ಪ್ರದೇಶ ಕಾಂಗ್ರೆಸ್‌ ಸಮಿತಿ ಸೂಚನೆಯಂತೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಜನರ ಸ್ಪಂದನೆ ಗಮನಿಸಿದರೆ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬರಲಿದೆ ಎಂದು ಕಾಂಗ್ರೆಸ್‌ ಮುಖಂಡ ಎಚ್‌.ಎಂ. ಗಣೇಶ್‌ಪ್ರಸಾದ್‌ ಹೇಳಿದರು.

 ಗುಂಡ್ಲುಪೇಟೆ : ಪ್ರದೇಶ ಕಾಂಗ್ರೆಸ್‌ ಸಮಿತಿ ಸೂಚನೆಯಂತೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಜನರ ಸ್ಪಂದನೆ ಗಮನಿಸಿದರೆ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬರಲಿದೆ ಎಂದು ಕಾಂಗ್ರೆಸ್‌ ಮುಖಂಡ ಎಚ್‌.ಎಂ. ಗಣೇಶ್‌ ಪ್ರಸಾದ್‌ ಹೇಳಿದರು.

ತಾಲೂಕಿನ ಹಿರೀಕಾಟಿ, ದೊಡ್ಡಹುಂಡಿ, ಚಿಕ್ಕಹುಂಡಿ, ಚನ್ನವಡೆಯನಪುರ, ಹೊಸಪುರ, ಶ್ರೀಕಂಠಪುರ, ಹೊಣಕನಪುರ, ಯಡವನಹಳ್ಳಿ, ಕುರುಬರಹುಂಡಿ, ಕೋಟೆಕೆರೆ, ಭೋಗಯ್ಯನಹುಂಡಿ, ಅರೇಪುರ, ತೊಂಡವಾಡಿ, ಕಮರಹಳ್ಳಿ, ರಂಗನಾಪುರ, ನಿಟ್ರೆ, ಬೆಳಚಲವಾಡಿ, ಕಾಳನಹುಂಡಿ, ಬೇಗೂರಲ್ಲಿ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದರು.

ಕ್ಷೇತ್ರದಲ್ಲಿ ಮಹದೇವಪ್ರಸಾದ್‌ ಹಾಗೂ ಗೀತಾ ಮಹದೇವಪ್ರಸಾದ್‌ ಕಾಲದಲ್ಲಾದ ಕೆಲಸಗಳು ಕ್ಷೇತ್ರದಲ್ಲಿ ಮಾತನಾಡುತ್ತಿವೆ. ಬಿಜೆಪಿ ಸರ್ಕಾರ ಬಂದು ಎರಡೂವರೆ ವರ್ಷ ಕಳೆಯುತ್ತಿದ್ದರೂ ಕ್ಷೇತ್ರಕ್ಕೆ ಹೊಸ ಯೋಜನೆಗಳೇನು ಎಂದರು.

ಸಿದ್ದರಾಮಯ್ಯ ನೇತೃತ್ವದಲ್ಲಿ ಕಳೆದ ಕಾಂಗ್ರೆಸ್‌ ಸರ್ಕಾರದ ಅವಧಿ​ಯಲ್ಲಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಚಾಲನೆ ನೀಡಿದ್ದು,

ಬಹುಗ್ರಾಮ ಕುಡಿವ ನೀರು ಬಂದಿದೆ. ಆದರೆ, ಈ ಬಿಜೆಪಿ ಸರ್ಕಾರದಲ್ಲಿ ಶಾಶ್ವತ ಕೆಲಸ ಮಂಜೂರು ಆಗಿಲ್ಲ ಎಂದರು.

ಇನ್ನೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ತೈಲ ಬೆಲೆ ಏರಿಕೆ, ಗ್ಯಾಸ್‌ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇದು ಜನರ ಮನಸ್ಸಿನಲ್ಲಿ ಇರುವ ಕಾರಣ ಬಿಜೆಪಿ ವಿರುದ್ಧ ಮತ ಚಲಾಯಿಸಲಿದ್ದಾರೆ ಎಂದರು.

ಇದು ಕ್ವಿಟ್‌ ಬಿಜೆಪಿ ಮೂವಮೆಂಟ್‌ ಯಾತ್ರೆ: ಡಿಕೆಶಿ

 ಬಳ್ಳಾರಿ : ಹಿಂದೆ ಮಹಾತ್ಮ ಗಾಂಧೀಜಿಯವರು ಕ್ವಿಟ್‌ ಇಂಡಿಯಾ ಚಳವಳಿ ನಡೆಸಿದ್ದರು. ಇದೀಗ ರಾಹುಲ್‌ ಗಾಂಧಿಯವರು ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯಲು ಕ್ವಿಟ್‌ ಬಿಜೆಪಿ ಎಂಬಂತೆ ಪಾದಯಾತ್ರೆಯನ್ನು ನಡೆಸುತ್ತಿದ್ದಾರೆ. ಅದಕ್ಕೆ ಎಲ್ಲರೂ ಸಾಥ್‌ ನೀಡಬೇಕು. ಬಿಜೆಪಿಯ ಭ್ರಷ್ಟಸರ್ಕಾರವನ್ನು ಕಿತ್ತೆಸೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ನಗರದ ಮುನ್ಸಿಪಲ್‌ ಕಾಲೇಜಿನ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಸೆ.30ರಿಂದ ಕರ್ನಾಟಕದಲ್ಲಿ ಯಾತ್ರೆ ನಡೆಯುತ್ತಿದೆ. ಇ.ಡಿ. ಒಂದು ದಿನ ಇಡಿ ವಿಚಾರಣೆಗೆ ನನ್ನನ್ನು ಕರೆಸಿತ್ತು. ಅದೊಂದು ದಿನ ಬಿಟ್ಟು ಉಳಿದ ಎಲ್ಲಾ ದಿನಗಳಲ್ಲೂ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದೇನೆ. ಈ ಪಾದಯಾತ್ರೆ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಭಾರೀ ಶಕ್ತಿ ತುಂಬಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 150 ಸೀಟು ಬರುವುದು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಹುಲ್‌ ಪ್ರಧಾನಿ ಆಗಲು, ಖರ್ಗೆ, ಸಿದ್ದರಾಮಯ್ಯ, ನಾನು ಸಿಎಂ ಆಗಲು ಮಾಡುತ್ತಿರುವ ಪಾದಯಾತ್ರೆ ಇದಲ್ಲ. ಇದು ಭಾರತದ ಜನರ ನೋವಿನ ಧ್ವನಿಗಾಗಿ ನಡೆಯುತ್ತಿರುವ ಪಾದಯಾತ್ರೆ. ಇದೊಂದು ಕ್ರಾಂತಿ. ನಿಮ್ಮ ಸೇವೆ ಮಾಡುತ್ತೇವೆ. ನಮಗೊಂದು ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಚಾಮುಲ್‌ ಅಧ್ಯಕ್ಷ ಎಚ್‌.ಎಸ್‌.ನಂಜುಂಡಪ್ರಸಾದ್‌ ಮಾತನಾಡಿ, ಬೇಗೂರು ಹೋಬಳಿ ಮಹದೇವಪ್ರಸಾದ್‌ರ ಭದ್ರಕೋಟೆ. ಕಳೆದ ಚುನಾವಣೆಯಲ್ಲಿ ಸ್ವಲ್ಪ ಸಡಿಲವಾಗಿತ್ತು. ಆದರೀಗ ಜನರ ಬೆಂಬಲ ಗಮನಿಸಿದರೆ ಬೇಗೂರು ಹೋಬಳಿ ಈಗಲೂ ಕಾಂಗ್ರೆಸ್‌ ಭದ್ರಕೋಟೆ ಎಂಬುದು ಕಳೆದ ಗ್ರಾಪಂ ಚುನಾವಣೆಯಲ್ಲಿ ಸಾಬೀತಾಗಿದೆ ಎಂದರು.

ಬೇಗೂರು ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಿ.ಎಂ.ಮುನಿರಾಜು, ಜಿಪಂ ಮಾಜಿ ಅಧ್ಯಕ್ಷ ಡಿ.ಸಿ.ನಾಗೇಂದ್ರ, ತಾಪಂ ಮಾಜಿ ಅಧ್ಯಕ್ಷ ಎಚ್‌.ಎನ್‌.ಬಸವರಾಜು, ಗ್ರಾಪಂ ಅಧ್ಯಕ್ಷರಾದ ವಾಟಾಳ್‌ ಶಿವಾನಂದ, ಭವ್ಯ ಮುನಿರಾಜು, ನಿಟ್ರೆ ನಂದೀಶ್‌, ಬ್ಲಾಕ್‌ ಕಾಂಗ್ರೆಸ್‌ ಸಮಿತಿ ವಕ್ತಾರ ಆರ್‌.ಎಸ್‌.ನಾಗರಾಜು, ಜಿಪಂ ಮಾಜಿ ಸದಸ್ಯ ನಾಗರಾಜು, ಗ್ರಾಪಂ ಮಾಜಿ ಅಧ್ಯಕ್ಷ ಕೆ.ನಂದೀಶ್‌, ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮೋಹನ್‌ ದಾಸ್‌ ಸೇರಿದಂತೆ ಆಯಾಯ ಗ್ರಾಪಂ ಸದಸ್ಯರು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಇದ್ದರು.