Asianet Suvarna News Asianet Suvarna News

ಸರ್ಕಾರಿ ಆಸ್ಪತ್ರೆಗಳಲ್ಲಿ ಜನರಿಗೆ ಆರೋಗ್ಯ ಸೇವೆ ನೀಡಲು ಬದ್ದ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ನಾಗರೀಕರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಬದ್ದರಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಭರವಸೆ ನೀಡಿದ್ದಾರೆ. 

Committed to provide health services to people in government hospitals Says Minister Dinesh Gundu rao gvd
Author
First Published Sep 15, 2023, 12:30 AM IST

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಸೆ.15): ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ನಾಗರೀಕರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಬದ್ದರಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಭರವಸೆ ನೀಡಿದ್ದಾರೆ. ಚಿಕ್ಕಮಗಳೂರು ನಗರಕ್ಕಾಗಮಿಸಿದ ಅವರು  ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ನಾಗರೀಕರು ಭೇಟಿ ನೀಡಿದಾಗ ಪ್ರಥಮವಾಗಿ ಕಾಯಿಲೆಯ ಬಗ್ಗೆ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವುದು ಬಹಳ ಮುಖ್ಯ ಚಿಕಿತ್ಸೆ ಸರಿಯಾಗಿ ಸಿಗದಿದ್ದಾಗ ಭಾವೋದ್ವೇಗದಿಂದ ಮಾತನಾಡುವ ಸೂಕ್ಷ್ಮ ಇಲಾಖೆಯಾಗಿದ್ದು ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಗುರಿ ಹೊಂದಲಾಗಿದೆ ಎಂದರು.

ಖಾಸಗಿ ಮೆಡಿಕಲ್ಗಳಿಂದ ಔಷಧಿ ಖರೀದಿಗೆ ಬ್ರೇಕ್: ಜನರ ಆರೋಗ್ಯ ರಕ್ಷಣೆ ಮಾಡುವುದು ಇಲಾಖೆಯ ಪ್ರಥಮ ಆಧ್ಯತೆಯಾಗಿದೆ ರೋಗಕ್ಕೆ ತುತ್ತಾಗುವ ಮಾನಸಿಕ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸುವ ವ್ಯವಸ್ತೆ ಆಗಬೇಕು ಇದು ಕಾರ್ಯರೂಪಕ್ಕೆ ಬಂದಾಗ ಆರೋಗ್ಯ ಸುಧಾರಣೆ ಆಗುತ್ತದೆ ಜೊತೆಗೆ ಕಾಯಿಲೆ ಪತ್ತೆಯಾದರೆ ಗುಣಪಡಿಸುವುದು ಸುಲಭವಾಗುತ್ತದೆ ಎಂದು ತಿಳಿಸಿದರು. ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯುವ ಜೊತೆಗೆ ಎಲ್ಲಾ ರೀತಿಯ ಔಷಧಗಳು ಇಲ್ಲಿಯೇ ದೊರೆಯುವಂತಾಗಬೇಕು ಈ ನಿಟ್ಟಿನಲ್ಲಿ ಸರಿಯಾದ ಸಮಯಕ್ಕೆ ಔಷಧಿಗಳನ್ನು ಸರಬರಾಜು ಮಾಡಲು ಕ್ರಮವಹಿಸುವುದಾಗಿ ತಿಳಿಸಿದ ಅವರು ಖಾಸಗಿ ಮೆಡಿಕಲ್ಗಳಿಂದ ಔಷಧಿಗಳನ್ನು ಖರೀದಿಸುವುದು ನಿಲುತ್ತದೆ ಎಂದರು.

ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಬಗ್ಗೆ ಮತ್ತೊಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಟಿಂಗ್‌ ಶಾಪ್‌ ಮಾಲೀಕ

ವಿವಿಧ ನಿಗಮ ಮಂಡಳಿಗಳಲ್ಲಿ ಪ್ರಾತಿನಿಧ್ಯ ನೀಡಲು ಬದ್ಧ: ಜಿಲ್ಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ತಂಡ ಹಾಗೂ ಕಾರ್ಯಕರ್ತರ ಪರಿಶ್ರಮದಿಂದಾಗಿ 5 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಅಭೂತ ಪೂರ್ವ ಗೆಲುವಿಗೆ ಕಾರಣವಾಗಿರುವ ಎಲ್ಲರನ್ನು ಗೌರವಿಸುವುದಾಗಿ ತಿಳಿಸಿದ ಅವರು ಪಕ್ಷದ ಗೆಲುವಿಗೆ ಶ್ರಮಿಸಿದ ಮುಖಂಡರುಗಳಿಗೆ ವಿವಿಧ ನಿಗಮ ಮಂಡಳಿಗಳಲ್ಲಿ ಪ್ರಾತಿನಿಧ್ಯ ನೀಡಲು ಬದ್ಧವಾಗಿರುವುದಾಗಿ ಭರವಸೆ ನೀಡಿದರು.ವಿಧಾನ ಪರಿಷತ್ ಮಾಜಿ ಸದಸ್ಯೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ|| ಕೆ.ಪಿ ಅಂಶುಮಂತ್ ಮಾಜಿ ಅಧ್ಯಕ್ಷ ಎಂ.ಎಲ್ ಮೂರ್ತಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಸಕರುಗಳಾದ ಜಿ.ಹೆಚ್. ಶ್ರೀನಿವಾಸ್, ಕೆ.ಎಸ್. ಆನಂದ್, ಉಪಸ್ಥಿತರಿದ್ದರು.

Follow Us:
Download App:
  • android
  • ios