ಬೆಂಗಳೂರು (ಏ.06):  ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ ಉಪಚುನಾವಣಾ ಪ್ರಚಾರದ ಬಹಿರಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿರುವ ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್‌ ಒತ್ತಾಯಿಸಿದೆ.

ಈ ಸಂಬಂಧ ಪಕ್ಷದ ಯುವ ಘಟಕದ ಬೆಂಗಳೂರು ಅಧ್ಯಕ್ಷ ಎ.ಎಂ.ಪ್ರವಿಣ್‌ ಕುಮಾರ್‌ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರ ನಿಯೋಗವು ಸೋಮವಾರ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರನ್ನು ಭೇಟಿ ಮಾಡಿ ದೂರು ನೀಡಿದೆ. 

ಕುಮಾರಸ್ವಾಮಿಗೆ ಜನಾಂಗೀಯ ನಿಂದನೆ ಮಾಡಿದ ಜಮೀರ್‌ ಮನೆಗೆ ಮುತ್ತಿಗೆ ಯತ್ನ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ‘ಕಾಲಾ ಕುಮಾರಸ್ವಾಮಿ’ (ಕರಿಯ ಕುಮಾರಸ್ವಾಮಿ) ಎಂದು ಹಿಂದಿ ಭಾಷೆಯಲ್ಲಿ ಭಾಷಣ ಮಾಡುತ್ತಾ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. 

ಹೀಗಾಗಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.