Asianet Suvarna News Asianet Suvarna News

ದಾವಣಗೆರೆ: ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡ ಶವವಾಗಿ ಪತ್ತೆ, ಕೊಲೆ ಶಂಕೆ

*  ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಗುಡ್ಡದಲ್ಲಿ ಮೃತದೇಹ ಪತ್ತೆ 
*  ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿದ್ದ ಜೈನುಲ್ಲಾ ಖಾನ್ 
*  ಈ ಸಂಬಂಧ ಬಸವಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Congress Leader Deadbody Found at Channagiri in Davenegere grg
Author
Bengaluru, First Published Sep 10, 2021, 3:49 PM IST
  • Facebook
  • Twitter
  • Whatsapp

ದಾವಣಗೆರೆ(ಸೆ.10): ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡ ಶವವಾಗಿ ಪತ್ತೆಯಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಗುಡ್ಡದಲ್ಲಿ ಇಂದು(ಶುಕ್ರವಾರ) ನಡೆದಿದೆ. ಜೈನುಲ್ಲಾ ಖಾನ್ (40) ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡರಾಗಿದ್ದಾರೆ. 

ಜಿಲ್ಲೆಯ ಮಾಯಕೊಂಡ ವಿಧಾನಸಭಾ  ಕ್ಷೇತ್ರದ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿದ್ದ ಜೈನುಲ್ಲಾ ಖಾನ್ ಕಳೆದ ಒಂದು ವಾರದ ಹಿಂದೆ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.

ದಾವಣಗೆರೆ; 'ಕುಡಿಯಲು ಹಣ ಕೊಡಲ್ಲ, ಬುದ್ಧಿ ಹೇಳ್ತಿಯಾ' ಪಾಪಿಯಿಂದ ಪತ್ನಿ ಹತ್ಯೆ! 

ಜೈನುಲ್ಲಾ ಖಾನ್ ಅವರನ್ನ ಉದ್ದೇಶ ಪೂರ್ವಕವಾಗಿ ಅಪಹರಿಸಿರುವ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಮೃತ ಜೈನುಲ್ಲಾ  ಬೆಸ್ಕಾಂನಲ್ಲಿ ಗುತ್ತಿಗೆದಾರನಾಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಬಸವಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow Us:
Download App:
  • android
  • ios