Asianet Suvarna News Asianet Suvarna News

ಸಿದ್ದರಾಮಯ್ಯ, ರಾಬರ್ಟ್‌ ವಾದ್ರಾ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ನಡೆದಿದೆ ಎನ್ನಲಾದ 10 ಬೃಹತ್‌ ಹಗರಣಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ವಿವಿಧ ನಾಯಕರ ವಿರುದ್ಧ ಎನ್‌.ಆರ್‌.ರಮೇಶ್‌ ಅವರು ಲೋಕಾಯುಕ್ತಕ್ಕೆ 10 ಪ್ರತ್ಯೇಕ ದೂರು ನೀಡಿದ್ದಾರೆ.
 

complaints in lokayukta against siddaramaiah and robert vadra gvd
Author
First Published Feb 3, 2023, 10:02 AM IST

ಬೆಂಗಳೂರು (ಫೆ.03): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ನಡೆದಿದೆ ಎನ್ನಲಾದ 10 ಬೃಹತ್‌ ಹಗರಣಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ವಿವಿಧ ನಾಯಕರ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಅವರು ಲೋಕಾಯುಕ್ತಕ್ಕೆ 10 ಪ್ರತ್ಯೇಕ ದೂರು ನೀಡಿದ್ದಾರೆ.

ಗುರುವಾರ ಸುದ್ದಿಗೋಷ್ಠಿ ನಡೆಸಿ ಹಗರಣಗಳ ಬಗ್ಗೆ ಮಾಹಿತಿ ನೀಡಿದ ರಮೇಶ್‌, 3,728 ಪುಟಗಳ ದಾಖಲೆ, 62 ಗಂಟೆಗಳ ವಿಡಿಯೋ ತುಣುಕು, 900ಕ್ಕೂ ಅಧಿಕ ಛಾಯಾಚಿತ್ರ ಸಹಿತ ಕಾಂಗ್ರೆಸ್‌ ನಾಯಕರ ವಿರುದ್ಧ ಲೋಕಾಯುಕ್ತಕ್ಕೆ 10 ಪ್ರತ್ಯೇಕ ದೂರು ನೀಡಲಾಗಿದೆ. ಸಾವಿರಾರು ಕೋಟಿ ರುಪಾಯಿಗಳ ಈ ಹಗರಣಗಳನ್ನು ಸಿಐಡಿ ಅಥವಾ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದರು.

ಸಿಬಿಐಗೆ ಸಿಡಿ ಕೇಸ್‌: ಅಮಿತ್‌ ಶಾ ಭೇಟಿಗಾಗಿ ದೆಹಲಿಗೆ ತೆರಳಿದ ರಮೇಶ್‌ ಜಾರಕಿಹೊಳಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಕೆ.ಜೆ.ಜಾಜ್‌ರ್‍, ಕೃಷ್ಣ ಬೈರೇಗೌಡ, ಯು.ಟಿ.ಖಾದರ್‌, ಎಂ.ಬಿ.ಪಾಟೀಲ, ಜಮೀರ್‌ ಅಹಮದ್‌ ಖಾನ್‌, ದಿನೇಶ್‌ ಗುಂಡೂರಾವ್‌, ಎಂ.ಕೃಷ್ಣಪ್ಪ, ಶಾಸಕರಾದ ಎನ್‌.ಎ.ಹ್ಯಾರಿಸ್‌, ಪ್ರಿಯ ಕೃಷ್ಣ, ಸೋನಿಯಾ ಅಳಿಯ ರಾಬರ್ಟ್‌ ವಾದ್ರಾ ಸೇರಿದಂತೆ 9 ಮಂದಿ ಹಿರಿಯ ಐಎಎಸ್‌ ಅಧಿಕಾರಿಗಳು, 5 ಮಂದಿ ಕೆಎಎಸ್‌ ಅಧಿಕಾರಿಗಳು ಸೇರಿದಂತೆ 21 ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ, ವಂಚನೆ, ಅಧಿಕಾರ ದುರ್ಬಳಕೆ, ನಕಲಿ ದಾಖಲೆ ಸೃಷ್ಟಿಸಿ, ಸರ್ಕಾರಿ ಭೂ ಕಬಳಿಕೆ ಆರೋಪದಡಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ ಎಂದು ತಿಳಿಸಿದರು.

9,600 ಕೋಟಿಯ 1,100 ಎಕರೆ ಗುಳುಂ: 2013-18ರ ಅವಧಿಯಲ್ಲಿ ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ ಪಾಲುದಾರಿಕೆಯ ಡಿಎಲ್‌ಎಫ್‌ ಸಂಸ್ಥೆಯು ಬೆಂಗಳೂರು ದಕ್ಷಿಣ ತಾಲೂಕು ತಾವರೆಕೆರೆ ಹೋಬಳಿ ಗಂಗೇನಹಳ್ಳಿ ಗ್ರಾಮದ ಸರ್ವೆ ನಂಬರ್‌ 1ರಿಂದ 99, ವರ್ತೂರು ಗ್ರಾಮದ ಸರ್ವೆ ನಂಬರ್‌ 7ರಿಂದ 10, ವರ್ತೂರು ನರಸೀಪುರ ಗ್ರಾಮದ ಸರ್ವೆ ನಂಬರ್‌ 1ರಿಂದ 35 ಮತ್ತು ಪೆದ್ದನಪಾಳ್ಯ ಗ್ರಾಮದ ಸರ್ವೆ ನಂಬರ್‌ 17ರಿಂದ 20ರಲ್ಲಿರುವ ಸುಮಾರು .9,600 ಕೋಟಿ ಅಧಿಕ ಮೌಲ್ಯದ 1,100 ಎಕರೆ ಸರ್ಕಾರಿ ಸ್ವತ್ತುಗಳನ್ನು ಕಬಳಿಸಿದೆ ಎಂದು ದೂರು ನೀಡಲಾಗಿದೆ.

ಇತರ ಆಯ್ದ ಹಗರಣಗಳು
-ಕೃಷಿ ಭೂಮಿಗಳಲ್ಲಿ ಕೃಷಿ ಹೊಂಡ ನಿರ್ಮಿಸುವ ಕೃಷಿ ಭಾಗ್ಯ ಯೋಜನೆಯಲ್ಲಿ .800 ಕೋಟಿ ಹಗರಣ ನಡೆಸಲಾಗಿದೆ. 2014ರಿಂದ 2017-18ರ 4 ವರ್ಷದಲ್ಲಿ ರಾಜ್ಯದ 2,15,130 ಫಲಾನುಭವಿಗಳಿಗೆ ಕೃಷಿ ಹೊಂಡ ನಿರ್ಮಿಸಿ, ಪಾಲಿಥಿನ್‌ ಹೊದಿಕೆ, ಡೀಸೆಲ್‌ ಪಂಪ್‌ ಸೆಟ್‌ ಅಳವಡಿಕೆ ಹೆಸರಿನಲ್ಲಿ ಹಣ ಲೂಟಿ ಹೊಡೆಯಲಾಗಿದೆ.

-ಬಿಬಿಎಂಪಿ ವ್ಯಾಪ್ತಿಯ 189 ಇಂದಿರಾ ಕ್ಯಾಂಟೀನ್‌ಗಳ ಗ್ರಾಹಕರ ಹೆಸರಿನಲ್ಲಿ 2017-18 ಮತ್ತು 2018-19ರ 17 ತಿಂಗಳ ಅವಧಿಯಲ್ಲಿ 27.03 ಲಕ್ಷ ಮಂದಿ ಬೆಳಗಿನ ಉಪಹಾರ, 24.11 ಲಕ್ಷ ಮಂದಿ ಮಧ್ಯಾಹ್ನದ ಊಟ, 11.55 ಲಕ್ಷ ಮಂದಿ ರಾತ್ರಿ ಊಟ ಮಾಡುತ್ತಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿ ಸರ್ಕಾರದಿಂದ ಸಬ್ಸಿಡಿ ರೂಪದಲ್ಲಿ .560 ಕೋಟಿ ಕಬಳಿಸಲಾಗಿದೆ.

-ಬಿಬಿಎಂಪಿ ವ್ಯಾಪ್ತಿಯ 439 ಬಸ್‌ ತಂಗುದಾಣಗಳನ್ನು 2015-16ರಿಂದ 2016-17ರವರೆಗಿನ ಎರಡು ವರ್ಷಗಳ ಅವಧಿಯಲ್ಲಿ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡಲು ಬಳಸಿಕೊಳ್ಳಲಾಗಿದೆ. ಇದಕ್ಕೆ ನಿಯಮಾನುಸಾರ ಪಾಲಿಕೆಗೆ ಪಾವತಿಸಬೇಕಿದ್ದ .68.15 ಕೋಟಿ ಜಾಹೀರಾತು ಶುಲ್ಕ ಪಾವತಿಸದೆ ವಂಚಿಸಲಾಗಿದೆ. ಅಂತೆಯೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆ ಯೋಜನೆಯ ಹೆಸರಿನಲ್ಲಿ .1,600 ಕೋಟಿ ಹಗರಣ ನಡೆದಿದೆ.

-ಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನ್ಷನ್‌ ಸೊಸೈಟಿಯಲ್ಲಿ ಕೆಎಸ್‌ಎಪಿಎಸ್‌ ಮೂಲ ಏಡ್‌್ಸ ಪೀಡಿತ ಬಾಲಕ/ ಬಾಲಕಿಯರು, ಮಹಿಳೆಯರು, ಪುರುಷರು, ಮಂಗಳಮುಖಿಯರನ್ನು ಪುನರ್ವಸತಿ ಕೇಂದ್ರಗಳಿಗೆ ಸೇರಿಸಿ ಸೌಲಭ್ಯ ಕಲ್ಪಿಸುವಲ್ಲಿ ನೂರಾರು ಕೋಟಿ ರು. ಹಣ ದುರ್ಬಳಕೆಯಾಗಿದೆ.

ಪಾಗಲ್ ಪ್ರೇಮಿ ಕಾಟಕ್ಕೆ ದಂತ ವೈದ್ಯೆ ಆತ್ಮಹತ್ಯೆ: ಸಹಪಾಠಿ ಅಪಪ್ರಚಾರ ಕಾರಣ?

-ಇನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಡಿ ಸೂಪರ್‌ ಸ್ಪೇಷಾಲಿಟಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವ ಕೊಡಿಸುವ ಯೋಜನೆಗಳ ಅನುಷ್ಠಾನದಲ್ಲಿ ನೂರಾರು ಕೋಟಿ ರು. ಲೂಟಿ ಮಾಡಲಾಗಿದೆ.

-ಸ್ವಚ್ಛಭಾರತ ಅಭಿಯಾನದ ಅನುಷ್ಠಾನದ ಹೆಸರಿನಲ್ಲಿ ಕಾನೂನುಬಾಹಿರವಾಗಿ ಅನುದಾನದ ದುರ್ಬಳಕೆ ಮಾಡಿಕೊಂಡು ನೂರಾರು ಕೋಟಿ ರು. ಅವ್ಯವಹಾರ ನಡೆಸಲಾಗಿದೆ. ಇನ್ನು ವಿಶ್ವೇಶ್ವರಯ್ಯ ಜಲ ನಿಗಮದ ಕಾಮಗಾರಿಯೊಂದರ ಹೆಸರಿನಲ್ಲಿ ನಕಲಿ ವರ್ಕ್ ಡನ್‌ ಸರ್ಟಿಫಿಕೇಟ್‌ಗಳನ್ನು ಪಡೆದು ಪೂರ್ವ ನಿಗದಿತ ಗುತ್ತಿಗೆದಾರರಿಗೆ ಕಾನೂನು ಬಾಹಿರವಾಗಿ .158 ಕೋಟಿ ಗುತ್ತಿಗೆ ನೀಡಿ ಭ್ರಷ್ಟಾಚಾರ ನಡೆಸಲಾಗಿದೆ.

Follow Us:
Download App:
  • android
  • ios