ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಸಹಕಾರ ಸಚಿವರಾಗಿ ಕೆ.ಎನ್‌.ರಾಜಣ್ಣ ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಮೊದಲ ಬಾರಿಗೆ ಮಂತ್ರಿಯಾದ ಹೆಗ್ಗಳಿಕೆಗೆ ಪಾತ್ರರಾದರು.

 ಉಗಮ ಶ್ರೀನಿವಾಸ್‌

ತುಮಕೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಸಹಕಾರ ಸಚಿವರಾಗಿ ಕೆ.ಎನ್‌.ರಾಜಣ್ಣ ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಮೊದಲ ಬಾರಿಗೆ ಮಂತ್ರಿಯಾದ ಹೆಗ್ಗಳಿಕೆಗೆ ಪಾತ್ರರಾದರು.

ಬುದ್ದ, ಬಸವ, ಅಂಬೇಡ್ಕರ್‌ ಹಾಗೂ ಮಹರ್ಷಿ ವಾಲ್ಮೀಕಿ ಅವರ ಹೆಸರಿನಲ್ಲಿ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ರಾಜಣ್ಣ ಅವರು ತಮ್ಮ ರಾಜಕೀಯ ಜೀವನದ ಹೊಸ ಇನ್ನಿಂಗ್‌್ಸ ಆರಂಭಿಸಿದ್ದಾರೆ. 3 ಬಾರಿ ಶಾಸಕ, ಒಮ್ಮೆ ವಿಧಾನ ಪರಿಷತ್‌ ಸದಸ್ಯ, ಡಿಸಿಸಿ ಬ್ಯಾಂಕ್‌ ಹಾಗೂ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರೂ ಆಗಿರುವ ಕೆ.ಎನ್‌.ರಾಜಣ್ಣ ತುಮಕೂರು ಜಿಲ್ಲೆಯ ಪ್ರಭಾವಿ ನಾಯಕ.

ಬೆಳ್ಳಾವಿಯಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ರಾಜಣ್ಣ ಕ್ಷೇತ್ರ ಪುನರ್‌ ವಿಂಗಡಣೆ ಬಳಿಕ ಮಧುಗಿರಿ ಕ್ಷೇತ್ರಕ್ಕೆ ಹೋಗಿ ಎರಡು ಬಾರಿ ಆಯ್ಕೆಯಾಗಿದ್ದಾರೆ. ಕೃಷಿಕ ಕುಟುಂಬದಿಂದ ಬಂದ ರಾಜಣ್ಣ ವಿದ್ಯಾರ್ಥಿ ನಾಯಕರಾಗಿ ರಾಜಕೀಯಕ್ಕೆ ಧುಮುಕಿದರು. 1969ರಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಕಾಂಗ್ರೆಸ್‌ ಪಕ್ಷವನ್ನು ಪ್ರವೇಶಿಸಿದ ರಾಜಣ್ಣ ರಾಷ್ಟ್ರೀಯ ಫೆಡರೇಶನ್‌ ಆಫ್‌ ಸ್ಟೇಟ್‌ ಕೋ-ಆಪರೇಟಿವ್‌ ಬ್ಯಾಂಕ್ಸ್‌ ಲಿಮಿಟೆಡ್‌ ಮುಂಬೈನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಬಿಎಸ್‌ಸಿ, ಎಲ್‌ಎಲ್‌ಬಿ ವ್ಯಾಸಂಗ ಮಾಡಿರುವ ರಾಜಣ್ಣ ಕೃಷಿಕ್‌ ಭಾರತಿ ಕೋ-ಆಪರೇಟಿವ್‌ ಲಿಮಿಟೆಡ್‌ನ ಸದಸ್ಯರಾಗಿ ಚುನಾಯಿತರಾಗಿದ್ದರು. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌, ಬೆಂಗಳೂರು ಅಧ್ಯಕ್ಷರಾಗಿ ಚುನಾಯಿತರಾಗಿ 2001 ರಿಂದ 2005ರವರೆಗೆ ಸೇವೆ ಸಲ್ಲಿಸಿದ್ದಾರೆ. ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ತುಮಕೂರಿನ ಅಧ್ಯಕ್ಷರಾಗಿ 5 (ಐದು) ಅವಧಿಗೆ ಸೇವೆ ಸಲ್ಲಿಸಿದ್ದಾರೆ ಮತ್ತು ಪ್ರಸ್ತುತ ಬ್ಯಾಂಕಿನ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ.

ಜಿಲ್ಲೆಯ ರೈತರ ಸರ್ವತೋಮುಖ ಅಭಿವೃದ್ಧಿಗಾಗಿ ಬ್ಯಾಂಕ್‌:

1998 ರಿಂದ 2004 ರವರೆಗೆ ಬೆಳ್ಳಾವಿ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಚುನಾಯಿತರಾದರು ಮತ್ತು 2004-2008ರವರೆಗೆ ವಿಧಾನ ಪರಿಷತ್‌ ಸದಸ್ಯರಾಗಿ, ಮಧುಗಿರಿ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಚುನಾಯಿತರಾಗಿ ಮತ್ತು ಮೇ 2013 ರಿಂದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಮೂರು ಅವಧಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ನಿರ್ದೇಶಕರಾಗಿ, 10 ವರ್ಷಗಳ ಅವಧಿಗೆ ತುಮಕೂರಿನ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರುಕಟ್ಟೆಸೊಸೈಟಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹದ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ನೀಡುವ ಸಹಕಾರ ರತ್ನ ಸಹಕಾರ ಇಲಾಖೆಯ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಿದೆ. 1970 ರಿಂದ ತಾಲೂಕು ಕಾಂಗ್ರೆಸ್‌ ಪಕ್ಷದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು 1976ರಲ್ಲಿ ಕ್ಯಾತಸಂದ್ರದ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 1980 ರಿಂದ 1984 ರವರೆಗೆ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ತುಮಕೂರು ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ 1980 ರಲ್ಲಿ ತುಮಕೂರಿನ ತಾಲೂಕು ಭೂ ನ್ಯಾಯಮಂಡಳಿ ಮಂಡಳಿ ಸದಸ್ಯರಾಗಿ, ಕರ್ನಾಟಕ ರಾಜ್ಯ ಹಣಕಾಸು ನಿಗಮದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ವಿದೇಶಗಳಲ್ಲಿ ಅನೇಕ ಅಂತಾರಾಷ್ಟ್ರೀಯ ಸಹಕಾರ ವಿಚಾರ ಸಂಕಿರಣಗಳು ಮತ್ತು ಕಾರ್ಯಾಗಾರಗಳಲ್ಲಿ ಭಾಗವಹಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾನಿಲಯದ ಸೆನೆಚ್‌ ಸದಸ್ಯರಾಗಿ, ಜಿಲ್ಲೆಯ ಸಹಕಾರಿ ಆಂದೋಲನದ ಅಪೆಕ್ಸ್‌ ಸಂಸ್ಥೆಯಾದ ಜಿಲ್ಲಾ ಸಹಕಾರ ಯೂನಿಯನ್‌ನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಸಹಕಾರಿ ಆಂದೋಲನದ ಹಿರಿಯ ಮತ್ತು ಹಿರಿಯ ಸಹಕಾರಿ ಎಂದು ಗುರುತಿಸಲಾಗಿದದು, ಕೃಷಿ ಉತ್ಪನ್ನ ಮಾರುಕಟ್ಟೆಸಮಿತಿ ತುಮಕೂರು ಸದಸ್ಯರಾಗಿ ಎರಡು ಅವಧಿಗೆ ಚುನಾಯಿತರಾಗಿದ್ದಾರೆ.

5 ಸಹಕಾರಿ ಸಂಸ್ಥೆಗಳು ಕೆಎನ್‌ಆರ್‌ ಹೆಸರಿನಲ್ಲಿ

ಕ್ಯಾತಸಂದ್ರ ಚಂದ್ರಮೌಳೇಶ್ವರ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ, ತುಮಕೂರು ಸ್ಥಾಪಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಸಹಕಾರಿ ಚಳವಳಿಯ ಚಾಂಪಿಯನ್‌ ಆಗಿ 5 ಸಹಕಾರಿ ಸಂಸ್ಥೆಗಳು ಕೆ.ಎನ್‌.ರಾಜಣ್ಣ ಅವರ ಹೆಸರಿನಲ್ಲಿ ಅಸ್ತಿತ್ವಕ್ಕೆ ಬಂದಿವೆ. ಕೆಎನ್‌ಆರ್‌ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌, ಕೆಎನ್‌ಆರ್‌ ಮಹಿಳಾ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌, ಕೆಎನ್‌ಆರ್‌ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಲಿಮಿಟೆಡ್‌, ಕೆಎನ್‌ಆರ್‌ ಶೆಡ್ಯೂಲ… ಟ್ರೈಬ್ಸ… ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌, ಸಾವಯವ ರಚನೆಯ ಉತ್ಪಾದನೆ ಮತ್ತು ಮಾರುಕಟ್ಟೆಸಹಕಾರ, ತುಮಕೂರಿನ ಟೌನ್‌ ಕ್ಲಬ… ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ತುಮಕೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಗೌರವಾಧ್ಯಕ್ಷರಾಗಿ, ಮಧು ಸ್ಪೋಟ್ಸ್‌ರ್‍ ಕ್ಲಬ್‌ ಅಧ್ಯಕ್ಷ , ತುಮಕೂರು ಕರಾಟೆ ಕ್ಲಬ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.