Asianet Suvarna News Asianet Suvarna News

ವೀರಶೈವ ಸಮಾಜದವರು ಯಾವುದೇ ಕಾರಣಕ್ಕೂ ನಮ್ಮ ಕೈ ಬಿಡಲ್ಲ: ಸಿಎಂ

ನಿರೀಕ್ಷೆ ಮಾಡದ ಪ್ರಮಾಣದಲ್ಲಿ ಅಥಣಿ, ಕಾಗವಾಡ, ಗೋಕಾಕದಲ್ಲಿ ಪ್ರಚಾರ ಸಭೆ ನಡೆಸಲಾಗಿದೆ| ಜಾರಕಿಹೊಳಿ‌ ಕ್ಷೇತ್ರದಲ್ಲಿ ಅತಿ ದೊಡ್ಡ ಪ್ರಚಾರ ಸಭೆ ಮಾಡಲಾಯಿತು| 15 ಕ್ಷೇತ್ರಗಳಲ್ಲಿ ಗೆಲ್ಲುವ ಸಂಕಲ್ಪ ನಮ್ಮದು, ಅದೇ ವಾತಾವರಣ ಇದೆ ಎಂದ ಸಿಎಂ| ಕಾಂಗ್ರೆಸ್-ಜೆಡಿಎಸ್ ನಾಯಕರು ಏನೇ ಹೇಳಿದ್ರೂ ನಾವು 15 ಕ್ಷೇತ್ರಗಳಲ್ಲಿ ಗೆಲ್ತೇವೆ| ಮೂರುವರೆ ವರ್ಷ ಅಭಿವೃದ್ಧಿ ಕಾರ್ಯಗಳಲ್ಲಿ ಹೆಚ್ಚಿನ ಗಮನ ಕೊಡುತ್ತೇನೆ|

CM Yediyurappa Talked About Veerashaiva Community
Author
Bengaluru, First Published Nov 24, 2019, 10:57 AM IST

ಬೆಳಗಾವಿ(ನ.24): ವೀರಶೈವ ಸಮಾಜದವರು ಯಾವುದೇ ಕಾರಣಕ್ಕೂ ನಮ್ಮ ಕೈ ಬಿಡಲ್ಲ. 15 ಜನಗಳ ಪ್ರಯತ್ನದಿಂದ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಪಕ್ಷದಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿವೆ ಅವುಗಳೆನ್ನೆಲ್ಲ ಬದಿಗಿಟ್ಟು 15 ಜನರನ್ನು ವೀರಶೈವ ಸಮುದಾಯವರು ಬೆಂಬಲಿಸಿ ಅವರಿಗೆ ಮತ ಹಾಕಬೇಕು ಎಂದು ಸಿಎಂ ಯಡಿಯೂರಪ್ಪ ಅವರು ಹೇಳಿದ್ದಾರೆ.

ಭಾನುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿರೀಕ್ಷೆ ಮಾಡದ ಪ್ರಮಾಣದಲ್ಲಿ ಅಥಣಿ, ಕಾಗವಾಡ, ಗೋಕಾಕದಲ್ಲಿ ಪ್ರಚಾರ ಸಭೆ ನಡೆಸಲಾಗಿದೆ. ಜಾರಕಿಹೊಳಿ‌ ಕ್ಷೇತ್ರದಲ್ಲಿ ಅತಿ ದೊಡ್ಡ ಪ್ರಚಾರ ಸಭೆ ಮಾಡಲಾಯಿತು. 15 ಕ್ಷೇತ್ರಗಳಲ್ಲಿ ಗೆಲ್ಲುವ ಸಂಕಲ್ಪ ನಮ್ಮದು, ಅದೇ ವಾತಾವರಣ ಇದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಕಾಂಗ್ರೆಸ್-ಜೆಡಿಎಸ್ ನಾಯಕರು ಏನೇ ಹೇಳಿದ್ರೂ ನಾವು 15 ಕ್ಷೇತ್ರಗಳಲ್ಲಿ ಗೆಲ್ತೇವೆ, ಮೂರುವರೆ ವರ್ಷ ಅಭಿವೃದ್ಧಿ ಕಾರ್ಯಗಳಲ್ಲಿ ಹೆಚ್ಚಿನ ಗಮನ ಕೊಡುತ್ತೇನೆ ಎಂದು ಹೇಳಿದ್ದಾರೆ.  ಅಥಣಿ, ಕಾಗವಾಡ, ಗೋಕಾಕದಲ್ಲಿ ಬಿಜೆಪಿ ಬಂಡಾಯದ ಬಗ್ಗೆ ಮಾತನಾಡಿದ ಸಿಎಂ ಬಂಡಾಯದ ಸಾರಿದವರಿಗ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ನಮ್ಮದು ಬಿಜೆಪಿ ವಿರುದ್ಧ ಹೋರಾಟ ಅಲ್ಲ ರಮೇಶ್ ವಿರುದ್ಧ ಹೋರಾಟ ಎಂಬ ಸತೀಶ್ ಜಾರಕಿಹೊಳಿ‌ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಅವರು, ಉಪಚುನಾವಣೆಯ ಫಲಿತಾಂಶ ಬಂದ ಮೇಲೆ ಯಾರ ಹೋರಾಟ ಯಾರ ವಿರುದ್ಧ ಗೊತ್ತಾಗುತ್ತೆ ಎಂದು ಹೇಳಿದ್ದಾರೆ. 

ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ವಿಜಯೋತ್ಸವ ರೀತಿ 35 ಸಾವಿರಕ್ಕಿಂತ ಹೆಚ್ಚು ಜನರು ಸೇರಿದ್ದರು. ಡಿ. ಎರಡನೇ ತಾರೀಕು ಮತ್ತೊಮ್ಮೆ ಬೆಳಗಾವಿ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಪ್ರಚಾರ ನಡೆಸುತ್ತೇನೆ. ಉಮೇಶ್ ಕತ್ತಿಗೆ ಸಚಿವ ಸ್ಥಾನ ನೀಡ್ತಿರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ ಸ್ಥಾನ ಕೊಡದಿದ್ದರೆ ಅವರು ನನ್ನನ್ನು ಬಿಡಬೇಕಲ್ಲ ಎಂದ  ಹಾಸ್ಯ ಚಟಾಕಿ ಹಾರಿಸಿದರು. 

ಡಿಸೆಂಬರ್ 5ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.

Follow Us:
Download App:
  • android
  • ios