ಉಡುಪಿ: ಕರಾವಳಿ ಜಂಕ್ಷನ್- ಮಲ್ಪೆ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ
ಈ ರಸ್ತೆ ಆಭಿವೃದ್ಧಿಯಿಂದ ಮಲ್ಪೆ ಮೀನುಗಾರಿಕಾ ಬಂದರು ಮತ್ತು ಪ್ರವಾಸಿ ಕ್ಷೇತ್ರ ಬೀಚ್‌ಗೆ ತೆರಳುವ ಪ್ರವಾಸಿಗರಿಗೆ ಅನುಕೂಲವಾಗಲಿದ್ದು, ಪ್ರವಾಸೋದ್ಯ ಮತ್ತು ಅರ್ಥಿಕ ಚಟುವಟಿಕೆಗಳಿಗೆ ಸಹಾಯವಾಗಲಿದೆ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.
ಉಡುಪಿ(ಮಾ.11): ಬಹುವರ್ಷಗಳ ಬೇಡಿಕೆಯಾಗಿದ್ದ ಉಡುಪಿಯ ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗಿನ ರಸ್ತೆಯನ್ನು 70 ಕೋಟಿ ರು. ವೆಚ್ಚದಲ್ಲಿ ಚತುಷ್ಪಥಗೊಳಿಸುವ ಕಾಮಗಾರಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಈ ರಸ್ತೆ ಆಭಿವೃದ್ಧಿಯಿಂದ ಮಲ್ಪೆ ಮೀನುಗಾರಿಕಾ ಬಂದರು ಮತ್ತು ಪ್ರವಾಸಿ ಕ್ಷೇತ್ರ ಬೀಚ್‌ಗೆ ತೆರಳುವ ಪ್ರವಾಸಿಗರಿಗೆ ಅನುಕೂಲವಾಗಲಿದ್ದು, ಪ್ರವಾಸೋದ್ಯ ಮತ್ತು ಅರ್ಥಿಕ ಚಟುವಟಿಕೆಗಳಿಗೆ ಸಹಾಯವಾಗಲಿದೆ ಎಂದರು.
ಮಾನಸಿಕ ಅಸ್ವಸ್ಥ ಯುವಕ ಸಹಜ ಸ್ಥಿತಿಯತ್ತ, ಉಡುಪಿ ಬಂದು ಕರೆದೊಯ್ದ ಬಿಹಾರ ಕುಟುಂಬ
ಶಾಸಕ ರಘುಪತಿ ಭಟ್ ಸ್ವಾಗತಿಸಿದರು. ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೇ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಕೊಡವೂರು, ಸದಸ್ಯರಾದ ಪ್ರಭಾಕರ ಪೂಜಾರಿ, ವಿಜಯ ಕೊಡವೂರು ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಮಟ್ಟಾರು ರತ್ನಾಕರ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು. ನಗರಸಭಾ ಸದಸ್ಯ ಸುಂದರ ಕಲ್ಮಾಡಿ ವಂದಿಸಿದರು.