ಹಾವೇರಿ(ಡಿ.05): ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಜಿ ದೇವರಾಜ್ ಎಫ್ ಎಸ್ ಟಿ ಮುಖ್ಯಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. 

ಜಿಲ್ಲೆಯ ರಾಣಿಬೆನ್ನೂರಿನ ಶಹರ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ ಎಫ್ ಎಸ್ ಟಿ ಟೀಮ್, ನವಂಬರ್ 24 ರಂದು ರಾಣಿಬೆನ್ನೂರಿನ ನಗರಸಭೆ ಕ್ರೀಡಾಂಗಣದಲ್ಲಿ ನಡೆದ ಬಿಜೆಪಿ ಅರುಣ್ ಕುಮಾರ್ ಪೂಜಾರ್ ಅವರ ಪರ ಪ್ರಚಾರ ಭಾಷಣದಲ್ಲಿ ಹೇಳಿದ್ದ ಸಿಎಂ ಯಡಿಯೂರಪ್ಪ ಅವರು, ಅನರ್ಹ ಶಾಸಕ ಆರ್. ಶಂಕರ್‌ ಅವರಿಗೆ ಎಂ ಎಲ್ ಸಿ ಮಾಡಿ ಸಚಿವರನ್ನಾಗಿ ಮಾಡೋದು ನನ್ನ ಜವಾಬ್ದಾರಿ ಎಂದು ಹೇಳಿದ್ದರು. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಎಫ್ ಎಸ್ ಟಿ ಟೀಮ್ ದೂರಿನಲ್ಲಿ ಉಲ್ಲೇಖಿಸಿದೆ. 

BSY, ಸಿದ್ದು, ರಾಮುಲು ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ

ಮತದಾರರ ಮೇಲೆ ಅನೂಚಿತ ಪ್ರಭಾವ ಬೀರುವಂತೆ ಸಿಎಂ ಯಡಿಯೂರಪ್ಪ ಅವರು ಬಹಿರಂಗವಾಗಿಯೇ ಭಾಷಣ ಮಾಡಿದ್ದರು. ಹೀಗಾಗಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಅಪರಾಧ ಸಂಖ್ಯೆ 180/2019 ಕಲಂ 171(ಸಿ) ಐಪಿಸಿ ಮತ್ತು 123 ಆರ್ ಪಿ ಆಕ್ಟ್ 1951 ಪ್ರಕಾರ ಪ್ರಕರಣ ದಾಖಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಇಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.

ಡಿಸೆಂಬರ್ 5ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: