ಕೇರಳ ವಿದ್ಯಾರ್ಥಿಗಳು ಮಂಗಳೂರು ಬಿಟ್ಟು ಬನ್ನಿ: ಸಿಎಂ ಪಿಣರಾಯಿ ಸೂಚನೆ

ಮಂಗಳೂರಿನಲ್ಲಿ ಹಿಂಸಾಚಾರ ಹಿನ್ನೆಲೆ ಮಂಗಳೂರಿನಲ್ಲಿ ಕಲಿಯುತ್ತಿರುವ ಕೇರಳ ವಿದ್ಯಾರ್ಥಿಗಳು ಹಿಂದಿರುಗಿ ಬರುವಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ವಿದ್ಯಾರ್ಥಿಗಳು ತವರಿಗೆ ಮರಳಲು ಐದು ಕೇರಳ ಸಾರಿಗೆ ಬಸ್‌ಗಳನ್ನು ಮಂಗಳೂರಿಗೆ ಕಳುಹಿಸಲಾಗಿದೆ.

come back to kerala Pinarayi Vijayan suggests studnets who studies in mangalore

ಮಂಗಳೂರು(ಡಿ.22): ಮಂಗಳೂರಿನಲ್ಲಿ ಹಿಂಸಾಚಾರ ಹಿನ್ನೆಲೆ ಮಂಗಳೂರಿನಲ್ಲಿ ಕಲಿಯುತ್ತಿರುವ ಕೇರಳ ವಿದ್ಯಾರ್ಥಿಗಳು ಹಿಂದಿರುಗಿ ಬರುವಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ವಿದ್ಯಾರ್ಥಿಗಳು ತವರಿಗೆ ಮರಳಲು ಐದು ಕೇರಳ ಸಾರಿಗೆ ಬಸ್‌ಗಳನ್ನು ಮಂಗಳೂರಿಗೆ ಕಳುಹಿಸಲಾಗಿದೆ.

ಮಂಗಳೂರಿನಲ್ಲಿ ಪೌರತ್ವ ಪ್ರತಿಭಟನೆ ಹಿಂಸೆಗೆ ತಿರುಗಲು ಕೇರಳಿಗರು ಕಾರಣ ಎಂಬ ಆರೋಪ ವಿಚಾರವಾಗಿ ಮಂಗಳೂರಿನಲ್ಲಿರುವ ಕೇರಳ ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ತೆರಳಲು ಸಿಎಂ ಸೂಚನೆ ನೀಡಿದ್ದಾರೆ.

ಮಂಗಳೂರಲ್ಲಿ ಎಲ್ಲ ಪೆಟ್ರೋಲ್ ಬಂಕ್ ಬಂದ್‌..!

ಕೇರಳ ವಿದ್ಯಾರ್ಥಿಗಳಿಗೆ ಮಂಗಳೂರು ಬಿಡಲು ಕೇರಳ ಸಿಎಂ ಪಿಣರಾಯಿ ವಿಜಯನ್ ಸೂಚನೆ ನೀಡಿದ್ದು, ಕೇರಳ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪಿಣರಾಯಿ ವಿಜಯನ್ ಕ್ರಮ ಕೈಗೊಂಡಿದ್ದಾರೆ.

ವಿದ್ಯಾರ್ಥಿಗಳು ತವರಿಗೆ ಮರಳಲು ಐದು ಕೇರಳ ಸಾರಿಗೆ ಬಸ್‌ಗಳನ್ನು ಮಂಗಳೂರಿಗೆ ಕಳುಹಿಸಿಕೊಡಲಾಗಿದೆ. ಮಂಗಳೂರಿನಲ್ಲಿ ಪರಿಸ್ಥಿತಿ ತಿಳಿಯಾದ ಬಳಿಕ ವಿದ್ಯಾರ್ಥಿಗಳು ವಾಪಾಸ್ ಹೋಗಲು ಸಿಎಂ ಸೂಚನೆ ನೀಡಿದ್ದಾರೆ. ಮರಳಿ ಊರಿಗೆ ಬಂದ ವಿದ್ಯಾರ್ಥಿಗಳಿಗೆ ಚಾಕಲೇಟ್ ಕೊಟ್ಟು ಸ್ವಾಗತ ಮಾಡಲಾಗಿದೆ. ಕರ್ನಾಟಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ಕೇರಳಿಗರ ಮೇಲೆ ಆರೋಪ ಮಾಡಿದ್ದರು.

ಮಂಗ್ಳೂರು ಸಹಜಸ್ಥಿತಿ : ಹಗಲು ಹೊತ್ತು ಕರ್ಫ್ಯೂ ಸಡಿಲ

Latest Videos
Follow Us:
Download App:
  • android
  • ios