Chitradurga: ಮುರುಘಾ ಮಠ ಆಡಳಿತ ಡಿಸಿ ವರದಿ ಆಧರಿಸಿ ತೀರ್ಮಾನ: ಸಿಎಂ ಬೊಮ್ಮಾಯಿ

ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜಿಲ್ಲಾಡಳಿತ ನೀಡಿರುವ ವರದಿಯನ್ನು ಪರಿಶೀಲಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

Conclusion based on DC Report of Muruga Mutt Administration says CM Basavaraj Bommai At Chitradurga gvd

ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್, ಚಿತ್ರದುರ್ಗ

ಚಿತ್ರದುರ್ಗ (ನ.23): ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜಿಲ್ಲಾಡಳಿತ ನೀಡಿರುವ ವರದಿಯನ್ನು ಪರಿಶೀಲಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಇಂದು ಸರಸ್ವತಿ ಕಾನೂನು ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನಾ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ಆಗಸ್ಟ್ ತಿಂಗಳಲ್ಲಿ ಮುರುಘಾ ಮಠದ ಡಾ‌.ಶಿವಮೂರ್ತಿ ಮುರುಘಾ ಶರಣರು ಅಪ್ರಪ್ತಾ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದರು, ಇದಾದ ಬಳಿಕಾ ಮುರುಘಾ ಮಠದ ಆಡಳಿತವನ್ನು ಸರ್ಕಾರವೇ ವಹಿಸಿಕೊಂಡು ನೂತನ ಪೀಠಾಧ್ಯಕ್ಷರನ್ನು ನೇಮಕ ಮಾಡುವಂತೆ ಮಾಜಿ ಸಚಿವ ಹೆಚ್.ಏಕಾಂತಯ್ಯ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಚಿತ್ರದುರ್ಗ ಜಿಲ್ಲಾಡಳಿತಕ್ಕೆ ವರದಿ ನೀಡುವಂತೆ ಸೂಚನೆ ನೀಡಿತ್ತು, ಈ ಹಿನ್ನೆಲೆಯಲ್ಲಿ ನವೆಂಬರ್ 10ರಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು 75 ಪುಟಗಳ ವರದಿಯನ್ನು ನೀಡಿದ್ದಾರೆ. 

ಮೋದಿ ಸಲಹೆಯಂತೆ ದಲಿತ ಮೀಸಲು ಏರಿಕೆ: ಸಿಎಂ ಬೊಮ್ಮಾಯಿ

ಇದು ಯಾವ ಇಲಾಖೆಯಲ್ಲಿ ಇದೆ ಎಂಬುದನ್ನು ಕೂಡಲೇ ತರಿಸಿಕೊಂಡು ಪರಿಶೀಲನೆ ಮಾಡಿ ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುರುಘಾ ಶರಣರ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು ಮಾಡಲು ಪೀತೂರಿ ನಡೆಸಲಾಗಿದೆ ಎಂದು ಪ್ರತ್ಯೇಕ ಪ್ರಕರಣವೊಂದರಲ್ಲಿ ಮಾಜಿ ಶಾಸಕರೊಬ್ಬರು ಜೈಲು ಸೇರಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಸವರಾಜ ಬೊಮ್ಮಾಯಿ, ಈ ಪ್ರಕರಣ ಇದೀಗ ನ್ಯಾಯಾಲಯದಲ್ಲಿ ಇದ್ದು, ಈ ಸಂಬಂಧ ಪೊಲೀಸರು ಕೆಲವರನ್ನು ಬಂಧಿಸಿದ್ದು, ತನಿಖೆಯಲ್ಲಿ ಎಲ್ಲವೂ ಬಯಲಾಗಲಿದೆ ಎಂದು ಹೇಳಿದರು.

ಸಿದ್ದು ಅವಧಿಯ ಚಿಲುಮೆ ವ್ಯವಹಾರವೂ ತನಿಖೆ: ಸಿಎಂ ಬೊಮ್ಮಾಯಿ

ಅದು ಅವರ ಪಕ್ಷದ ನಿಲುವು: ಜೆಡಿಎಸ್ ಪಕ್ಷಕ್ಕೆ ಬಹುಮತ ಬಂದರೆ ಅಲ್ಪಸಂಖ್ಯಾತರನ್ನು ಮುಖ್ಯಮಂತ್ರಿಯಾಗಿ ಮಾಡಲಿದ್ದೆವೆ ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರಕ್ರಿಯಿಸಿ, ಅದು ಅವರ ಪಕ್ಷದ ನಿಲುವು ಈ ಬಗ್ಗೆ ನಾನು ಏನನ್ನು ಹೇಳುವುದಿಲ್ಲ ಎಂದರು. ಪ್ರತಿ ಮನೆಗೆ 10 ಸಾವಿರ ಲೀಟರ್ ನೀರನ್ನು ಉಚಿತವಾಗಿ ಕೊಡುವುದಾಗಿ ನಿಮ್ಮ ಬಿಜೆಪಿಯಲ್ಲಿ ಹೇಳಲಾಗುತ್ತಿದೆ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಸವರಾಜ ಬೊಮ್ಮಾಯಿ, ಈ ಬಗ್ಗೆ ಯಾವುದೇ ಚಿಂತನೆ ಪಕ್ಷದಲ್ಲಿ ನಡೆಸಿಲ್ಲ ಎಂದಷ್ಟೇ ತಿಳಿಸಿದರು. ಈ ಸಂದರ್ಭದಲ್ಲಿ ಸಾರಿಗೆ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ, ಶಾಸಕರಾದ ಜಿ‌.ಹೆಚ್.ತಿಪ್ಪಾರೆಡ್ಡಿ, ಕೆ.ಎಸ್.ನವೀನ್, ಸೇರಿ ಇತರರು ಹಾಜರಿದ್ದರು.

Latest Videos
Follow Us:
Download App:
  • android
  • ios