ಕೋಲಾರ(ಜ.19): ಕಾಂಗ್ರೆಸ್ ಹೈಕಮಾಂಡ್ ಈಗ ಲೋ ಕಮಾಂಡ್ ಆಗಿದೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ವ್ಯಂಗ್ಯ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಳಂಬವಾಗುತ್ತಿರುವುದರ ಬಗ್ಗೆ ಅವರು ಕೋಲಾರದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಳಂಬದ ಕುರಿತು ಕೋಲಾರದ ಮಾಲೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹೈ ಕಮಾಂಡ್ ಲೋ ಕಮಾಂಡ್ ಆಗಿ ಶಕ್ತಿ ಕಳೆದುಕೊಂಡಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಮೂರು ಗುಂಪು ಆಗಿದೆ. ಗುಂಪುಗಾರಿಗೆಯಿಂದ ಕಾಂಗ್ರೆಸ್‌ಗೆ ಈ ಪರಿಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ.

ಮಂಗಳೂರು ಗಲಭೆ: ಮೊಬೈಲ್ ಟವರ್ ಲೊಕೇಷನ್ ಆಧಾರದಲ್ಲಿ ಕೇರಳದ ಸಾವಿರಾರು ಜನರಿಗೆ ನೋಟಿಸ್.

ಮುಂಚೂಣಿ ನಾಯಕರಿಂದಲೇ ಈ ಪರಿಸ್ಥಿತಿ ಬಂದಿದೆ. ಮಾಜಿ ಸಿಎಂ ಸಿದ್ದು, ಡಿಕೆಶಿ ಹಾಗೂ ಖರ್ಗೆಯಿಂದ ಮೂರು ಗುಂಪುಗಳಾಗಿವೆ. ಸಿದ್ದರಾಮಯ್ಯ ಎಂ.ಬಿ ಪಾಟೀಲ್ ಪರ ಲಾಬಿ ಮಾಡುತ್ತಿದ್ದಾರೆ ಎಂದಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದ. ವಿಸ್ತರಣೆ ತಡೆಗೆ ಸಕಾರಣ ಇದ್ದು, ಶೀಘ್ರದಲ್ಲೇ ಸಂಪುಟ ವಿಸ್ತರಣೆ ಆಗಲಿದೆ. ಪಕ್ಷದಲ್ಲಿ ನನ್ನನು ಗೌರವಯುತವಾಗಿ ನಡೆಸಿಕೊಳ್ಳುತ್ತಿದ್ದಾರೆ. ಹೈ ಕಮಾಂಡ್ ಸೂಕ್ತ ಕಾಲದಲ್ಲಿ ಸಂಸದ ಬಚ್ಚೇಗೌಡ ವಿರುದ್ಧ ಕ್ರಮ ವಹಿಸಿದೆ ಎಂದಿದ್ದಾರೆ.

ಅಡ್ಯಾರ್ ಪೌರತ್ವ ಪ್ರತಿಭಟನೆ: 'ಹೋರಾಟ ಇಲ್ಲಿಗೇ ಮುಗಿದಿಲ್ಲ'..!