Asianet Suvarna News Asianet Suvarna News

ಉದ್ಯಮ ಯಶಸ್ಸಿಗೆ ಆತ್ಮವಿಶ್ವಾಸ, ಧೈರ್ಯ ಮುಖ್ಯ: ಕೆ.ಎಸ್‌.ಈಶ್ವರಪ್ಪ

ಉದ್ಯೋಗ ಅರಸುವ ಜತೆಯಲ್ಲಿ ಸ್ವಯಂ ಉದ್ಯೋಗ ಹಾಗೂ ಕೈಗಾರಿಕಾ ಆರಂಭಿಸುವ ಬಗ್ಗೆ ಆಲೋಚನೆ ನಡೆಸಬೇಕು. ಉದ್ಯಮದಲ್ಲಿ ಯಶಸ್ಸು ಸಾಧಿಸಬೇಕಾದರೆ ಆತ್ಮವಿಶ್ವಾಸ ಜೊತೆ ಧೈರ್ಯ ಮುಖ್ಯ ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಹೇಳಿದರು. 

Confidence and courage are important for business success says KS Eshwarappa gvd
Author
First Published Dec 14, 2022, 11:13 AM IST

ಶಿವಮೊಗ್ಗ (ಡಿ.14): ಉದ್ಯೋಗ ಅರಸುವ ಜತೆಯಲ್ಲಿ ಸ್ವಯಂ ಉದ್ಯೋಗ ಹಾಗೂ ಕೈಗಾರಿಕಾ ಆರಂಭಿಸುವ ಬಗ್ಗೆ ಆಲೋಚನೆ ನಡೆಸಬೇಕು. ಉದ್ಯಮದಲ್ಲಿ ಯಶಸ್ಸು ಸಾಧಿಸಬೇಕಾದರೆ ಆತ್ಮವಿಶ್ವಾಸ ಜೊತೆ ಧೈರ್ಯ ಮುಖ್ಯ ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಹೇಳಿದರು. ನಗರದ ಸಹ್ಯಾದ್ರಿ ಕಲಾ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್‌ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಸಹಭಾಗಿತ್ವದಲ್ಲಿ ಮಂಗಳವಾರ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪದವಿ ಶಿಕ್ಷಣ ಪೂರೈಸಿದ ನಂತರ ಮುಂದೆ ಯಾವ ಕ್ಷೇತ್ರದಲ್ಲಿ ಮುನ್ನಡೆಯಬೇಕು ಎಂಬ ಸ್ಪಷ್ಟಕಲ್ಪನೆ ಇರುವುದಿಲ್ಲ. ಇಂತಹ ಸಂದರ್ಭದಲ್ಲಿ ಗುರುಗಳ ಮಾರ್ಗದರ್ಶನ ಹಾಗೂ ಆಸಕ್ತಿ ಕ್ಷೇತ್ರದಲ್ಲಿ ಸರಿಯಾದ ತರಬೇತಿ ಪಡೆಯುವುದರಿಂದ ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದು ತಿಳಿಸಿದರು. ಪದವಿ ಪೂರೈಸಿದ ನಂತರ ಹಿರಿಯರ ಮಾರ್ಗದರ್ಶನದಲ್ಲಿ ಸಣ್ಣ ಕೈಗಾರಿಕಾ ಆರಂಭಿಸಿ ಅನೇಕ ಸವಾಲುಗಳನ್ನು ಎದುರಿಸಿ ಹಂತ ಹಂತವಾಗಿ ಬೆಳೆದೆ. ವಿವಿಧ ಉದ್ಯಮ ಕ್ಷೇತ್ರಕ್ಕೆ ಕಾಲಿಟ್ಟು ಯಶಸ್ಸು ಸಾಧಿಸಿದೆ. ಪ್ರಯತ್ನ ಮಾಡುವಾಗ ಹಿಂದೇಟು ಹಾಕಿದರೆ ಯಾವ ಕ್ಷೇತ್ರವೇ ಆದರೂ ವೈಫಲ್ಯ ಕಾಣುತ್ತೇವೆ. ಆದರೆ, ಪ್ರಯತ್ನ ನಿರಂತರವಾಗಿ ಇದ್ದಾಗ ಮಾತ್ರ ನಮ್ಮ ಗುರಿ ಮುಟ್ಟಲು ಸಾಧ್ಯವಿದೆ ಎಂದರು.

ನಾವು ಬಯಸಿದ ಕೆಲಸಗಳು ಬಿಜೆಪಿಯಲ್ಲಿ ಆಗಲಿಲ್ಲ: ಎಚ್‌.ವಿಶ್ವನಾಥ್‌

ವಿಧಾನ ಪರಿಷತ್ತು ಸದಸ್ಯ ಎಸ್‌.ರುದ್ರೇಗೌಡ ಮಾತನಾಡಿ, ಕೌಶಲ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಟ್ಟಪ್ರಧಾನಮಂತ್ರಿ ನರೇಂದ್ರ ಮೋದಿ. ದೇಶದ ಯುವಜನರಿಗೆ ಕೌಶಲ್ಯ ಕಲಿಕೆ ಒದಗಿಸುವ ದೃಷ್ಠಿಯಿಂದ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಕೌಶಲ್ಯ ಉದ್ಯೋಗ ಒದಗಿಸುವ ಜತೆಯಲ್ಲಿ ಸ್ವಯಂ ಉದ್ಯೋಗ ಆರಂಭಿಸಲು ಎಲ್ಲ ರೀತಿ ಸಾಲ ಸೌಲಭ್ಯ ನೀಡುವ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಪ್ರವಾಸೋದ್ಯಮ ಕ್ಷೇತ್ರ, ಶಿಕ್ಷಣ, ಆರೋಗ್ಯ, ಹಣಕಾಸು ಕ್ಷೇತ್ರಗಳಲ್ಲಿ ಇರುವ ಅವಕಾಶಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. 

ಸರ್ವ ಧರ್ಮದವರನ್ನು ಪ್ರೀತಿಸುವ ಗುಣ ವೀರಶೈವಕ್ಕಿದೆ: ಡಾ.ವೀರಸೋಮೇಶ್ವರ

ಸ್ವಯಂ ಉದ್ಯೋಗ ಅವಕಾಶ ಸೃಷ್ಠಿಸಿಕೊಳ್ಳುವ ಬಗ್ಗೆ ಆಲೋಚನೆ ನಡೆಸಬೇಕು. ಸಂಸ್ಥೆ ಆರಂಭಿಸುವ ಮೂಲಕ ಅನೇಕರಿಗೆ ಉದ್ಯೋಗ ಒದಗಿಸಬೇಕು ಎಂದು ತಿಳಿಸಿದರು. ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 7ನೇ ತರಗತಿ, ಎಸ್ಸೆಸ್ಸೆಲ್ಸಿ , ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಶಿಕ್ಷಣ ಪೂರೈಸಿದ ಎಲ್ಲರಿಗೂ ಅವಕಾಶ ಇತ್ತು. ಸಾವಿರಕ್ಕೂ ಅಧಿಕ ಉದ್ಯೋಗ ಆಕಾಂಕ್ಷಿಗಳು ಪಾಲ್ಗೊಂಡಿದ್ದರು. ಹಲವು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದವು. ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹೆಚ್‌.ಎಂ.ಸುರೇಶ್‌, ಟೀಕ್ಯಾನಾಯ್ಕ, ಸಮನ್ವಯ ಕಾಶಿ, ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯ ಡಾ. ಧನಂಜಯ್‌ ಮತ್ತಿತರರು ಇದ್ದರು.

Follow Us:
Download App:
  • android
  • ios