Asianet Suvarna News Asianet Suvarna News

ಸೌಹಾರ್ದತೆಗೆ ಸಾಕ್ಷಿಯಾದ ರಂಭಾಪುರಿ ಶ್ರೀ ಅಡ್ಡಪಲ್ಲಕ್ಕಿ ಉತ್ಸವ: ಶ್ರೀಗಳ ದರ್ಶನ ಪಡೆದ ಮುಸ್ಲಿಂ ಮುಖಂಡರು!

ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಭಕ್ತರು ಹಿಂದೂ ಮುಸ್ಲಿಂ ಎಂಬ ಬೇಧವನ್ನು ಮರೆತು ಪಾಲ್ಗೊಂಡಿರುವುದು ಸೌಹಾರ್ದತೆಗೆ ಸಾಕ್ಷಿಯಾಗಿದೆ 

communal harmony on display as muslims leaders take blessings from Shree Jagadguru Rambhapuri swamjiji in Hubballi mnj
Author
Bengaluru, First Published Apr 4, 2022, 3:19 PM IST

ಹುಬ್ಬಳ್ಳಿ (ಏ. 04): ಹಿಜಾಬ್ ವಸರ್ಸ್ ಕೇಸರಿ ಶಾಲು ವಿವಾದ, ಹಲಾಲ್- ಝಟ್ಕಾ ವಿವಾದ  ಜನರ ಸೌಹಾರ್ದತೆಗೆ ದಕ್ಕೆ ಉಂಟು ಮಾಡಿದ್ದ ಕೆಲವೊಂದು ಘಟನೆಗಳನ್ನು ಮೆಟ್ಟಿನಿಂತು ಹುಬ್ಬಳ್ಳಿ, ಇವತ್ತು ಹಿಂದೂ ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಗಿದೆ. ಹಳೆ ಹುಬ್ಬಳ್ಳಿಯ ಹಿರೇಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವದಲ್ಲಿ ( Jagadguru Rambhapuri) ಭಕ್ತರು ಹಿಂದೂ ಮುಸ್ಲಿಂ ಎಂಬ ಬೇಧವನ್ನು ಮರೆತು ಉತ್ಸವದಲ್ಲಿ ಪಾಲ್ಗೊಂಡಿರುವುದು ನಿಜಕ್ಕೂ ಸೌಹಾರ್ದತೆಗೆ ಸಾಕ್ಷಿಯಾಗಿದೆ. 

ಇಸ್ಲಾಂ ಧರ್ಮದ ಪವಿತ್ರ ರಂಜಾನ್ ತಿಂಗಳಲ್ಲಿ ಅಡ್ಡಪಲ್ಲಕ್ಕಿ ಉತ್ಸವ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು (Muslim Leaders) ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆಯುವ ಮೂಲಕ ನಾವೆಲ್ಲರೂ ಒಂದೇ ಎಂಬ ಸಂದೇಶವನ್ನು ಸಾರಿದ್ದಾರೆ.

ಇದನ್ನೂ ಓದಿ: ಹಲಾಲ್-ಜಟ್ಕಾ ಮಧ್ಯೆ ಭಾವೈಕ್ಯತೆಯ ಸಂದೇಶ: ಮುಸ್ಲಿಮರಿಂದಲೂ ಕೃಷ್ಣಾ ಪುಣ್ಯ ಸ್ನಾನ

ಬೆಳ್ಳಂಬೆಳಿಗ್ಗೆ ಹಿಂದೂ ಮುಸ್ಲಿಂ ಸಮುದಾಯದ ಜನರು ತಮ್ಮ ತಮ್ಮ ಮನೆಯ ಆವರಣದಲ್ಲಿ ಸಾರಣೆ ಮಾಡಿ ರಂಗೋಲಿ ಹಾಕಿದ್ದರು. ಅಲ್ಲದೇ ಅಡ್ಡಪಲ್ಲಕ್ಕಿ ಮನೆಯ ಮುಂದೆ ಬರುತ್ತಿದ್ದಂತೆಯೇ ಮುಸ್ಲಿಂ ಸಮುದಾಯದ ಮುಖಂಡರೊಬ್ಬರು ಶ್ರೀಗಳ ದರ್ಶನ ಪಡೆದು ಶ್ರೀಗಳಿಗೆ ಗೌರವ ಅರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಶ್ರೀಗಳು ಪ್ರಸಾದ ನೀಡುವ ಮೂಲಕ ಜಾತಿ ಮತ ಬೇಧವನ್ನು ಮರೆತು ಎಲ್ಲೆರೂ ಒಂದಾಗಿ ಬಾಳುವಂತೆ ಸಲಹೆ ನೀಡಿದರು.

ಶ್ರೀರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಸಕಲ ವಾದ್ಯ ವೈಭವಗಳೊಂದಿಗೆ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಹರ,ಗುರು, ಚರಮೂರ್ತಿಗಳ ನೇತೃತ್ವದಲ್ಲಿ ನಾಡಿನ ವಿವಿಧ ಮೂಲೆಗಳಿಂದ ಆಗಮಿಸಿದ್ದ ಮಠಾಧೀಶರ ದಿವ್ಯ ಸಾನಿದ್ಯದಲ್ಲಿ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಜರುಗಿತು. ಇನ್ನೂ ಮಹಿಳೆಯರು ಅಡ್ಡಪಲ್ಲಕ್ಕಿ ಉತ್ಸವಕ್ಕೆ ಕುಂಭಮೇಳದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಡೊಳ್ಳು ಕುಣಿತ, ಜಾನಪದ ಸಂಗೀತದೊಂದಿಗೆ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಇದನ್ನೂ ಓದಿHoli Festival ಯಲಬುರ್ಗಾದಲ್ಲಿ ಭಾವೈಕ್ಯತೆಯ ಹೋಳಿ ಹಬ್ಬ

ಸಾಮರಸ್ಯದ ಪ್ರತೀಕ ಬೀದರ್ ಅಷ್ಟೂರು ಜಾತ್ರೆ:  ಇದೇ ರೀತಿ ಹಿಂದೂ ಮುಸ್ಲಿಂ ಭಾವೈಕ್ಯತೆಗೆ ನಿದರ್ಶನವೆಂಬಂತೆ ಬೀದರ್‌ ಅಹ್ಮದ ಶಾ ಅಲಿ ವಲಿ ಬಹಮನಿ ದರ್ಗಾದ ಗುಂಬಜ್‌ಗಳು ಹಿಂದೂ ಹಾಗೂ ಮುಸ್ಲಿಂ ಸಹೋದರತ್ವ ಸಾರುವ ಪ್ರತೀಕಗಳಾಗಿವೆ. ಒಂದೇ ದೇವರು ಎರಡು ಹೆಸರು, ಹಿಂದೂಳಿಗೆ ಅಲ್ಲಮಪ್ರಭುವಾದರೇ ಮುಸ್ಲಿಮರಿಗೆ ಅಹಮದ್ ಶಾ ವಲಿ. ಹೌದು ದೇವನೂಬ್ಬ ನಾಮ ಹಲವು' ಎಂಬಂತೆ ಬೀದರ್ ನಗರಕ್ಕೆ ಸಮೀಪದ ಅಷ್ಟೂರ ಗ್ರಾಮದ ದರ್ಗಾದಲ್ಲಿ ಮುಸ್ಲಿಮರಿಗೆ ಅಹ್ಮದ ಶಾ ಅಲಿ ವಲಿ ಆರಾಧ್ಯ ದೈವವಾದರೆ, ಹಿಂದುಗಳಿಗೆ ಅಲ್ಲಮಪ್ರಭುವಾಗಿ ಪೂಜೆ ಪಡೆಯುವುದು ವಿಶೇಷ. 

ಹಿಂದು ಮುಸ್ಲಿಂ ಭಾವೈಕ್ಯದಲ್ಲಿ ನಂಬಿಕೆಯಿಟ್ಟಿದ್ದ ಅಹ್ಮದ್ ಶಾ ಅಲಿ ಬಹಮನಿ ಅವರ ಜನ್ಮದಿನ ನಿಮಿತ್ತ ಗೋರಿಯ ಗುಂಬಜ್‌ಗೆ ತೆರಳುವ ಸಾವಿರಾರು ಜನರು ಭಕ್ತಿ ಸಮರ್ಪಣೆ ಮಾಡುವುದು ಹಲವು ಶತಮಾನಗಳಿಂದ ನಡೆದು ಬಂದಿದೆ. ಅಷ್ಟೂರಿನ  ಅಲ್ಲಮಪ್ರಭು ದೇವರು ಜಗತ್ತಿಗೆ ಸಹೋದರತೆ, ಸಮಾನತೆಯೊಂದಿಗೆ ಸತ್ಯ ಶುದ್ಧ ಕಾಯಕ ಮತ್ತು ದಾಸೋಹದಂತಹ ಮಹಾನ್ ತತ್ವಗಳನ್ನು ಸಾರಿರುವ ಶರಣ. ಅವರ ಸ್ಮರಣೆಯಲ್ಲೇ ಪ್ರತಿವರ್ಷ ಜಾತ್ರೆ ನೆರವೇರುತ್ತದೆ.

ರಾಜ್ಯ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರಗಳಿಂದ ಸಾವಿರಾರು ಯಾತ್ರಾರ್ಥಿಗಳು, ಪ್ರವಾಸಿಗರು ನಿತ್ಯ ಇಲ್ಲಿಗೆ ಆಗಮಿಸಿ ದರ್ಗಾಕ್ಕೆ ಹೂವಿನ ಚಾದರ್ ಸಮರ್ಪಿಸುತ್ತಾರೆ. ಅಗರಬತ್ತಿ ಹಚ್ಚಿ ಪೂಚಿಸಿ, ಪ್ರಾರ್ಥಿಸಿ ಅಹ್ಮದ್ ಶಾಹ್‌ಗೆ ನಮಿಸುತ್ತಾರೆ. ಇಲ್ಲಿ ಹಿಂದುಗಳು ಅಲ್ಲಮಪ್ರಭು ಗುಡಿ ಎಂದೂ, ಮುಸ್ಲಿಮರು ವಲಿ ದರ್ಗಾ ಎಂದೂ ಪರಿಗಣಿಸುವ ಅಹ್ಮದ್ ಶಾಹ್‌ನ ಸಮಾಧಿಯು ಅಪರೂಪದ ಭಾವೈಕ್ಯತೆಯ ತಾಣಗಳಲ್ಲೊಂದು. 

Follow Us:
Download App:
  • android
  • ios