ಅತ್ಯಾಚಾರಕ್ಕೆ ಯತ್ನ ಆರೋಪ, ಬಿಜೆಪಿ ಮುಖಂಡನ ವಿರುದ್ಧ ದೂರು
ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ರಾಜ್ಯ ಉಪಾಧ್ಯಕ್ಷ ನವೀನ್ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಿರಿಯಾಪಟ್ಟಣ (ಅ.16) : ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ರಾಜ್ಯ ಉಪಾಧ್ಯಕ್ಷ ನವೀನ್ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ಮಹಿಳೆಯೊಬ್ಬರು ದೂರು ನೀಡಿದ್ದು, ಆಕೆಯ ಸಂಬಂಧಿಕರಾಗಿರುವ ನೇರಳೆಕುಪ್ಪೆ ನವೀನ್ ಮಹಿಳೆಯ ಪತಿಗೆ ಅವರ ಮನೆಯಲ್ಲೆ ಮದ್ಯಪಾನ ಮಾಡಿಸಿ ಅವರು ಎಚ್ಚರ ತಪ್ಪಿದ ನಂತರ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ, ಅ. 7ರಂದು ಮುತ್ತೂರು ಗ್ರಾಮದಲ್ಲಿ ದೂರು ನೀಡಿರುವ ಮಹಿಳೆಯ ಮನೆಯಲ್ಲೇ ಘಟನೆ ನಡೆದಿದ್ದು, ಈ ವಿಚಾರವನ್ನು ಆಕೆ ತನ್ನ ಪತಿಗೆ ತಿಳಿಸಿದಾಗ ನೇರಳೆಕುಪ್ಪೆ ನವೀನ್ ನಮ್ಮ ಸಂಬಂಧಿಕರಾಗಿರುವುದರಿಂದ ನ್ಯಾಯಕ್ಕೆ ಸೇರಿಸಿ ಮಾತನಾಡೋಣ ಎಂದು ನನ್ನ ಪತಿ ಸಮಾಧಾನಪಡಿಸಿದ್ದು, ಯಾವುದೇ ಕ್ರಮ ಕೈಗೊಳ್ಳದ ಕಾರಣ ಪೊಲೀಸ್ ಠಾಣೆಗೆ ತಡವಾಗಿ ದೂರು ನೀಡಿರುವುದಾಗಿ ಮಹಿಳೆ ತಿಳಿಸಿದ್ದಾರೆ.
ಸಾಮೂಹಿಕ ಅತ್ಯಾಚಾರ : ವಿಡಿಯೋ ಮಾಡಿ ಬ್ಲಾಕ್ ಮೇಲ್
ಅತ್ಯಾಚಾರಿಗಳಿಂದ ಬ್ಲ್ಯಾಕ್‌ಮೇಲ್‌ಗೆ ಒಳಗಾದ 10 ನೇ ತರಗತಿಯಲ್ಲಿ ಓದುತ್ತಿರುವ ಅಪ್ರಾಪ್ತ ಬಾಲಕಿ (15) ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಸಹಪಾಠಿ ಮೂಲಕ ಪರಿಚಯವಾದ ವ್ಯಕ್ತಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಲ್ಲದೇ ಹೋಟೆಲ್‌ನಲ್ಲಿ ಪ್ರಮುಖ ಆರೋಪಿಗೆ ಪರಿಚಯವಿರುವ ಇತರ ನಾಲ್ಕು ಜನರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅತ್ಯಾಚಾರಿಗಳು ಚಿತ್ರೀಕರಿಸಿದ ವಿಡಿಯೋ ತುಣುಕುಗಳನ್ನು ಬಿಡುಗಡೆ ಮಾಡುವುದಾಗಿ ಬಾಲಕಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದು ಬಾಲಕಿಯಿಂದ ₹50,000 ರೂ ಬೇಡಿಕೆ ಇಟ್ಟಿದ್ದಾರೆ.
ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ. ಎರಡು ದಿನಗಳ ನಂತರ ಕುಟುಂಬದ ಬಳಿ ತನ್ನೊಂದಿಗಾದ ಕೃತ್ಯವನ್ನು ಬಾಲಕಿ ವಿವರಿಸಿದ್ದಾಳೆ. ಬಳಿಕ ಪೋಷಕರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಪ್ರಮುಖ ಆರೋಪಿ ಆಯುಷ್ (23) ತಲೆಮರೆಸಿಕೊಂಡಿದ್ದಾನೆ.
ಬಾಲಕಿಯನ್ನು ಆಕೆಯ ಸಹಪಾಠಿ ಆಯುಷ್‌ಗೆ ಪರಿಚಯಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ನಂತರ ಆಯುಷ್ ತನ್ನ ಕೋಣೆಗೆ ಬರುವಂತೆ ಬಾಲಕಿಗೆ ಮನವರಿಕೆ ಮಾಡಿಕೊಟ್ಟು ಅತ್ಯಾಚಾರ ಎಸಗಿದ್ದಾನೆ. ಆರೋಪಿಯು ತನ್ನ ಮೊಬೈಲ್ ಫೋನ್‌ನಲ್ಲಿ ಕೃತ್ಯವನ್ನು ರೆಕಾರ್ಡ್ ಮಾಡಿದ್ದಾನೆ ಮತ್ತು ಅದನ್ನು ಬಳಸಿ ತನ್ನ ನಾಲ್ವರು ಸ್ನೇಹಿತರೊಂದಿಗೆ ಹೋಟೆಲ್‌ನಲ್ಲಿ ವಿವಿಧ ಸಂದರ್ಭಗಳಲ್ಲಿಬಾಲಕಿಗೆ ಕಿರುಕುಳ ನೀಡಿದ್ದಾನೆ.
ಮಂಡ್ಯ: ಮಳವಳ್ಳಿಯಲ್ಲಿ ಮತ್ತೊಂದು ರೇಪ್: SSLC ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ವೃದ್ಧ
ಆರೋಪಿಗಳು ಮೇಲೆ ಅತ್ಯಾಚಾರ ಮಾಡಿದ ನಂತರ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದರು ಎಂದು ಸಂತ್ರಸ್ತೆಯ ಹೇಳಿಕೆಯಲ್ಲಿ ತಿಳಿಸಿದ್ದಾಳೆ. ತಪ್ಪಿದಲ್ಲಿ ಹಣ ನೀಡುವಂತೆ ಆರೋಪಿ ಆಕೆಯನ್ನು ಬ್ಲಾಕ್ ಮೇಲ್ ಮಾಡಿದ್ದು, ವಿಡಿಯೋವನ್ನು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಾಲಕಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಡ್ಯ ರೇಪ್ ಕೇಸ್ : ಸಿಎಂಗೆ ಶೋಭಾ ಪತ್ರ
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ‘ನಿರ್ಭಯಾ’ ಕಾಯ್ದೆಯನುಸಾರ ಪ್ರಕರಣ ದಾಖಲಿಸಬೇಕು ಮತ್ತು ಆದಷ್ಟು ಬೇಗ ಎಫ್‌ಎಸ್‌ಎಲ್ ವರದಿಯನ್ನು ತರಿಸಿಕೊಳ್ಳಬೇಕು ಎಂದು ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಬಾಲಕಿ ಮೇಲೆ ನಡೆದಿರುವ ಘಟನೆಯು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ನಿರ್ಭಯಾ ಪ್ರಕರಣದ ನಂತರ ದೇಶದಲ್ಲಿ ಬಲವಾದ ಕಾನೂನು ಬಂದ ಮೇಲೂ ಇಂತಹ ನೀಚ ಮಾನಸಿಕತೆಯ ಜನರಿಗೆ ಭಯ ಇಲ್ಲದಿರುವುದು ಪ್ರಕರಣದಿಂದ ಮತ್ತೊಮ್ಮೆ ಸಾಬೀತಾಗಿದೆ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ದೇಶದ ಕಾನೂನಿನ ಬಗ್ಗೆ ಭಯ ಮೂಡಬೇಕು.
ಮಂಡ್ಯ: ಮಳವಳ್ಳಿಯಲ್ಲಿ ಮತ್ತೊಂದು ರೇಪ್: SSLC ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ವೃದ್ಧ
ಅಂತಹ ಕಠಿಣವಾದ ಶಿಕ್ಷೆಯಿಂದ ಮಾತ್ರ ಸಮಾಜಕ್ಕೆ ಒಳ್ಳೆಯ ಸಂದೇಶ ಹೋಗಲು ಸಾಧ್ಯ ಎಂದು ಹೇಳಿದ್ದಾರೆ. ತನಿಖೆಯನ್ನು ತೀವ್ರಗತಿಗೊಳಿಸಿ, ಆರೋಪಪಟ್ಟಿಯನ್ನು ಸಲ್ಲಿಸಬೇಕು. ಸರ್ಕಾರವು ಈ ಪ್ರಕರಣಕ್ಕಾಗಿಯೇ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಬೇಕು. ಪ್ರಕರಣವನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಬೇಕು. ಈ ನಿರ್ಧಾರವನ್ನು ಸರ್ಕಾರ ತಕ್ಷಣವೇ ತೆಗೆದುಕೊಳ್ಳಬೇಕು. ಪೋಷಕರಿಗೆ ತಕ್ಷಣ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.