ಸಮಗ್ರ ಮೀನುಗಾರಿಕಾ ನೀತಿಯ ಕರಡು ಶೀಘ್ರ ಪ್ರಕಟ: ಸಚಿವ ಕೋಟ

ಕರ್ನಾಟಕದಲ್ಲಿ ಸಮಗ್ರ ಮೀನುಗಾರಿಕಾ ನೀತಿ ಶೀಘ್ರ ಜಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಮಗ್ರ ಮೀನುಗಾರಿಕಾ ನೀತಿಯ ಕರಡು ಈಗಾಗಲೇ ಸಿದ್ಧಗೊಂಡಿರುತ್ತದೆ.

Comprehensive Fisheries Policy draft to be released soon says kota srinivas poojary

ಮಂಗಳೂರು(ಜು.28): ಕರ್ನಾಟಕದಲ್ಲಿ ಸಮಗ್ರ ಮೀನುಗಾರಿಕಾ ನೀತಿ ಶೀಘ್ರ ಜಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಮಗ್ರ ಮೀನುಗಾರಿಕಾ ನೀತಿಯ ಕರಡು ಈಗಾಗಲೇ ಸಿದ್ಧಗೊಂಡಿರುತ್ತದೆ.

ಅದನ್ನು ಸಾರ್ವಜನಿಕರ ಆಕ್ಷೇಪಗಳಿಗೆ ಪ್ರಕಟಿಸಲಾಗುವುದು ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಒಂದೇ ದಿನದಲ್ಲಿ ಕೊರೋನಾ ಪಾಸಿಟಿವ್, ನೆಗೆಟಿವ್: 84 ಸಾವಿರ ಬಿಲ್

ಸೋಮವಾರ ನಗರದಲ್ಲಿ ಸುದ್ದಿಗಾರರಲ್ಲಿ ಮಾತನಾಡಿ, ಸಮಗ್ರ ಮೀನುಗಾರಿಕಾ ನೀತಿಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುವ ಮೊದಲು ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಕರ್ನಾಟಕ ರಾಜ್ಯ ಒಳನಾಡು ಮೀನುಗಾರಿಕೆಯಲ್ಲಿ ದೇಶದಲ್ಲಿ 9ನೇ ಸ್ಥಾನದಲ್ಲಿದೆ. ಸಮುದ್ರ ಮೀನುಗಾರಿಕೆಯಲ್ಲಿ 4ನೇ ಸ್ಥಾನದಲ್ಲಿದೆ. ಇವೆರಡನ್ನು ಮೊದಲ ಅಥವಾ ಎರಡನೆಯ ಸ್ಥಾನದಲ್ಲಿ ತಂದು ನಿಲ್ಲಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು. ಮೀನಿನಿಂದ ತಯಾರಿಸಲಾದ ಚಿಫ್ಸ್‌ಗೆ ಉತ್ತಮ ಬೇಡಿಕೆ ಇದೆ. ಮುಂದಿನ ದಿನಗಳಲ್ಲಿ ಉಡುಪಿ ಮತ್ತು ದ.ಕ.ದಲ್ಲಿ ಮೀನಿನ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುವ ಘಟಕಗಳನ್ನು ಸ್ಥಾಪಿಸಲಾಗುವುದು ಎಂದರು.

ಆಪ್ತ ಸಹಾಯಕಿಗೆ ಸೋಂಕು; ನಿಂಬಾಳ್ಕರ್‌ ಕ್ವಾರಂಟೈನ್‌

ಜು.30ರಂದು ವಿಧಾನ ಸೌಧದಲ್ಲಿ ವಿಶ್ವ ಮೀನುಗಾರಿಕಾ ದಿನವನ್ನು ಆಚರಿಸಲಾಗವುದು. ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಲಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ವಿಧಾನ ಪರಿಷತ್ತು ಸದಸ್ಯ ಪ್ರತಾಪಸಿಂಹ ನಾಯಕ್‌ ಇದ್ದರು.

Latest Videos
Follow Us:
Download App:
  • android
  • ios