ಬೆಂಗಳೂರು(ಏ. 15)   ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಪ್ರಕರಣಗಳ ನಿಯಂತ್ರಣಕ್ಕೆ ಸರ್ಕಾರ ರಾತ್ರಿ ನಿಷೇಧಾಜ್ಞೆ  ಜಾರಿ ಮಾಡಿತ್ತು. ಆದರೆ ಯಾವುದೆ ಪ್ರಯೋಜನ ಆದಂತೆ ಕಾಣುತ್ತಿಲ್ಲ. 

ಸಿಎಂ ಬಿಎಸ್ ಯಡಿಯೂರಪ್ಪ ಸರ್ವಪಕ್ಷಗಳ ಸಭೆ ಕರೆದಿದ್ದು ಭಾನುವಾರ ಸಂಜೆ ಭವಿಷ್ಯ ನಿರ್ಧಾರವಾಗಲಿದೆ. ಸರ್ವಪಕ್ಷ ಸಭೆ ಬಳಿಕ ವೀಕೆಂಡ್ ಲಾಕ್​ಡೌನ್ ಘೋಷಿಸ್ತಾರಾ ಸಿಎಂ? ಎನ್ನುವ ಪ್ರಶ್ನೆ ಮೂಡಿದೆ.

ಕೊರೋನಾ ಹೊಡೆತಕ್ಕೆ ತತ್ತರಿಸಿದ ದೆಹಲಿ, ಮಹಾರಾಷ್ಟ್ರ

ಇನ್ನೊಂದು ಕಡೆ ಕುಂಭಮೇಳದ ಯಾತ್ರಿಗಳಿಗೆ ಕೊರೊನಾ ಟೆಸ್ಟ್​ ಕಡ್ಡಾಯ  ಮಾಡಲಾಗಿದೆ.  ಕೊರೊನಾ ಕಂಟ್ರೋಲ್​ಗೆ ಟಫ್ ರೂಲ್ಸ್​ ಅಗತ್ಯ ಎಂದು ತಜ್ಞರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ವರದಿ ಬಗ್ಗೆ ಸಿಎಂ ಜತೆ ಚರ್ಚಿಸಿ ಟಫ್​ ರೂಲ್ಸ್ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ದಿನವೊಂದಕ್ಕೆ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ ಹತ್ತು ಸಾವಿರ ದಾಟಿದೆ.. ಇನ್ನೊಂದು ಕಡೆ ದೇಶದಲ್ಲಿ ಒಂದೇ ದಿನ ಎರಡು ಲಕ್ಷಕ್ಕೂ  ಅಧಿಕ ಪ್ರಕರಣ ದಾಖಲಾಗಿದ್ದು ಮಹಾರಾಷ್ಟ್ರ ಮತ್ತು ದೆಹಲಿ ಸರ್ಕಾರಗಳು  ನಿಧಾನವಾಗಿ ಲಾಕ್ ಡೌನ್ ಮೊರೆ  ಹೋಗಿವೆ. 

ಉಪಚುನಾವಣೆಯೂ ಇದೆ: ರಾಜ್ಯದ  ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು ಏಪ್ರಿಲ್ 17 (ಶನಿವಾರ) ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾ ಪ್ರಚಾರದಲ್ಲಿ ಜನ ಸೇರಿದ್ದರ ಬಗ್ಗೆಯೂ ಟೀಕೆ ವ್ಯಕ್ತವಾಗಿತ್ತು. ಬೆಂಗಳೂರು, ಉಡುಪಿ-ಮಣಿಪಾಲ್, ತುಮಕೂರು, ಬೀದರ್, ಮಂಗಳೂರು, ತುಮಕೂರು ಸೇರಿ ಎಂಟು ಜಿಲ್ಲಾ ಕೇಂದ್ರದಲ್ಲಿ ಕೊರೋನಾ ನಿಷೇಧಾಜ್ಞೆ ಜಾರಿಯಲ್ಲಿದೆ. ಇದನ್ನೇ ವಿಸ್ತರಣೆ ಮಾಡುತ್ತಾರೋ ಅಥವಾ ಅನಿವಾರ್ಯವಾಗಿ ಲಾಕ್ ಡೌನ್ ಮೊರೆ ಹೋಗಬೇಕಾಗುತ್ತದೆಯೋ ಭಾನುವಾರ ತೀರ್ಮಾನವಾಗಲಿದೆ.