ಆಪರೇಷನ್ ಏನೂ ಇಲ್ಲ. ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರೋಕೆ ತುದಿಗಾಲಲ್ಲಿ ನಿಂತಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಹೇಳೀದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ತಿರುಗೇಟು ನೀಡಿದ್ದಾರೆ.

ಮೈಸೂರು(ನ.30): ಆಪರೇಷನ್ ಏನೂ ಇಲ್ಲ. ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರೋಕೆ ತುದಿಗಾಲಲ್ಲಿ ನಿಂತಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಹೇಳೀದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಪರ ಪ್ರಚಾರ ಮಾಡಿದ ಅವರು, ಆಪರೇಷನ್- 2 ಎಂಬುದು ಕೇವಲ ರಾಜಕೀಯ ದುರುದ್ದೇಶದ ಆರೋಪ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ತಿರುಗೇಟು ನೀಡಿದ್ದಾರೆ.

ಆಂತರಿಕ ಸರ್ವೆಯಿಂದ BJP ಫುಲ್ ಖುಷ್, ವಿಶ್ವನಾಥ್‌ಗೆಷ್ಟು ಮತ..?

ನಾವು ಯಾವುದೇ ಆಪರೇಷನ್ ಮಾಡಿಲ್ಲ. ಅದರ ಅಗತ್ಯವೂ ನಮಗಿಲ್ಲ. ಆದರೆ ಕಾಂಗ್ರೆಸ್‌ನವರು ಚುನಾವಣೆ ಗಮನದಲ್ಲಿಟ್ಟುಕೊಂಡು ಜನರನ್ನು ದಿಕ್ಕು ತಪ್ಪಿಸಲು ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಆಪರೇಷನ್ - 2 ಮಾಡಿತ್ತಿದೆ ಎಂಬುದು ಸುಳ್ಳು ಎಂದು ಹೇಳಿದ್ದಾರೆ.

ಆಂತರಿಕ ಸರ್ವೆಯಿಂದ BJP ಫುಲ್ ಖುಷ್, ವಿಶ್ವನಾಥ್‌ಗೆಷ್ಟು ಮತ..?

ಆದರೆ ಕಾಂಗ್ರೆಸ್, ಜೆಡಿಎಸ್‌ ಶಾಸಕರು ನಮ್ಮ ಪಕ್ಷ ಸೇರಲು ತುದಿಗಾಲಿ‌ನಲ್ಲಿ ನಿಂತಿದ್ದಾರೆ‌. ರಾಜಕೀಯ ಎಂಬುದೇ ಅನಿಶ್ಚಿತತೆ. ಆದ್ದರಿಂದ ರಾಜಕೀಯ ಪಕ್ಷಗಳು ಸಮೀಕ್ಷೆ ಮಾಡಿಸುವುದು ಸಹಜ. ಕಾಂಗ್ರೆಸ್‌ನವರೂ ಸಮೀಕ್ಷೆ ಮಾಡಿಸಿದ್ದಾರೆ. ಅದರಲ್ಲಿ ಅವರಿಗೆ ಪೂರಕವಾಗ ಮಾಹಿತಿ ಬಂದಿರಬಹುದು. ಆದರೆ ಹೆಚ್ಚಿನ ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಹುಣಸೂರು ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ ಎಂದು ಮೈಸೂರಿನಲ್ಲಿ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರು: ಕಾಂಗ್ರೆಸ್‌ಗೆ ಪ್ರಜ್ವಲ್ ರೇವಣ್ಣ ಖಡಕ್ ವಾರ್ನಿಂಗ್..!