Nanjanagudu: ಹುಲಿ ಸೆರೆಗಾಗಿ ಕೂಂಬಿಂಗ್ ಆರಂಭ
ತಾಲೂಕಿನ ಮಹದೇವನಗರದ ರೈತನ ಮೇಲೆ ದಾಳಿ ನಡೆಸಿ ಹಸುವನ್ನು ಬಲಿ ಪಡೆದಿದ್ದ ಹುಲಿ ಸೆರೆಗಾಗಿ ಅರಣ್ಯಾಧಿಕಾರಿಗಳು ಕೂಂಬಿಂಗ್ ನಡೆಸಿದರು.
ನಂಜನಗೂಡು : ತಾಲೂಕಿನ ಮಹದೇವನಗರದ ರೈತನ ಮೇಲೆ ದಾಳಿ ನಡೆಸಿ ಹಸುವನ್ನು ಬಲಿ ಪಡೆದಿದ್ದ ಹುಲಿ ಸೆರೆಗಾಗಿ ಅರಣ್ಯಾಧಿಕಾರಿಗಳು ಕೂಂಬಿಂಗ್ ನಡೆಸಿದರು.
ವಲಯ ಅರಣ್ಯಾಧಿಕಾರಿ ನಾರಾಯಣರಾವ್ ಮಾತನಾಡಿ, ವೃದ್ದನ ಮೇಲೆ ದಾಳಿ ನಡೆಸಿದ್ದ ಹುಲಿಯ ಪತ್ತೆಗಾಗಿ ಗುರುವಾರ ಕುದುರೆಗುಂಡಿ ಹಿನ್ನೀರಿನ ಪ್ರದೇಶದ 6 ರಿಂದ 7 ಕಿ.ಮೀ ವ್ಯಾಪ್ತಿ ಪ್ರದೇಶದಲ್ಲಿ ವಿಶೇಷ ಹುಲಿ ರಕ್ಷಣಾ ಪಡೆಯ 15 ಮಂದಿ, 10 ಮಂದಿ ಅರಣ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆ ನಡೆಸಿದೆ,
ಹುಲಿ ಪತ್ತೆಗಾಗಿ 10 ಕಡೆಗಳಲ್ಲಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ, ಕುದುರೆಗುಂಡಿ ಹಿನ್ನೀರಿನ ಪ್ರದೇಶದಲ್ಲಿ 2 ಬಾರಿ ಹುಲಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದೆ, ಇಂದು ಸಂಜೆ ವೇಳೆಗೆ ರಾಮಾಪುರ ಆನೆ ಶಿಬಿರದಿಂದ ಹುಲಿಯನ್ನು ಸೆರೆ ಹಿಡಿಯುವ ಕಾರ್ಯಾಚಣೆಗಾಗಿ ಧರ್ಮ ಹಾಗೂ ಪಾರ್ಥ ಎಂಬ 2 ಸಾಕಾನೆಗಳನ್ನು ಕರೆಸಲಾಗುತ್ತಿದ್ದು, ಶುಕ್ರವಾರ ಆನೆ ಕೂಂಬಿಂಗ್ ಮೂಲಕ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದರು.
ಕಾಡಾನೆ ಜೊತೆ ಹುಲಿ ಭೀತಿ
ಚಿಕ್ಕಮಗಳೂರು (ಫೆ.16): ಇಷ್ಟು ದಿನಗಳ ಕಾಲ ಕಾಡಾನೆ ಹಾವಳಿಯಿಂದ ಬೇಸತ್ತಿದ್ದ ರೈತರು ಈಗ ಹುಲಿ ದಾಳಿಯಿಂದ ತಮ್ಮ ಮನೆಯಲ್ಲಿ ಪ್ರೀತಿಯಿಂದ ಸಾಕಿದ್ದ ಜಾನುವಾರುಗಳನ್ನು ಕಳೆದುಕೊಳ್ಳುತ್ತಿದ್ದು, ಇದೇ ರೀತಿ ಆದರೆ ಮುಂದಿನ ದಿನಗಳಲ್ಲಿ ತಮ್ಮ ಜೀವನಕ್ಕೆ ಆಸರೆಯಾಗಿರುವ ದನಕರುಗಳನ್ನು ಉಳಿಸಿಕೊಳ್ಳಲಾಗದೆ ಬೀದಿಗೆ ಬೀಳಬೇಕಾದಂತಹ ಸಂದಿಗ್ಧ ಪರಿಸ್ಥಿತಿ ಬಂದೊದಗ ಬಹುದು ಎನ್ನುವ ಭೀತಿಯಲ್ಲಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಹುಲಿ ಹಾವಳಿ ಮುಂದುವರೆದಿದ್ದು, ಹುಲಿ ದಾಳಿಗೆ ಮತ್ತೊಂದು ಹಸು ಬಲಿಯಾಗಿದೆ. ಜಿಲ್ಲೆಯಲ್ಲಿ ಕಳೆದ ಆರು ತಿಂಗಳಿನಿಂದ ಹುಲಿ ದಾಳಿ ನಿರಂತರವಾಗಿದ್ದು, ಜಾನುವಾರುಗಳನ್ನು ಸಾಕಿಕೊಂಡು ಬದುಕು ಸಾಗಿಸುತ್ತಿದ್ದ ರೈತ ಕುಟುಂಬ ಭವಿಷ್ಯದ ಜೀವನದ ಕುರಿತು ಚಿಂತಿಸುವಂತಾಗಿದೆ.
ಹುಲಿ ದಾಳಿಯಿಂದ 50ಕ್ಕೂ ಹೆಚ್ಚು ಜಾನುವಾರು ಬಲಿ :
ಮಲೆನಾಡಲ್ಲಿ ಬೆಳಗ್ಗೆ ಮನೆಯಿಂದ ಗುಡ್ಡಕ್ಕೆ ಮೇಯಲು ಹೋದ ಹಸುಗಳು ವಾಪಸ್ ಮನೆಗೆ ಬರುವವರೆಗೂ ರೈತರು ಆತಂಕದಲ್ಲೇ ಸಮಯ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆ, ಕಾಡುಕೋಣ ದಾಳಿಯಿಂದ ಹೈರಣಾದ ಜನರು ಕಳೆದ ಆರು ತಿಂಗಳಿಂದ ಹುಲಿ ದಾಳಿಯ ಆತಂಕದಲ್ಲಿದ್ದಾರೆ. ಹುಲಿ ದಾಳಿಯಿಂದ ಈವರೆಗೂ 50ಕ್ಕೂ ಹೆಚ್ಚು ಜಾನುವಾರುಗಳು ಹುಲಿ ದಾಳಿಯಿಂದ ಸಾವನ್ನಪ್ಪಿವೆ. ಹಲವು ಬಾರಿ ಹುಲಿಯನ್ನು ಸ್ಥಳಾಂತರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹುಲಿ ಸೆರೆಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಕಿದ್ದರೂ ಹುಲಿಯನ್ನು ಸ್ಥಳಾಂತರ ಮಾಡಿಲ್ಲ ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಅಸಮಧಾನ ಹೊರಹಾಕಿದ್ದಾರೆ. ಹುಲಿ ದಾಳಿಯಿಂದ ನಿರಂತರವಾಗಿ ರಾಸುಗಳನ್ನ ಕಳೆದುಕೊಳ್ಳುತ್ತಿರುವ ರೈತರು ಕೂಡಲೇ ಹುಲಿಯನ್ನು ಸೆರೆ ಹಿಡಿದು ಸ್ಥಳಾಂತರಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ದಿನೇ ದಿನೇ ಹೊಸರೂಪ ಪಡೆಯುತ್ತಿರುವ ಪ್ರಾಣ: ಮಾನವ ಸಂಘರ್ಷ
ಕಳೆದೆರೆಡು ದಿನಗಳ ಹಿಂದೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಮತ್ತಿಕಟ್ಟೆ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದೆ. ಮತ್ತಿಕಟ್ಟೆಯ ಬ್ಲೂ ಮೌಂಟ್ ಎಸ್ಟೇಟ್ ಆನಂದ್ ಮಿಸ್ಕಿತ್ ಅವರ ಕಾಫಿ ತೋಟದಲ್ಲಿ ಮಧುಸೂದನ್ ಎನ್ನುವವರ ಹಸು ಹುಲಿ ಬಾಯಿಗೆ ತುತ್ತಾಗಿದೆ. ಬಣಕಲ್ ಸುತ್ತಮುತ್ತಲಿನ ಹೆಗ್ಗುಡ್ಲು, ಮತ್ತಿಕಟ್ಟೆ, ಬಿ.ಹೊಸಳ್ಳಿ, ಹೊಕ್ಕಳ್ಳಿ, ಭಾರತೀಬೈಲ್ ಸೇರಿದಂತೆ ಹಲವು ಗ್ರಾಮಗಳಲ್ಲಿ ಹುಲಿ ದಾಳಿ ನಿರಂತರವಾಗಿವೆ. ಆದರೆ ಅರಣ್ಯ ಇಲಾಖೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
Kodagu: ಜನರ ನಿದ್ದೆಗೆಡಿಸಿದ ನರಭಕ್ಷಕ ಗಂಡು ಹುಲಿ ಸೆರೆ: ನಿಟ್ಟುಸಿರು ಬಿಟ್ಟ ಜನ