ಕೊಬ್ಬರಿ ಬೆಲೆ ಏರಿಕೆ: ಚಕಾರವೆತ್ತದ ಸಚಿವ, ಶಾಸಕ

ಕೊಬ್ಬರಿ ಬೆಲೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದರೂ ಕ್ವಿಂಟಾಲ್ ಕೊಬ್ಬರಿಗೆ 15 ಸಾವಿರ ರು. ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತನ್ನು ತಪ್ಪಿ ರೈತರನ್ನು ಪಾತಾಳಕ್ಕೆ ತಳ್ಳಿ ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

Coconut price hike: Agriculture Minister, MLA snr

 ತಿಪಟೂರು :  ಕೊಬ್ಬರಿ ಬೆಲೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದರೂ ಕ್ವಿಂಟಾಲ್ ಕೊಬ್ಬರಿಗೆ 15 ಸಾವಿರ ರು. ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತನ್ನು ತಪ್ಪಿ ರೈತರನ್ನು ಪಾತಾಳಕ್ಕೆ ತಳ್ಳಿ ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಗೃಹ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಬ್ಬರಿ ಬೆಳೆಯನ್ನು ಜೀವನಾಧಾರವನ್ನಾಗಿಸಿಕೊಂಡಿರುವ ರೈತರ ಬದುಕು ಅತಂತ್ರ ಸ್ಥಿತಿಯಲ್ಲಿದೆ. ಕ್ವಿಂಟಲ್‌ಗೆ 8500 ರು. ಇದ್ದ ಬೆಲೆ ಈಗ 7500 ರು. ಗೆ ಇಳಿಕೆಯಾಗಿದೆ. ಕೊಬ್ಬರಿ ಬೆಲೆ ಹೆಚ್ಚಳ ಮಾಡುವಂತೆ ಕಳೆದ ಎರಡು ವರ್ಷಗಳಿಂದ ರೈತರೊಂದಿಗೆ ನಿರಂತರ ಹೋರಾಟ ಮಾಡಿದರೂ ಸರ್ಕಾರ ಸ್ಪಂದಿಸಲಿಲ್ಲ. ಚುನಾವಣೆ ಸಂದರ್ಭದಲ್ಲಿ ರೈತರಲ್ಲಿ, ತೆಂಗು ಬೆಳೆಗಾರರಲ್ಲಿ ಸುಳ್ಳು ಭರವಸೆ ಮೂಡಿಸಿ ಈಗ ಗ್ಯಾರಂಟಿ ಯೋಜನೆಗಳಲ್ಲಿ ಸರ್ಕಾರ ಮುಳುಗಿ ಹೋಗಿದೆ ಎಂದರು.

ರೈತರು ಜೀವನ ಪರ್ಯಂತ ನೆಮ್ಮದಿಯಿಂದ ಜೀವನ ನಡೆಸದಂತಹ ದುಸ್ಥಿತಿಗೆ ಸರ್ಕಾರ ತಂದೊಡ್ಡಿದೆ. ಕಳೆದ ಬಾರಿ ವಿಧಾನಸಭೆ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕಿ 1250 ರು. ಜಾರಿ ಮಾಡಿಸಿದ್ದರು. ಆದರೆ, ರಾಜ್ಯ ಸರ್ಕಾರ ಬೆರಣಿಕೆಯಷ್ಟು ರೈತರಿಗೆ ಮಾತ್ರ ನೀಡಿ ಏಕಾಏಕಿ ನಫೆಡ್ ಕೇಂದ್ರವನ್ನೇ ಮುಚ್ಚುವ ಮೂಲಕ ರೈತರಿಗೆ ಮಹಾ ಮೋಸ ಮಾಡಿತು. ಬಿಜೆಪಿ ಸರ್ಕಾರ ರೈತರಿಗೆ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ಕೊಟ್ಟರೆ ಈ ಸರ್ಕಾರವೂ ರೈತರನ್ನು ದಿವಾಳಿಯನ್ನಾಗಿ ಮಾಡುತ್ತಿದೆ. ರೈತರೊಂದಿಗೆ ಪಾದಯಾತ್ರೆ ಮೂಲಕ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಎರಡು ತಿಂಗಳಾದರೂ ಗಮನಹರಿಸಿಲ್ಲ. ಜಿಲ್ಲೆಯ ಸಚಿವರಾಗಲಿ, ಇಲ್ಲಿನ ಶಾಸಕರಾಗಲಿ ಧ್ವನಿ ಎತ್ತಿಲ್ಲ ಎಂದು ಆಗ್ರಹಿಸಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಈ ಬಗ್ಗೆ ಸಚಿವರು ಹಾಗೂ ಶಾಸಕರು ಸರ್ಕಾರದ ಗಮನಸೆಳೆದು ನಫೆಡ್ ಕೇಂದ್ರ ತೆರೆಯುವಂತೆ ಆಗ್ರಹಿಸಿ ಕ್ವಿಂಟಲ್ ಕೊಬ್ಬರಿಗೆ ಕನಿಷ್ಠ 15 ಸಾವಿರ ರು. ಗಳನ್ನಾದರೂ ಮಾಡುವಂತೆ ಒತ್ತಾಯಿಸಬೇಕೆಂದು ಆಗ್ರಹಿಸಿದರು.

ಜಾನುವಾರುಗಳಿಗೆ ಮೇವಿಲ್ಲ ಪರದಾಡುವಂತಾಗಿದ್ದು, ಶೀಘ್ರ ಗೋಶಾಲೆ ತೆರೆದು ಹೈನುಗಾರಿಕೆ ನಂಬಿ ಜೀವನ ನಡೆಸುತ್ತಿರುವ ರೈತರಿಗೆ ಅನುಕೂಲ ಕಲ್ಪಿಸಬೇಕು. ಜಿಲ್ಲಾಧಿಕಾರಿಗಳು ಈಗಾಗಲೆ ಮೇವು ಸರಬರಾಜು ಮಾಡಲಾಗುತ್ತಿದೆ ಎಂದು ಹೇಳುತ್ತಿದೆ. ಆದರೆ, ನಮ್ಮ ತಾಲೂಕಿನ ಮೇವು ಬಂದಿಲ್ಲ. ಈ ಬಗ್ಗೆ ಶಾಸಕರು ಗಮನಹರಿಸಬೇಕಿದೆ. ರಾಜ್ಯ ಸರ್ಕಾರ ಪ್ರತಿಯೊಂದಕ್ಕೂ ಕೇಂದ್ರದ ಕಡೆ ಬೆಟ್ಟು ತೋರಿಸದೆ ರೈತರಿಗೆ ಬೇಕಾದ ಅಗತ್ಯ ಸೌಲಭ್ಯ ಕಲ್ಪಿಸುವತ್ತ ಚಿಂತನೆ ಮಾಡಬೇಕೆಂದು ಒತ್ತಾಯಿಸಿದರು.

ಕ್ವಿಂಟಲ್ ರಾಗಿಗೆ 5 ಸಾವಿರ ರು.

ಸರ್ಕಾರ ಈಗಾಗಲೇ ರೈತರಿಂದ ರಾಗಿ ಖರೀದಿ ಮಾಡಲು ಸಜ್ಜಾಗಿದ್ದು ಪ್ರತಿ ಕ್ವಿಂಟಲ್‌ಗೆ 3846 ರು. ನಿಗದಿ ಮಾಡಿದೆ. ಆದರೆ, ಈ ವರ್ಷ ಮಳೆ ಇಲ್ಲದ ತೀವ್ರ ಬರಗಾಲ ಉಂಟಾಗಿ ರಾಗಿ ಇಳುವರಿ ಕಡಿಮೆಯಾಗಿದೆ. ಆದ್ದರಿಂದ, ಕ್ವಿಂಟಲ್ ರಾಗಿಗೆ ಐದು ಸಾವಿರ ರು. ಘೋಷಣೆ ಮಾಡಬೇಕು. 

Latest Videos
Follow Us:
Download App:
  • android
  • ios