ಕಾಂಗ್ರೆಸ್‌, ಜೆಡಿಎಸ್‌ ಮುಖಂಡರು ಬಿಜೆಪಿಗೆ

ತಾಲೂಕಿನ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನ ಹಲವಾರು ಮುಖಂಡರು ಮಾಜಿ ಸಂಸದ ಮುದ್ದಹನುಮೇಗೌಡ, ಮಾಜಿ ವಿಧಾನಪರಿಷತ್‌ ಸದಸ್ಯ ಎಂ.ಡಿ.ಲಕ್ಷಿತ್ರ್ಮೕನಾರಾಯಣ್‌, ಶಾಸಕ ಮಸಾಲಾ ಜಯರಾಮ್‌ ರವರ ಸಮ್ಮುಖದಲ್ಲಿ ಇಂದು ಬಿಜೆಪಿಗೆ ಸೇರ್ಪಡೆಗೊಂಡರು.

Congress JDS Leaders JOins BJP snr

 ತುರುವೇಕೆರೆ :  ತಾಲೂಕಿನ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನ ಹಲವಾರು ಮುಖಂಡರು ಮಾಜಿ ಸಂಸದ ಮುದ್ದಹನುಮೇಗೌಡ, ಮಾಜಿ ವಿಧಾನಪರಿಷತ್‌ ಸದಸ್ಯ ಎಂ.ಡಿ.ಲಕ್ಷಿತ್ರ್ಮೕನಾರಾಯಣ್‌, ಶಾಸಕ ಮಸಾಲಾ ಜಯರಾಮ್‌ ರವರ ಸಮ್ಮುಖದಲ್ಲಿ ಇಂದು ಬಿಜೆಪಿಗೆ ಸೇರ್ಪಡೆಗೊಂಡರು.

ಮಾಜಿ ಶಾಸಕ ಬಿ.ಭæೖರಪ್ಪಾಜಿಯವರ ಪುತ್ರ ಬೆಟ್ಟಸ್ವಾಮಿಗೌಡ, ಕಳೆದ ಬಾರಿ ಕಾಂಗ್ರೆಸ್‌ನಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಪರಾಜಿತರಾಗಿದ್ದ ಚೌದ್ರಿ ರಂಗಪ್ಪನವರ ಪುತ್ರ ಚೌದ್ರಿ ಗಿರೀಶ್‌, ತಾ.ಪಂ ಮಾಜಿ ಸದಸ್ಯ ಪುರ ನಂಜೇಗೌಡ, ದಂಡಿನಶಿವರದ ಡಿ.ಎಸ್‌.ಕುಮಾರ್‌, ತಾ.ಪಂ ಮಾಜಿ ಅಧ್ಯಕ್ಷೆ ನಾಗರತ್ನಮ್ಮನವರ ಪತಿ ರವೀಂದ್ರ, ಕೋಳಘಟ್ಟಶಿವಾನಂದ್‌, ಆನೇಕೆರೆ ಗ್ರಾ.ಪಂ ಅಧ್ಯಕ್ಷ ಮಂಜುನಾಥ್‌, ಪಿಎಲ್‌ಡಿ ಬ್ಯಾಂಕ್‌ ನಿವೃತ್ತ ವ್ಯವಸ್ಥಾಪಕ ಸಂತೋಷ್‌ ಕಂಟ್ಲಿ, ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕ ಗೊಟ್ಟೀಕೆರೆ ಕಾಂತರಾಜ್‌, ಕುರುಬರಹಳ್ಳಿ ಮಂಜೇಶ್‌, ಬಸವನಂಜಪ್ಪ, ಮಹೇಶ್‌, ಶೇಖರ್‌, ದುಂಡ ಮಂಜುನಾಥ್‌, ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಗುರುವಿನ ಮಠದ ಧರಣೀಶ್‌ ಸೇರಿದಂತೆ ನೂರಾರು ಮಂದಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾದರು.

ಈ ವೇಳೆ ಮಾಜಿ ಸಂಸದ ಮುದ್ದಹನುಮೇಗೌಡ ಮಾತನಾಡಿ, ಶಾಸಕ ಮಸಾಲಾ ಜಯರಾಮ್‌ ರವರು ಪುನಃ ಶಾಸಕರಾಗಿ ಆಯ್ಕೆಯಾಗುವುದರಲ್ಲಿ ಸಂಶಯವೇ ಇಲ್ಲ. ಮುಂಬರುವ ದಿನಗಳಲ್ಲಿ ಕ್ಷೇತ್ರವ್ಯಾಪ್ತಿಯಲ್ಲಿ ಇನ್ನೂ ಹಲವರು ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷವನ್ನು ತ್ಯಜಿಸಿ ಬಿಜೆಪಿ ಸೇರಲಿದ್ದಾರೆ ಎಂದರು.

ಬಿಜೆಪಿಯ ಹಿರಿಯ ಮುಖಂಡ ಎಂ.ಡಿ.ಲಕ್ಷ್ಮೇನಾರಾಯಣ್‌ ಮಾತನಾಡಿ, ಈ ಬಾರಿ ಎಸ್‌ಸಿ, ಎಸ್ಟಿ, ಹಿಂದುಳಿದ ವರ್ಗಗಳು ಹಾಗೂ ಇನ್ನಿತರ ಎಲ್ಲಾ ಸಮುದಾಯದವರೂ ಸಹ ಬಿಜೆಪಿಯನ್ನು ಬೆಂಬಲಿಸುವರು. ಬಹುಪಾಲು ಮಂದಿ ಈ ಬಾರಿ ಬಿಜೆಪಿಗೆ ಮತ ನೀಡುವ ಮೂಲಕ ರಾಜ್ಯ ಜಿಲ್ಲೆ ಹಾಗೂ ತಾಲೂಕಿನಲ್ಲೂ ಅಧಿಕಾರಕ್ಕೆ ತರಲಿದ್ಧಾರೆ ಎಂದು ಎಂ.ಡಿ.ಲಕ್ಷ್ಮೇನಾರಾಯಣ್‌ ಹೇಳಿದರು.

ಶಾಸಕ ಮಸಾಲಾ ಜಯರಾಮ್‌ ಮಾತನಾಡಿ, ತಮಗೆ ಸಿಕ್ಕ ಕೇವಲ 20 ತಿಂಗಳ ಅವಧಿಯಲ್ಲಿ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಮಾಡಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದ ಜನತೆ ಆಶೀರ್ವಾದ ಮಾಡಬೇಕೆಂದು ವಿನಂತಿಸಿಕೊಂಡ ಶಾಸಕರು ಸಂಪೂರ್ಣವಾಗಿ ಬಿಜೆಪಿ ಸರ್ಕಾರ ರಚನೆಯಾಗುವುದರಿಂದ ನಮ್ಮ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಶಾಸಕ ಮಸಾಲಾ ಜಯರಾಮ್‌ ಹೇಳಿದರು.

ಈ ಸಂಧರ್ಭದಲ್ಲಿ ಹಿರಿಯ ಮುಖಂಡರಾದ ಅರಳೀಕೆರೆ ಶಿವಯ್ಯ, ದೊಂಬರನಹಳ್ಳಿ ಬಸವರಾಜು, ತಾಲೂಕು ಬಿಜೆಪಿ ಅಧ್ಯಕ್ಷ ಕಲ್ಕೆರೆ ಮೃತ್ಯುಂಜಯ, ಕೊಂಡಜ್ಜಿ ವಿಶ್ವನಾಥ್‌, ಪ್ರಧಾನ ಕಾರ್ಯದರ್ಶಿಗಳಾದ ಡೊಂಕಿಹಳ್ಳಿ ಪ್ರಕಾಶ್‌, ಬಡಗರಹಳ್ಳಿ ರಾಮೇಗೌಡ, ವಿ.ಡಿ.ವೆಂಕಟರಾಮಯ್ಯ, ಅರೇಮಲ್ಲೇನಹಳ್ಳಿ ಹೇಮಚಂದ್ರು, ಮಹಿಳಾ ಘಟಕದ ಅಧ್ಯಕ್ಷೆ ಚೂಡಾಮಣಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios