ಶಿವಮೊಗ್ಗ (ಅ.11): ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 

ತೀವ್ರ ಉಸಿರಾಟದ ತೊಂದರೆ. ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆ ಸಾಗರದಲ್ಲಿ ಪರೀಕ್ಷೆ ಮಾಡಲಾಗಿದ್ದು, ಕೊರೋನಾ ದೃಢಪಟ್ಟಿದೆ. 

ವೈದ್ಯರ ಸಲಹೆ ಮೇರೆಗೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಬಳೂರಿನ ಅಪೋಲೊ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. 

ಕೋವಿಡ್‌ ಕಾಟ: ವಿದ್ಯಾಗಮ ಶಿಕ್ಷಕರ ಕೊರೋನಾ ‘ಕಣ್ಣೀರ ಕತೆ’ ..

ಈಗಾಗಲೇ ರಾಜ್ಯದ ಅನೇಕ ರಾಜಕಾರಣಿಗಳಿಗೆ ಕೊರೋನಾ ಸೋಂಕು ತಗುಲಿ ಗುಣಮುಖರಾಗಿದ್ದಾರೆ. ಇದೀಗ ಕಾಗೋಡು ತಿಮ್ಮಪ್ಪ ಅವರಿಗೂ ಸೋಂಕು ದೃಢಪಟ್ಟಿದೆ. 

ಈಗಾಗಲೇ ಲಕ್ಷಾಂತರ ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಸಾವಿರಾರು ಮಂದಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.