಸಕ್ಕೆ ತೆರಳಿರುವ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಅವರು ಬಂದೋಬಸ್ತ್  ಪೊಲೀಸ್ ವಾಹನ ಪಲ್ಟಿಯಾಗಿದೆ. 

ಸಿಎಂ ಯಡಿಯೂರಪ್ಪ ಕಾರ್ಯಕ್ರಮಕ್ಕೆ  ಬಂದೂಬಸ್ತ್ ಗಾಗಿ ತೆರಳುತ್ತಿದ್ದ ಪೋಲಿಸ್ ವಾಹನ ಬಾಗಲಕೋಟೆ ಜಿಲ್ಲೆಯ ಸೈದಾಪುರದ ಕಪ್ಪಲಗುದ್ದಿ  ಕ್ರಾಸ್ ಬಳಿಯಲ್ಲಿ ಪಲ್ಟಿಯಾಗಿದೆ. ಈ ವೇಳೆ PSI ಸೇರಿ ಮೂವರು ಗಾಯಗೊಂಡಿದ್ದಾರೆ.  

ಇಳಕಲ್ ಠಾಣೆಯ ಪಿಎಸ್ ಐ ಕುಮಾರ್ ಹೆಡಕರ್ ಚಾಲಕ ಶಿವಾನಂದ, ಪೇದೆ ಮಂಜುನಾಥ ಅವರು ಗಾಯಗೊಂಡಿದ್ದು, ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇಂದು ಬೆಳಗಾವಿಗೆ ಸಿಎಂ ಆಗಮನ ಹಿನ್ನೆಲೆಯಲ್ಲಿ ಪೋಲಿಸರು ವಾಹನದೊಂದಿಗೆ ರಿಹರ್ಸಲ್ ನಲ್ಲಿ ತೊಡಗಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಕಬ್ಬಿನ ಹೊಲಕ್ಕೆ ನುಗ್ಗಿ ಪಲ್ಟಿಯಾಗಿದೆ.

ಬೆಳಗಾವಿ ಜಿಲ್ಲೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ತೆರಳಿದ್ದು  ಅಲ್ಲಿ ನೆರೆ ಸಂತ್ರಸ್ತರಿಗೆ ಕಟ್ಟಿಕೊಡಲಾಗುತ್ತಿರುವ ಮನೆಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ.

Latest Videos
Follow Us:
Download App:
  • android
  • ios