ಕಾಂಗ್ರೆಸ್, ಜೆಡಿಎಸ್ ಮುಖಂಡರು ಬಿಜೆಪಿಗೆ ಸೇರ್ಪಡೆ
ಬಿಜೆಪಿ ಎನ್.ಆರ್.ವಿಧಾ ನಸಭಾ ಕ್ಷೇತ್ರ ಯುವ ಮೋರ್ಚಾ ವತಿಯಿಂದ ಕಲ್ಯಾಣಗಿರಿಯ ಶ್ರೀಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ ಸಭಾಂಗಣದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.
ಮೈಸೂರು (n.07): ಬಿಜೆಪಿ ಎನ್.ಆರ್.ವಿಧಾ ನಸಭಾ ಕ್ಷೇತ್ರ ಯುವ ಮೋರ್ಚಾ ವತಿಯಿಂದ ಕಲ್ಯಾಣಗಿರಿಯ ಶ್ರೀಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ ಸಭಾಂಗಣದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.
ವಾರ್ಡ್ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ನೇಮಕಾತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾಂಗ್ರೆಸ್ (Congress) , ಜೆಡಿಎಸ್‌ನ್ನು (JDS) ತೊರೆದ ಸುಪ್ರೀತ್ ಶೆಟ್ಟಿ, ರವಿ, ಮಂಜುನಾಥ್, ಮಹೇಶ್, ಶೋಹೇಬ… ಮತ್ತು ಬೆಂಬಲಿಗರು ಕಲ್ಯಾಣಗಿರಿಯ ಶ್ರೀಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ ಆವರಣದಲ್ಲಿ ಎನ್.ಆರ್. ಕ್ಷೇತ್ರಯುವ ಮೋರ್ಚಾ ವತಿಯಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಟ್ಟು ಬಿಜೆಪಿಗೆ ಸೇರ್ಪಡೆಯಾದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್. ಶ್ರೀವತ್ಸ ಅವರು ನರಸಿಂಹರಾಜ ಕ್ಷೇತ್ರದ ಯುವ ಮೋರ್ಚಾ ಕಾರ್ಯಕರ್ತರು ಅತ್ಯಂತ ಕ್ರಿಯಾಶೀಲರಾಗಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ವಾರ್ಡ್ ಮಟ್ಟದಲ್ಲಿ ಹಾಗೂ ಬೂತ್‌ಮಟ್ಟದಲ್ಲಿ ಕೆಲಸ ಮಾಡಲು ಸಜ್ಜಾಗುತ್ತಿದ್ದಾರೆ. ಕಳೆದ ಬಾರಿ ಕೊರೋನ ವೇಳೆ ಮನೆ ಮನೆ ಬಾಗಿಲಿಗೆ ಬಡವರಿಗೆ ದಿನನಿತ್ಯ ಬಳಕೆಯ ದವಸ ಧಾನ್ಯಗಳು ಆಹಾರ ಕೊಡುವ ಮೂಲಕ ಶ್ರಮದಾನ ಮಾಡಿದರು.
ಇನ್ನು ಅನೇಕ ಯೋಜನೆಗಳನ್ನು ಬೂತ್ ಮಟ್ಟದಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರದ ಸವಲತ್ತನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಪ್ರತಿಯೊಬ್ಬ ಯುವಕರನ್ನು ಪಕ್ಷಕ್ಕೆ ಸೇರ್ಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಕೊರೋನ ವೇಳೆ ಕೇಂದ್ರ ಸರ್ಕಾರದ ವ್ಯಾಕ್ಸಿನ್‌ಗಳನ್ನು ಉಚಿತವಾಗಿ ಪ್ರತಿಯೊಬ್ಬ ಸಾರ್ವಜನಿಕರಿಗೂ ಅನುಕೂಲವಾಯಿತು.
ಜೆಎಸ್‌ಎಸ್ ಸಂಸ್ಥೆ ಮತ್ತು ಗಣಪತಿ ಸಚ್ಚಿದಾನಂದ ಆಶ್ರಮ, ಎನ್.ಆರ್. ಕ್ಷೇತ್ರದ ಚಚ್‌ರ್‍ನ ಫಾದರ್ ಸಹಕಾರದೊಡನೆ ಕೊರೋನಾ ವೇಳೆ ಉಚಿತ ಆಹಾರವನ್ನು ಬಡವರಿಗೆ ಹಸಿವು ನೀಗಿಸಲು ಬಹಳ ಸಹಕರಿಸಿದರು. ಇಂತಹ ಬಗೆ ಬಗೆಯ ಸಾಮಾಜಿಕ ಕೆಲಸ ಮಾಡುವ ಜತೆಗೆ ಸರ್ಕಾರದ ಸವಲತ್ತನ್ನು ಹಾಗೂ ಯೋಜನೆಯನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದರು.
ಬಳಿಕ ಮಾತನಾಡಿದ ಮಾಜಿ ಮೇಯರ್ ಸಂದೇಶ್‌ಸ್ವಾಮಿ, ಈ ಕ್ಷೇತ್ರದಲ್ಲಿ ಕಳೆದ 28 ವರ್ಷದಲ್ಲಿ ಯಾವುದೇ ಅಭಿವೃದ್ಧಿ ಯೋಜನೆ ಆಗಿಲ್ಲ. ಮೂಲಭೂತ ಸೌಕರ್ಯಗಳು ಯಾವುದೂ ಆಗಿಲ್ಲ. ಕ್ಷೇತ್ರದಲ್ಲಿ ಯಾವುದೇ ಸುಸಜ್ಜಿತವಾದ ಆಸ್ಪತ್ರೆ, ಕಾಲೇಜು ಇಲ್ಲ.5 ಕಿ.ಮೀ. ಸಿಟಿ ಭಾಗಕ್ಕೆ ತೆರಳಬೇಕಿದೆ. ಮೈಸೂರಿನ ಕೃಷ್ಣರಾಜ, ಚಾಮರಾಜ ಕ್ಷೇತ್ರದಲ್ಲಿ ಗುದ್ದಲಿ ಪೂಜೆ ಮತ್ತು ಅಬಿವೃದ್ಧಿ ಕಾರ್ಯ ನಡೆಯುತ್ತಿದೆ.
ನರಸಿಂಹರಾಜ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಆದ್ದರಿಂದ ಇಲ್ಲಿ ಜನರಿಗೂ ಯಾವುದೇ ಕೆಲಸಗಳು ಮಾಡುತ್ತಿಲ್ಲ. ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರಿಗೂ ಸಹ ಯಾವುದೇ ಕೆಲಸ ಕಾರ್ಯಗಳು ಆಗದೆ ಅವರ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಂದಿನ ಬಾರಿ ಚುನಾವಣೆಯಲ್ಲಿ ನರಸಿಂಹರಾಜ ಕ್ಷೇತ್ರ ಅದ್ದೂರಿಯಾಗಿ ಬಿಜೆಪಿ ಜಯಭೇರಿ ಆಗುವಂತೆ ಕೆಲಸ ಮಾಡೋಣ. ನಿಮ್ಮಂತಹ ಯುವ ಪಡೆ ಪ್ರತಿ ಬೂತಿನಿಂದ ಪಕ್ಷಕ್ಕೆ ದುಡಿಯುವಂತಾಗಲಿ ಹಾಗೂ ಕೇಂದ್ರ ರಾಜ್ಯ ಸರ್ಕಾರಗಳು ಇರುವುದರಿಂದ ನರಸಿಂಹರಾಜ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ಮಾತ್ರ ಅಭಿವೃದ್ಧಿ ಆಗುತ್ತದೆ ಎಂದರು.
ಕ್ಷೇತ್ರದ ಅಧ್ಯಕ್ಷ ಭಾನುಪ್ರಕಾಶ್, ನಗರ ಪ್ರಧಾನ ಕಾರ್ಯದರ್ಶಿ ಗಿರಿಧರ್, ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಡಿ. ಲೋಹಿತ್, ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ವೇಲು, ನಗರ ಯುವ ಮೋರ್ಚಾ ಅಧ್ಯಕ್ಷ ಎಂ.ಜಿ. ಕಿರಣ್‌ಗೌಡ, ನಗರ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಜಯಶಂಕರ್, ನಗರ ಉಪಾಧ್ಯಕ್ಷ ಟಿ. ರಮೇಶ್, ನಗರ ಪಾಲಿಕೆ ಸದಸ್ಯೆ ಆಶಾ ನಾಗಭೂಷಣ…, ನಗರ ಪ್ರಧಾನ ಕಾರ್ಯದರ್ಶಿ ಸಂತೋಷ್, ಉಪಾಧ್ಯಕ್ಷರಾದ ಕಾರ್ತಿಕ್, ಪುನೀತ್, ಕ್ಷೇತ್ರದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಧನರಾಜ…, ನವೀನ್ ಶೆಟ್ಟಿ, ಎಸ್‌ಸಿ ಮೋರ್ಚಾ ಅಧ್ಯಕ್ಷ ಸತೀಶ್, ಪ.ಪಂಗಡ ಮೋರ್ಚಾ ಅಧ್ಯಕ್ಷ ನಾರಾಯಣ ಲೋಲಪ್ಪ, ರೈತ ಮೋರ್ಚಾ ಅಧ್ಯಕ್ಷ ಶಶಿ, ವಿನೋದ್, ಬಸವರಾಜಪ್ಪ, ಶ್ರೀಕಂಠಮೂರ್ತಿ, ಸ್ವಾಮಿ, ರಜನಿಕಾಂತ್, ನಾಗರಾಜು, ಪುನೀತ್, ಆನಂದ್, ಜೀವನ್ ಮೊದಲಾದವರು ಇದ್ದರು.