ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗಗಳ ಮೇಲೆ ನಡೆದ ದೌರ್ಜನ್ಯಗಳ ಅಡಿಯಲ್ಲಿ ಜಾತಿನಿಂದನೆ ಮತ್ತು ಕೊಲೆಬೆದರಿಕೆ ಹಾಗೂ ಇತರ ಪ್ರಕರಣದಡಿಯಲ್ಲಿ ಮಾಜಿ ಸಚಿವ ಸಿ.ಟಿ. ರವಿ ಅವರ ವಿರುದ್ಧ ಪ್ರಕರಣ ದಾಖಲು ಮಾಡಬೇಕು ಎಂದು ದೂರು ಸಲ್ಲಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪೂಜಾರ 

ಕೊಪ್ಪಳ(ಮಾ.29):  ಸಚಿವ ಶಿವರಾಜ ತಂಗಡಗಿ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದ ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಟಿ. ರವಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪೂಜಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗಗಳ ಮೇಲೆ ನಡೆದ ದೌರ್ಜನ್ಯಗಳ ಅಡಿಯಲ್ಲಿ ಜಾತಿನಿಂದನೆ ಮತ್ತು ಕೊಲೆಬೆದರಿಕೆ ಹಾಗೂ ಇತರ ಪ್ರಕರಣದಡಿಯಲ್ಲಿ ಮಾಜಿ ಸಚಿವ ಸಿ.ಟಿ. ರವಿ ಅವರ ವಿರುದ್ಧ ಪ್ರಕರಣ ದಾಖಲು ಮಾಡಬೇಕು ಎಂದು ದೂರು ಸಲ್ಲಿಸಿದ್ದಾರೆ.

‘ಮೋದಿ ಮೋದಿ’ ಎನ್ನುವವರ ಕಪಾಳಕ್ಕೆ ಬಾರಿಸಿ: ತಂಗಡಗಿ..!

ಯುವಕನ ವಿರುದ್ಧ ಸಹ ದೂರು

ಸಚಿವ ಶಿವರಾಜ ತಂಗಡಗಿ ಅವರಿಗೆ ಅಶ್ಲೀಲವಾಗಿ ನಿಂದಿಸಿ ಸ್ಟೇಟಸ್ ಇಟ್ಟ ಕೆಡಿಪಿ ಮಾಜಿ ಸದಸ್ಯ ಹಾಗೂ ಬಿಜೆಪಿ ಕಾರ್ಯಕರ್ತ ಗವಿರಾಜ್ ಗೊರವರ ಅಲಿಯಾಸ್ ಗವಿ ಮೋದಿ ವಿರುದ್ಧ ಸಹ ಪ್ರಕರಣ ದಾಖಲಿಸಬೇಕು ಎಂದು ಮಲ್ಲಿಕಾರ್ಜುನ ಪೂಜಾರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.