ಮಂಡ್ಯ(ಮಾ.07): ಕಾಂಗ್ರೆಸ್ ಮುಖಂಡ ಬಿಜೆಪಿ ಸಚಿವ ಕೆ. ಸಿ. ನಾರಾಯಣ ಗೌಡ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

ಮಾಜಿ ಸಚಿವ, ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಸಚಿವ ನಾರಾಯಣಗೌಡ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಮಂಡ್ಯದ ಕಲಾಮಂದಿರದಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ನಾಯಕರು ವೇದಿಕೆ ಹಂಚಿಕೊಂಡಿದ್ದಾರೆ.

ಮುಖಂಡನಿಗೆ ಕೋಟಿ-ಕೋಟಿ ಪಂಗನಾಮ ಹಾಕಿದ ಗೋಲ್ಡ್‌ ಮ್ಯಾನ್..!

ಚಲುವರಾಯಸ್ವಾಮಿ ಸಚಿವರಿಗೆ ಬೆಳ್ಳಿ ಗದೆ ನೀಡಿ ಗೌರವಿಸಿದ್ದಾರೆ. ಕೆ.ಆರ್. ಪೇಟೆ ಉಪಚುನಾವಣೆಯಲ್ಲಿ ಬಿಜೆಪಿಗೆ ಚಲುವರಾಯಸ್ವಾಮಿ ಸಪೋರ್ಟ್ ಮಾಡಿದ್ರು ಎಂಬ ಮಾತುಗಳು ಕೇಳಿಬಂದಿತ್ತು.

ನಾರಾಯಣಗೌಡ್ರನ್ನು ಗೆಲ್ಲಿಸಲು ಚಲುವರಾಯಸ್ವಾಮಿ ಪರೋಕ್ಷವಾಗಿ ದುಡಿಯುತ್ತಿದ್ದಾರೆಂದು ಜೆಡಿಎಸ್ ನಾಯಕರು ಆರೋಪಿಸಿದ್ದರು. ನಾರಾಯಣಗೌಡ ಸಚಿವರಾದ ಬಳಿಕ‌‌ ಒಂದೇ ವೇದಿಕೆಯಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

.ಮಾರ್ಚ್ 7ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ