ಕೋಲಾರ (ನ.28) : ರಾಜ್ಯದಲ್ಲಿ ಉಪ ಚುನಾವಣಾ ಕಣ ರಂಗೇರಿದೆ. 15 ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿರುವ ಬೆನ್ನಲ್ಲೇ ಇತ್ತ ಕೋಲಾರ ಜಿಲ್ಲಾ ಪಂಚಾಯತ್ ಕೈ ವಶವಾಗಿದೆ. 

ಕೋಲಾರ ಜಿಲ್ಲಾ ಪಂಚಾಯತ್ ನಲ್ಲಿ ಕಾಂಗ್ರೆಸ್ ಜಯ ಗಳಿಸಿದ್ದು, ನೂತನ ಅಧ್ಯಕ್ಷರಾಗಿ ಸಿ.ಎಸ್. ವೆಂಕಟೇಶ್ ಆಯ್ಕೆಯಾಗಿದ್ದಾರೆ. 

ಕಳೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಬೆಂಬಲಿಗರಾದ ಕೋಲಾರ ತಾಲೂಕಿನ ವೇಮಗಲ್ ವೆಂಕಟೇಶ್ ಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಪಟ್ಟ ಒಲಿದಿದೆ.

ಕೋಲಾರ: ಮಾಲೂರಿನಲ್ಲಿ ದಿನಕ್ಕೊಬ್ಬ ತಹಸೀಲ್ದಾರ್..!...

ಇನ್ನು ಮಾಜಿ ಸಚಿವ ರಮೇಶ್ ಕುಮಾರ್ ಬಣಕ್ಕೆ ಕೋಲಾರ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಹಿನ್ನಡೆಯಾದಂತಾಗಿದೆ. ಒಟ್ಟು 23 ಸದಸ್ಯರಿಂದ ನೂತನ ಅಧ್ಯಕ್ಷರಿಗೆ ಬೆಂಬಲ ದೊರಕಿದೆ.

ರಾಜಾರೋಷವಾಗಿ ಬಸ್ಸಲ್ಲೇ ಇದನ್ನು ಸಾಗಿಸ್ತಿದ್ದ ಮಹಿಳೆ ಅರೆಸ್ಟ್

ರಾಜ್ಯದಲ್ಲಿ ಡಿಸೆಂಬರ್ 5 ರಂದು 15 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಜಯಗಳಿಸುವ ಮೂಲಕ ಜಯದ ಮುನ್ಸೂಚನೆ ಸಿಕ್ಕಿದಂತಾಗಿದೆ. ಡಿಸೆಂಬರ್ 9 ರಂದು ಉಪ ಚುನಾವನೆಯ ಫಲಿತಾಂಶ ಪ್ರಕಟವಾಗಲಿದೆ.